ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಎನ್ನಲಾದ ಅಶ್ಲೀಲ ವಿಡಿಯೋಗಳು ವೈರಲ್ ಆದ ಬೆನ್ನಲೇ ಇದೀಗ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಫೋಟೋಗೆ ಬೇರೊಂದು ಅಶ್ಲೀಲ ಚಿತ್ರ ಜೋಡಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡಲಾಗಿದೆ. ಈ ಬಗ್ಗೆ ಕೆಪಿಸಿಸಿ ಕಾನೂನು ಘಟಕ ಪೊಲೀಸರಿಗೆ ದೂರು ನೀಡಿದೆ.
ಅಶ್ಲೀಲ ಚಿತ್ರವೊಂದಕ್ಕೆ ಡಿ.ಕೆ ಶಿವಕುಮಾರ್ ಫೋಟೋ ಮಾರ್ಫಿಂಗ್ ಮಾಡಲಾಗಿದೆ ಎಂದು ಆರೋಪಿಸಿ ಸಂತೋಷ್, ರಾಜೇಶ್, ಕೇಸರಿ ಸಾಮ್ರಾಟ್ ಅವರ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆಗೆ ದೂರು ದಾಖಲಿಸಿದೆ.
ಡಿಕೆ ಶಿವಕುಮಾರ್ ಮುಖ ಜೋಡಣೆ ಮಾಡಿರುವ ಅಸಲಿ ಚಿತ್ರ ಬಿಜೆಪಿ ಮುಖಂಡನದ್ದಾಗಿದ್ದು, ಇದೀಗ ಆ ಎಡಿಟ್ ಚಿತ್ರವನ್ನು ಸಾಮಾಜಿಕ ಜಾಲತಾಣ ಫೇಸ್‌ಬುಕ್, ಯುಟ್ಯೂಬ್, ಎಕ್ಸ್ ಖಾತೆಯಲ್ಲಿ ಹರಿಬಿಡಲಾಗಿದೆ. ಈ ಹಿನ್ನೆಲೆ ಆರೋಪಿಗಳ ವಿರುದ್ದ ಕಾನೂನು ಕ್ರಮಕೈಗೊಳ್ಳಬೇಕು ಎಂದು ಕೆಪಿಸಿಸಿ ಕಾನೂನು ಘಟಕ ದೂರು ಸಲ್ಲಿಸಿತ್ತು. ಈ ದೂರಿನ ಮೇರೆಗೆ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸರು ಸಂತೋಷ್, ರಾಜೇಶ್, ಕೇಸರಿ ಸಾಮ್ರಾಟ್ ವಿರುದ್ಧ ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.
ಬೆಂಗಳೂರು: 9823 ರೂ ಕೋಟಿ ಮೌಲ್ಯದ 9 ಕೈಗಾರಿಕಾ ಯೋಜನೆಗಳಿಗೆ ರಾಜ್ಯ ಸರ್ಕಾರ ಅನುಮೋದನೆ ನೀಡಿದೆ. ಈ ಹಿನ್ನೆಲೆಯಲ್ಲಿ ಸರಿ…
ಮೈಸೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್‌ಗೆ ಜಾಮೀನು ಸಿಕ್ಕಿರುವ ಹಿನ್ನೆಲೆಯಲ್ಲಿ ವಿಜಯಲಕ್ಷ್ಮೀ ದರ್ಶನ್ ಅವರು ನಾಡಿನ…
ನವದೆಹಲಿ: ಇನ್ನು ಮುಂದೆ ಐದು ಹಾಗೂ ಎಂಟನೇ ತರಗತಿಗಳಲ್ಲೂ ವಿದ್ಯಾರ್ಥಿಗಳನ್ನು ಫೇಲ್ ಮಾಡಬಹುದು ಎಂಬ ಹೊಸ ತಿದ್ದುಪಡಿಯನ್ನು ಕೇಂದ್ರ ಸರ್ಕಾರ…
ಮೈಸೂರು: ಸಿ.ಟಿ.ರವಿ ತಪ್ಪು ಮಾಡಿದ್ದರೆ ಸಭಾಪತಿಗಳು ಶಿಕ್ಷೆಯ ಬಗ್ಗೆ ತೀರ್ಮಾನ ಮಾಡಬೇಕು. ಆದರೆ ರಾಜ್ಯದಲ್ಲಿ ಆ ದಿನ ಸಿ.ಟಿ.ರವಿ ಅವರನ್ನು…
ಥಾಣೆ: ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಮಹಾರಾಷ್ಟ್ರದ ಥಾಣೆಯ ಖಾಸಗಿ ಆಸ್ಪತ್ರೆಗೆ…
ಬೆಂಗಳೂರು: ರಾಜ್ಯದಲ್ಲಿ ಬಾಣಂತಿಯರು ಸರಣಿ ಸಾವನ್ನಪ್ಪುತ್ತಿದ್ದು, ಕೂಡಲೇ ರಾಜ್ಯ ಸರ್ಕಾರ ಉನ್ನತ ತನಿಖೆಗೆ ವಹಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ…