ನವದೆಹಲಿ: ಬುಧವಾರ (ಜು.೩೧) ನವದೆಹಲಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಭೇಟಿಯಾಗಿದ್ದಾರೆ. ಭೇಟಿ ವೇಳೆ ಮೇಕೆದಾಟು ಯೋಜನೆ ಬಗ್ಗೆ ಚರ್ಚಿಸಿರುವುದಾಗಿ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಕರ್ನಾಟಕ ಹಾಗೂ ತಮಿಳುನಾಡು ರಾಜ್ಯಗಳೇ ಒಟ್ಟಾಗಿ ಚರ್ಚಿಸುವ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳುವಂತೆ ಪ್ರಧಾನಿ ಮೋದಿ ಸಲಹೆ ನೀಡಿರುವುದಾಗಿ ಡಿಕೆ ಹೇಳಿದ್ದಾರೆ.
ಪ್ರಧಾನಿ ಜತೆಗಿನ ಸಭೆ ಬಳಿಕ ಮಾತನಾಡಿದ ಡಿಕೆಶಿ, ಮೇಕೆದಾಟು ವಿಚಾರಕ್ಕೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ಮಧ್ಯಸ್ಥಿಕೆ ವಹಿಸಿ ಮಾತನಾಡುವಂತೆ ಮನವಿ ಕೋರಿದ್ದಾಗಿ ಹೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಪಿಎಂ ಮೋದಿ ಅವರು, ನಿಮ್ಮಲ್ಲಿಯೇ ಬಗೆಹರಿಸಿಕೊಳ್ಳುವಂತೆ ಸೂಚನೆ ನೀಡಿರುವುದಾಗಿ ಹೇಳಿದ್ದಾರೆ ಎಂದು ಡಿಕೆ ಸ್ಪಷ್ಟಪಡಿಸಿದರು.
ಇನ್ನು ಮೇಕೆದಾಟು ಜಲಾಶಯ ನಿರ್ಮಾಣ ಕುರಿತಂತೆ, ಜುಲೈನಲ್ಲಿ ಹೆಚ್ಚುವರಿ ನೀರನ್ನು ತಮಿಳುನಾಡಿಗೆ ಬಿಟ್ಟಿರುವ ಬಗ್ಗೆ, ಮಹಾದಾಯಿ, ಭದ್ರ ಮೇಲ್ದಂಡೆ ಯೋಜನೆಗಳ ವಿಷಯಗಳಿಗೆ ಸಂಬಂಧಿಸಿದಂತೆ ಚರ್ಚಿಸಲಾಗಿದೆ ಎಂಬ ಬಗ್ಗೆ ವಿವರಿಸಿದರು.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…