ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸುತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಹಾಗೂ ಲೈಂಗಿಕ ಕಿರುಕುಳ, ಸಂತ್ರಸ್ತೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಎಚ್‌ಡಿ ರೇವಣ್ಣ ಬಂಧನ ವಿರೋಧಿಸಿ ನಿನ್ನೆ (ಮೇ.7) ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರು ತುರ್ತು ಪತ್ರಿಕಾಗೋಷ್ಠಿ ನಡೆಸಿ ಈ ಎಲ್ಲಾ ಪ್ರಕರಣಗಳ ಪ್ರಮುಖ ರೂವಾರಿ ರಾಜ್ಯದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಆಗಿದ್ದು, ಅವರನ್ನು ಅಮಾನತುಗೊಳಿಸುವಂತೆ ಕಟುವಾಗಿ ಟೀಕಿಸಿದ್ದರು.
ಈ ಪ್ರಕರಣ ಸಂಬಂಧ ಟ್ವೀಟ್ ಮೂಲಕ ಡಿಸಿಎಂ ಡಿಕೆ ಶಿವಕುಮಾರ್ ಮಾತನಾಡಿದ್ದು, ಎಚ್‌ಡಿಕೆ ಆರೋಪಗಳನ್ನೆಲ್ಲಾ ಅಲ್ಲೆಗೆಳೆದಿದ್ದಾರೆ. ಪೆನ್‌ಡ್ರೈವ್ ಪ್ರಕರಣದ ಹಿಂದಿರುವುದು ಬ್ಲಾಕ್‌ಮೇಲ್ ಕಿಂಗ್ ಕುಮಾರಸ್ವಾಮಿ ಎಂದು ಟೀಕಿಸಿದ್ದಾರೆ.
ಇನ್ನು ಈ ಪ್ರಕರಣದಲ್ಲಿ ಪದೇ ಪದೇ ನನ್ನ ಹೆಸರು ಬಳಕೆ ಮಾಡುತ್ತಿದ್ದಾರೆ. ನನ್ನ ಹೆಸರು ಎತ್ತದಿದ್ದರೇ ಅವರಿಗೆ ನಿದ್ರೆ ಬರುವುದಿಲ್ಲ. ಇಲ್ಲ ಸಲ್ಲದ ಆರೋಪ ಮಾಡಿ ನನ್ನ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಟ್ವೀಟ್‌ನಲ್ಲೇನಿದೆ?
ಕುಮಾರಸ್ವಾಮಿ ಅವರು ಹಿಟ್ ಅಂಡ್ ರನ್ ಗಿರಾಕಿ ಅನ್ನೋದು ರಾಜ್ಯದ ಜನತೆಗೆ ಚೆನ್ನಾಗಿ ಗೊತ್ತಿದೆ. ಅವರು ಈ ಹಿಂದಿನಿಂದಲೂ ಮಾಡಿದ ಆರೋಪಗಳು ಯಾವುದೂ ಸಾಬೀತಾಗಿಲ್ಲ, ಪ್ರಜ್ವಲ್ ರೇವಣ್ಣ ಸೆಕ್ಸ್ ಗೇಟ್ ಪ್ರಕರಣದಲ್ಲಿ ನನ್ನ ಹೆಸರು ಮುನ್ನಲೆಗೆ ತಂದರೆ ಇಡೀ ರಾಜ್ಯದ ಗಮನ ಸೆಳೆಯಬಹುದು ಎನ್ನುವ ಕಾರಣಕ್ಕೆ ಅವರು ಪದೇ ಪದೇ ನನ್ನ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದ್ದಾರೆ.
ಈ ಕೇಸಿನ ಹಿಂದೆ ಇರುವುದು ಬ್ಲಾಕ್ ಮೇಲ್ ಕಿಂಗ್ ಕುಮಾರಸ್ವಾಮಿ. ರಾಜಕಾರಣಿಗಳು, ಅಧಿಕಾರಿಗಳನ್ನು ಬ್ಲಾಕ್ ಮೇಲ್ ಮಾಡುವುದೇ ಅವರ ಕೆಲಸ. ಅವರಿಗೆ ದಿನಕ್ಕೊಮ್ಮೆ ನನ್ನ ಹೆಸರು ಎತ್ತದಿದ್ದರೆ ನಿದ್ದೆ ಬರಲ್ಲ. ಈಗಲೂ ನಾನು ಹೇಳುತ್ತಿದ್ದೇನೆ ಈ ಪ್ರಕರಣದ ಕಥಾನಾಯಕ, ಡೈರೆಕ್ಟರ್, ಪ್ರೋಡ್ಯೂಸರ್ ಎಲ್ಲಾ ಕುಮಾರಸ್ವಾಮಿ ಅವರೇ.
