ಬೆಂಗಳೂರು: ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿಗೆ ಹಚ್ಚು ಹಿಡಿದಿದೆ ಹಾಗಾಗಿ ಅವರು ಇಲ್ಲ ಸಲ್ಲದ ಸುಳ್ಳು ಆರೋಪಗಳನ್ನು ಮಾಡುತ್ತಾ ಬರುತ್ತಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.
ನಗರದಲ್ಲಿ ಶುಕ್ರವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೆಲವರಿಗೆ ನನ್ನನ್ನು ನೆನೆಸಿಕೊಳ್ಳದಿದ್ದರೇ ನಿದ್ದೆಯೂ ಬರುವುದಿಲ್ಲ, ತಲೆಯೂ ಓಡುವುದಿಲ್ಲ ಎಂದು ವ್ಯಂಗ್ಯವಾಡಿದ್ದಾರೆ.
ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಸಿಲುಕಿಸಲು ಉಪಮುಖ್ಯಮಂತ್ರಿ ಮಾಡಿರುವ ಕುತಂತ್ರ ಇದಾಗಿದೆ. ಆಗ ಸಿಡಿ ಈಗ ಮುಡಾ ಫ್ಯಾಕ್ಟರಿ ಮಾಹಿತಿ ಹೊಬರುತ್ತಿದೆ ಎಂದು ಆರೋಪ ಮಾಡಿದ್ದರು. ಈ ಬಗ್ಗೆ ಮಾತನಾಡಿದ ಡಿಕೆ ಶಿವಕುಮಾರ್, ಎಚ್‌ಡಿ ಕುಮಾರಸ್ವಾಮಿಗೆ ಹುಚ್ಚು ಹಿಡಿದಿರುವ ಕಾರಣ ನನ್ನ ಮೇಲೆ ಸುಳ್ಳು ಆರೋಪ ಮಾಡುತ್ತಿದ್ದಾರೆ. ಅವರು ಬಾಯಿಗೆ ಬಂದಂತೆ ಮಾತನಾಡುತ್ತಿರುವುದು ಸಂತೋಷ ಆದರೆ ಅವರು ಮಾಡುತ್ತಿರುವ ಆರೋಪಗಳೆಲ್ಲಾ ಆಧಾರ ರಹಿತ ಎಂದು ಹೇಳಿದರು.





