ರಾಜ್ಯ

ಒಂದು ರೌಂಡ್‌ ಸೆಟಲ್‌ಮೆಂಟ್‌ ಆಗಿದೆ; ಈಶ್ವರಪ್ಪಗೆ ಟಾಂಗ್‌ ಕೊಟ್ಟ ಡಿಕೆಶಿ!

ಪ್ರತ್ಯೇಕ ರಾಷ್ಟ್ರದ ಕುರಿತು ಡಿಕೆ ಸುರೇಶ್‌ ನೀಡಿದ ಹೇಳಿಕೆಗೆ ಬಿಜೆಪಿಯ ನಾಯಕರು ವಿವಿಧ ಪ್ರತಿಕ್ರಿಯೆಗಳನ್ನು ನೀಡಿದ್ದು, ಮಾಜಿ ಸಚಿವ ಕೆಎಸ್‌ ಈಶ್ವರಪ್ಪ ಇಂತಹ ಹೇಳಿಕೆ ನೀಡುವವರನ್ನು ಗುಂಡಿಕ್ಕಿ ಕೊಲ್ಲಬೇಕು ಎಂದು ಆಕ್ರೋಶ ಹೊರಹಾಕಿದ್ದರು.

ಈ ಕುರಿತು ಇಂದು ( ಫೆಬ್ರವರಿ 10 ) ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ್ದು, ಕೆಎಸ್‌ ಈಶ್ವರಪ್ಪನ ಗುಂಡಿನ ಬೆದರಿಕೆಗೆ ಹೆದರುವ ರಕ್ತ ಡಿಕೆ ಸುರೇಶ್‌ ಮೈಯಲ್ಲಿ ಹರಿಯುತ್ತಿಲ್ಲ, ನಮ್ಮ ಸುದ್ದಿಗೆ ಬಂದವರಿಗೆ ಒಂದೇ ಹಂತದಲ್ಲಿ ಸೆಟಲ್‌ಮೆಂಟ್‌ ಆಗಿದೆ ಎಂದು ಹೇಳಿಕೆ ನೀಡಿದ್ದಾರೆ.

“ಈಶ್ವರಪ್ಪ ಕ್ಷಮೆ ಕೇಳಲಿ ಅಂತ ನಾನು ಹೇಳುತ್ತಿಲ್ಲ. ಅವರ ಒಂದು ರೌಂಡ್‌ ಸೆಟಲ್‌ಮೆಂಟ್‌ ಆಗಿದೆ. ಅಸೆಂಬ್ಲಿಯಲ್ಲಿ ಏನೋ ಮಾತನಾಡಿದ್ದರು. ನಮ್ಮ ತಂದೆಯನ್ನು ನೆನಪಿಸಿಕೊಂಡಿದ್ರು. ಇವಾಗ ಎಲ್ಲಿದ್ದಾರೆ ಈಶ್ವರಪ್ಪ? ನಮ್ಮ ಸುದ್ದಿಗೆ ಯಾರಾರು ಬಂದಿದ್ದಾರೋ ಅವರದ್ದೆಲ್ಲಾ ಒಂದೊಂದೇ ಹಂತದಲ್ಲಿ ಸೆಟಲ್‌ಮೆಂಟ್‌ ಆಗ್ತಿದೆ. ಗುಂಡಿಕ್ಕಿ ಕೊಲ್ಲಬೇಕು ಅಂತಾರೆ, ಕೊಲ್ಲಲಿ ಬಿಡಿ. ಈ ಬೆದರಿಕೆಗೆಲ್ಲಾ ಹೆದರೋ ರಕ್ತ ಅಲ್ಲ ಡಿಕೆ ಸುರೇಶ್‌ ಅವರದ್ದು” ಎಂದು ಹೇಳಿದರು.

andolana

Recent Posts

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಏಪ್ರಿಲ್‌ 3 ಶುಕ್ರವಾರ

1 min ago

ಕೆಕೆಆರ್‌ಗೆ ಮುಖಭಂಗ ; ಮೊದಲ ಗೆಲುವು ದಾಖಲಿಸಿದ ಎಸ್‌ಆರ್‌ಎಚ್‌

ಕೋಲ್ಕತ್ತಾ : ಹೆನ್ರಿಚ್ ಕ್ಲಾಸೆನ್ ಅರ್ಧಶತಕದಾಟ ಹಾಗೂ ನಿತೀಶ್ ಕುಮಾರ್ ರೆಡ್ಡಿ ಅವರ ಆಲ್‌ರೌಂಡರ್ ಆಟದ ನೆರವಿನಿಂದ ಅತಿಥೇಯ ಕೋಲ್ಕತ್ತಾ…

9 hours ago

ಮೈಸೂರು ಫಾಲ್ಕನ್ ಟೈರ್ಸ್‌ನ ಮಾಜಿ ಮಾಲೀಕ ರುಹಿಯಾ ಬಂಧನ

315 ಕೋಟಿ ಸೈಬರ್ ವಂಚನೆ ಪ್ರಕರಣದಲ್ಲಿ ಬಂಧನ ಕೋಲ್ಕತ್ತಾ : ಶೆಲ್‌ ಕಂಪನಿಗಳು ಮತ್ತು ಕ್ರಿಪ್ಟೋಕರೆನ್ಸಿ ಆಧಾರಿತ ಹಣ ವರ್ಗಾವಣೆಯ…

10 hours ago

ಹೊರ್ಮುಜ್ ಕುರಿತು ಬ್ರಿಟನ್ ನೇತೃತ್ವದ ಸಭೆಯಲ್ಲಿ ಭಾರತ ಭಾಗವಹಿಸಲಿದೆ

ಲಂಡನ್‌ : ಇರಾನ್-ಅಮೆರಿಕ-ಇಸ್ರೇಲ್ ಸಂಘರ್ಷದ ನಡುವೆ ಫೆಬ್ರವರಿ 28ರಿಂದ ಮುಚ್ಚಲ್ಪಟ್ಟಿರುವ ಹೊರ್ಮುಜ್ ಜಲಸಂಧಿಯನ್ನು ಮತ್ತೆ ತೆರೆಯುವ ಬಗ್ಗೆ ಚರ್ಚಿಸಲು ಬ್ರಿಟನ್…

10 hours ago

ಸಂವಿಧಾನ ಬದಲಾವಣೆ ಅಸಾಧ್ಯ : ಮುಖ್ಯಮಂತ್ರಿ ಚಂದ್ರು

ಮೈಸೂರು : ಕೆಲವರು ಸಂವಿಧಾನ ಬದಲಿಸುವ ಮಾತನಾಡುತ್ತಾರೆ, ಖಂಡಿತ ಇದು ಅಸಾಧ್ಯ. ಸಂವಿಧಾನಕ್ಕೆ ತಿದ್ದುಪಡಿ ಮಾಡಬಹುದೇ ಹೊರತು ಮೂಲ ತತ್ವಗಳನ್ನು…

11 hours ago

KSOU | ಕುಲಪತಿ ಹುದ್ದೆಗೆ ಅರ್ಜಿ ಆಹ್ವಾನ

ಮೈಸೂರು : ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ (KSOU) ಕುಲಪತಿ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ…

12 hours ago