ನಮ್ಮದು ರೇವಣ್ಣ ಅವರದು ಬೇರೆ ಕುಟುಂಬ ಅಂತ ಹಿಂದೆ ಅವರೇ ಹೇಳಿದ್ದರು. ಉಪ್ಪು ತಿಂದವನು ನೀರು ಕುಡಿಯಬೇಕು ಅಂತ ಕೂಡ ಹೇಳಿದ್ರು, ಈಗ ಯಾಕೆ ಮತ್ತೆ ಹಿಟ್ ಅಂಡ್ ರನ್ ಮಾಡ್ತಿದ್ದಾರೆ? ಪ್ರಕರಣ ಇನ್ನೂ ತನಿಖೆ ಹಂತದಲ್ಲಿದೆ, ಈಗಲೇ ತೀರ್ಪು ಕೊಡೋಕೆ ಕುಮಾರಸ್ವಾಮಿ ಅವರೇನು ಲಾಯರೋ? ಜಡ್ಜೋ? ಚರ್ಚೆ ಮಾಡಲು ಇನ್ನೂ ಟೈಮ್ ಇದೆ, ವಿಧಾನಸಭೆ ಅಧಿವೇಶನ ಇದೆ, ಎಲ್ಲಾ ತೆಗೆದುಕೊಂಡು ಬರಲಿ ಚರ್ಚೆ ಮಾಡೋಣ ಎಂದು ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
ಬೆಂಗಳೂರು: ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಇಂದು ಕೂಡ 60 ಇಂಡಿಗೋ ವಿಮಾನಗಳ ಹಾರಾಟ ರದ್ದಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿಯಲ್ಲಿರುವ ಕೆಂಪೇಗೌಡ…
ನಂಜನಗೂಡಿನ ಸದ್ವೈದ್ಯ ಶಾಲಾ ಸಂಸ್ಥಾಪಕರಾಗಿದ್ದ ಬಿ.ವಿ.ಪಂಡಿತರು ಆಯುರ್ವೇದ ಉತ್ಪನ್ನಗಳನ್ನು ರೂಪಿಸಿದ ಹಿರಿಮೆ ಹೊಂದಿದ್ದಾರೆ. ದಂತಧಾವನ ಚೂರ್ಣ (ನಂಜನಗೂಡು ಹಲ್ಲು ಪುಡಿ)…
ಮೈಸೂರಿನಲ್ಲಿ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕ ನಿರ್ಮಾಣ ಹಾಗೂ ಬೇಲೂರಿನಲ್ಲಿ ವೃಕ್ಷಮಾತೆ ಸಾಲು ಮರದ ತಿಮ್ಮಕ್ಕ ಅವರ ವಸ್ತು ಸಂಗ್ರಹಾಲಯ…
ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ಇತಿಹಾಸ ಪ್ರಸಿದ್ಧ ಕ್ಷೇತ್ರ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಖಾಸಗಿ ವಾಹನಗಳಿಗೆ ಪ್ರವೇಶವಿರುವುದಿಲ್ಲ. ರಾಜ್ಯ ರಸ್ತೆ ಸಾರಿಗೆ ನಿಗಮದ…
ಬೆಳಗಾವಿಯಲ್ಲಿ ವಿಧಾನಸಭಾ ಅಧಿವೇಶನ ಆರಂಭವಾಗಿದೆ. ಇತ್ತೀಚಿನ ವರ್ಷಗಳಲ್ಲಿ ಸದನದಲ್ಲಿ ಯಾವುದೇ ವಿಷಯ, ಜನರ ಸಮಸ್ಯೆ, ಮಸೂದೆಗಳ ಬಗ್ಗೆ ರಚನಾತ್ಮಕ ಚರ್ಚೆ…
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಡೆವಿಲ್ ಚಿತ್ರ ಇಂದು ರಾಜ್ಯಾದ್ಯಂತ ರಿಲೀಸ್ ಆಗಿದ್ದು, ಅಭಿಮಾನಿಗಳ ಸಂಭ್ರಮಾಚರಣೆ ಮುಗಿಲು ಮುಟ್ಟಿದೆ.…