ರಾಜ್ಯ

ಮತ್ತೆ ೩ ದಿನ ಚನ್ನಪಟ್ಟಣ ಕ್ಷೇತ್ರದಲ್ಲಿ ಡಿ.ಕೆ ಶಿವಕುಮಾರ್ ಪ್ರವಾಸ

ರಾಮನಗರ : ಮುಖ್ಯಮಂತ್ರಿ ಹೆಚ್‌ ಡಿ ಕುಮಾರಸ್ವಾಮಿ ರಾಜೀನಾಮೆ ಬಳಿಕ ಚನ್ನಪಟ್ಟಣ ವಿಧಾನಸಭೆಗೆ ಉಪಚುನಾವಣೆ ನಡೆಯಲಿದೆ. ಈಗಾಗಿ ಈ ಕ್ಷೇತ್ರವನ್ನ ಹೇಗಾದ್ರೂ ಮಾಡಿ ತಮ್ಮ ವಶಕ್ಕೆ ಪಡೆದುಕೊಳ್ಳಬೇಕು ಅಂತ ಕಾಂಗ್ರೆಸ್‌ ಇನ್ನಿಲ್ಲದ ಕಸರತ್ತು ನಡೆಸುತ್ತಿದೆ.

ಅಲ್ಲದೆ ಈ ಚುನಾವಣೆಯನ್ನ ಫುಲ್‌ ಸೀರಿಯಸ್‌ ಆಗಿ ಡಿಕೆ ಶಿವಕುಮಾರ್‌ ತೆಗೆದುಕೊಂಡಂತೆ ಕಾಣುತ್ತಿದ್ದು, ಮತ್ತೆ ಚನ್ನಪಟ್ಟಣ ಪ್ರವಾಸವನ್ನು ಮುಂದುವರೆಸಿದ್ದಾರೆ. ಈಗಾಗಲೇ ಚನ್ನಪಟ್ಟಣ ಕ್ಷೇತ್ರದಲ್ಲಿ ಮೂರು ಬಾರಿ ಕಾರ್ಯಕ್ರಮಗಳನ್ನ ನಡೆಸಿ ಯಶ್ವಸಿಗೊಳಿಸಿದ್ದಾರೆ. ಹೀಗಿದ್ದರೂ ಸಹ   ಜುಲೈ ೧ ರಿಂದ ಮತ್ತೆ ಮೂರು ದಿನಗಳ ಕಾಲ ಪ್ರವಾಸ ಕೈಗೊಂಡಿದ್ದಾರೆ.

ಜುಲೈ 1 ರಂದು ಭೂಹಳ್ಳಿ, ವಿರಾಪಿಕ್ಷಿಪುರ ಗ್ರಾಮಕ್ಕೆ ಭೇಟಿ ಮತ್ತು ಜುಲೈ-2‌ ರಂದು ಮಳೂರು, ಹೊಂಗನೂರಿಗೆ ಭೇಟಿ ನೀಡಲಿದ್ದಾರೆ. ಅಲ್ಲದೆ  ಜುಲೈ-3‌ರಂದು ಚನ್ನಪಟ್ಟಣ ಟೌನ್ ನಲ್ಲಿ ಎರಡು ಕಡೆ ಕಾರ್ಯಕ್ರಮ ಬಳಿಕ ಜನಸ್ಪಂದನ ಸಭೆ ಕೂಡ ನಡೆಸಲಿದ್ದಾರೆ

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಮುಡಾ ಕಚೇರಿ ಮೇಲೆ ಇ.ಡಿ.ದಾಳಿ: ಸಿಎಂ ಸಿದ್ದರಾಮಯ್ಯ ಫಸ್ಟ್‌ ರಿಯಾಕ್ಷನ್‌

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…

3 mins ago

ಮುಡಾ ಪ್ರಕರಣ: ಮುಡಾ ಕಚೇರಿಗಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕ ಫೈಲ್‌: ಶ್ರೀವತ್ಸ

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈಲ್‌ಗಳು ಮುಡಾ ಕಚೇರಿಯಲ್ಲಿರುವುದಕ್ಕಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕವಾಗಿವೆ ಎಂದು ಶಾಸಕ ಟಿ.ಎಸ್‌.ಶ್ರೀವತ್ಸ…

2 hours ago

ಮುಡಾ ಕಚೇರಿ ಮೇಲೆ ಇಡಿ ದಾಳಿ: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ

ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…

3 hours ago

ಮುಡಾ ಕಚೇರಿಯ ಮೇಲೆ ಇಡಿ ದಾಳಿ ದುರುದ್ದೇಶಪೂರ್ವಕ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್‌.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…

4 hours ago

ಮುಡಾ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಮುಡಾ ಕೇಸ್‌ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…

4 hours ago

ಭವಾನಿ ರೇವಣ್ಣಗೆ ಬಿಗ್‌ ರಿಲೀಫ್:‌ ಹೈಕೋರ್ಟ್‌ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌

ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್‌ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್‌ಐಟಿ…

4 hours ago