ಬೆಂಗಳೂರು: ನಮ್ಮ ಯೋಧರು ಪ್ರಾಣ ಪಣಕ್ಕಿಟ್ಟು ಭಯೋತ್ಪಾದನೆ ವಿರುದ್ಧ ಹೋರಾಡುತ್ತಿರುವಾಗ ನನ್ನ ಜನ್ಮದಿನಾಚರಣೆ ಮಾಡುವುದು ಬೇಡ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೇ.15ರಂದು ಯಾರೂ ನನ್ನ ಜನ್ಮದಿನಾಚರಣೆ ಮಾಡುವುದು ಬೇಡ. ನನ್ನ ಜನ್ಮ ದಿನದ ಸಂದರ್ಭದಲ್ಲಿ ನಾನು ಊರಿನಲ್ಲಿ ಇರುವುದಿಲ್ಲ. ಅಂದು ನನ್ನನ್ನು ಭೇಟಿ ಮಾಡಲು ಯಾರೂ ನನ್ನ ನಿವಾಸ, ಕಚೇರಿಗೆ ಬರುವುದು ಬೇಡ. ಯಾರೂ ಕೂಡ ಅನ್ಯತಾ ಭಾವಿಸಬಾರದು. ಪರಿಸ್ಥಿತಿಯನ್ನು ಅರ್ಥ ಮಾಡಿಕೊಂಡು ಸಹಕರಿಸಬೇಕು ಎಂದು ತಿಳಿಸಿದ್ದಾರೆ.
ಇದನ್ನೂ ಓದಿ:- ಪಾಕಿಸ್ತಾನ ಒಂದು ಖಾಲಿ ಡಬ್ಬ ಇದ್ದಂಗೆ: ಸಚಿವ ಜಮೀರ್ ಅಹಮ್ಮದ್ ಖಾನ್
ಇನ್ನು ಮುಂದುವರಿದು ಮಾತನಾಡಿದ ಅವರು, ನನ್ನ ಜನ್ಮದಿನದ ಶುಭಕೋರುವ ಫ್ಲೆಕ್ಸ್, ಬ್ಯಾನರ್‌ಗಳನ್ನು ಹಾಕುವುದಾಗಲಿ, ಜಾಹೀರಾತುಗಳನ್ನು ನೀಡುವುದಾಗಲಿ ಮಾಡಬಾರದು ಎಂದು ಅಭಿಮಾನಿಗಳು ಹಾಗೂ ಪಕ್ಷದ ನಾಯಕರು, ಕಾರ್ಯಕರ್ತರಲ್ಲಿ ಮನವಿ ಮಾಡಿದರು.
ದೇಶದ ಐಕ್ಯತೆ, ಸಾರ್ವಭೌಮತೆ ರಕ್ಷಣೆಗೆ ನಾವು ನಮ್ಮ ಯೋಧರ ಜೊತೆ ನಿಲ್ಲಬೇಕು. ಅವರು ಸುರಕ್ಷಿತವಾಗಿ ಈ ಹೋರಾಟವನ್ನು ಗೆದ್ದು ಬರಲಿ ಎಂದು ದೇವರಲ್ಲಿ ಪ್ರಾರ್ಥಿಸೋಣ ಎಂದು ತಿಳಿಸಿದರು.
ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಗ್ಯದಲ್ಲಿ ತುಸು ಏರುಪೇರು ಆದ ಕಾರಣ, ಇಂದು (ಡಿಸೆಂಬರ್ 17) ವಿಧಾನಸಭೆ ಅಧಿವೇಶನದಲ್ಲಿ…
ನಂಜನಗೂಡು : ದಕ್ಷಿಣ ಕಾಶಿ ಎಂದೇ ಹೆಸರಾಗಿರುವ, ಆದಾಯದಲ್ಲಿ ರಾಜ್ಯದಲ್ಲಿ ಐದನೇ ಸ್ಥಾನದಲ್ಲಿರುವ ನಂಜನಗೂಡು ಶ್ರೀಕಂಠೇಶ್ವರ ದೇವಾಯದಲ್ಲಿ ಲಕ್ಷಾಂತರ ರೂ.…
ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇಥಿಯೋಪಿಯಾದ ಅತ್ಯುನ್ನತ ಪ್ರಶಸ್ತಿ ‘ದಿ ಗ್ರೇಟ್ ಆನರ್ ನಿಶಾನ್ ಆಫ್ ಇಥಿಯೋಪಿಯಾ’…
ಮಂಗಳೂರು : ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವ ಹೂತಿಟ್ಟ ಪ್ರಕರಣದಲ್ಲಿ ವಿಶೇಷ ತನಿಖಾ ತಂಡದಿಂದ ಬಂಧನಕ್ಕೆ ಒಳಗಾದ ಚಿನ್ನಯ್ಯ ಕೊನೆಗೂ…
ಮಂಡ್ಯ : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಯಾವ ಕೈಗಾರಿಕೆಯನ್ನು ತರುವರೋ ತರಲಿ. ಮಳವಳ್ಳಿ ಕ್ಷೇತ್ರದಲ್ಲಿ 400ರಿಂದ 500 ಎಕರೆ…
ಮೈಸೂರು : ನಗರದಲ್ಲಿ ಓವರ್ ಹೆಡ್ (ಮೇಲ್ಬಾಗದ) ವಿದ್ಯುತ್ ಮಾರ್ಗವನ್ನು ತೆರವು ಮಾಡಿ ವಿದೇಶಿ ಮಾದರಿಯಲ್ಲಿ ಭೂಗತಕೇಬಲ್‌ಗಳಾಗಿ ಪರಿವರ್ತಿಸುವ 408…