Mysore
25
broken clouds

Social Media

ಶನಿವಾರ, 12 ಜುಲೈ 2025
Light
Dark

ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ: ಸಚಿವರಿಗೆ ಡಿಸಿಎಂ ಮನವಿ

ಬೆಂಗಳೂರು: ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ, ಜನರ ಕಷ್ಟಗಳನ್ನು ಆಲಿಸುವಂತೆ ಸಚಿವರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಸೂಚನೆ ನೀಡಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಈ ವರ್ಷ ಭಾರೀ ಮಳೆಯಾಗುತ್ತಿದೆ. ಪ್ರವಾಹದಿಂದ ರಾಜ್ಯದ ನದಿಗಳು ಉಕ್ಕಿ ಹರಿಯುತ್ತಿದ್ದು, ಬಹುತೇಕ ಜಲಾಶಯಗಳು ಸಂಪೂರ್ಣ ಭರ್ತಿಯಾಗಿವೆ. ಜಲಾಶಯಗಳು ಭರ್ತಿಯಾದ ಪರಿಣಾಮ ನೀರಿನ ಹೊರಹರಿವು ಹೆಚ್ಚಾಗಿ ನೆರೆ ಪರಿಸ್ಥಿತಿ ಎದುರಾಗಿದೆ. ನದಿ ಪಾತ್ರದ ಜನ, ಜಾನುವಾರು, ಆಸ್ತಿ, ಬೆಳೆ ಹಾನಿ ಬಗ್ಗೆ ಎಲ್ಲೆಡೆ ವರದಿಯಾಗುತ್ತಿದೆ. ಇಂತಹ ಕಷ್ಟದ ಸಮಯದಲ್ಲಿ ಎಲ್ಲರೂ ಜನರ ಜೊತೆ ನಿಲ್ಲಬೇಕು. ಇದು ನಮ್ಮ ಸರ್ಕಾರದ ಆದ್ಯ ಕರ್ತವ್ಯ ಎಂದರು.

ಸಚಿವರು ತಮ್ಮ ಕ್ಷೇತ್ರದ ವ್ಯಾಪ್ತಿ ಹಾಗೂ ಇತರೇ ಪ್ರವಾಹ ಪೀಡಿತ ಪ್ರದೇಶಗಳ ಶಾಸಕರ ಜೊತೆ ಸಂಪರ್ಕದಿಂದ ಇರಬೇಕು. ಶಾಸಕರ ಜೊತೆ ಸ್ಥಳಕ್ಕೆ ಭೇಟಿಕೊಟ್ಟು, ಸಂತ್ರಸ್ತರ ಅಹವಾಲುಗಳನ್ನು ಸ್ವೀಕರಿಸಬೇಕು.

ದೇವರ ಕೃಪೆಯಿಂದ ಈ ಬಾರಿ ಧಾರಾಕಾರ ಮಳೆಯಾಗಿದೆ. ಆದರೆ ಮಳೆಯಿಂದ ಉಂಟಾಗಿರುವ ಅವಘಡಗಳನ್ನು ನಾವು ಸರಿಮಾಡಬೇಕಿದೆ. ಹೀಗಾಗಿ ನಾವೆಲ್ಲಾ ಜನರ ಜೊತೆ ನಿಲ್ಲೋಣ ಎಂದು ಕರೆಕೊಟ್ಟಿದ್ದಾರೆ.

Tags:
error: Content is protected !!