Mysore
17
clear sky

Social Media

ಶನಿವಾರ, 07 ಫೆಬ್ರವರಿ 2026
Light
Dark

ಮುತ್ತು ರತ್ನಗಳನ್ನೆಲ್ಲಾ ನೀವೇ ಇಟ್ಟುಕೊಳ್ಳಿ: ಬಿಜೆಪಿ ಶಾಸಕರ ಉಚ್ಛಾಟನೆಗೆ ಡಿಕೆಶಿ ಟಾಂಗ್‌

ಬೆಂಗಳೂರು: ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿದ್ದರು ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕರಾದ ಎಸ್.ಟಿ.ಸೋಮಶೇಖರ್‌ ಹಾಗೂ ಶಿವರಾಮ್‌ ಹೆಬ್ಬಾರ್‌ ಅವರನ್ನು ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಛಾಟನೆ ಮಾಡಲಾಗಿದೆ. ಈ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಶಾಕಿಂಗ್‌ ರಿಯಾಕ್ಷನ್‌ ಕೊಟ್ಟಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು, ಇಬ್ಬರು ಶಾಸಕರು ವಿಧಾನಸೌಧದಲ್ಲಿ ಯಾರನ್ನೂ ಅತ್ಯಾಚಾರ ಮಾಡಿಲ್ವಲ್ಲ. ಅವರೇನಾದರೂ ಏಡ್ಸ್‌ ಇಂಜೆಕ್ಷನ್‌ ಚುಚ್ಚಿದ್ರಾ? ಮುತ್ತು ರತ್ನಗಳನ್ನು ಅವರೇ ಮಡಗಿಕೊಳ್ಳಲಿ ಎಂದು ಬಿಜೆಪಿ ನಾಯಕರಿಗೆ ಟಾಂಗ್‌ ನೀಡಿದ್ದಾರೆ.

ಈ ಮೂಲಕ ಅತ್ಯಾಚಾರದ ಆರೋಪ ಎದುರಿಸುತ್ತಿರುವ ಶಾಸಕ ಮುನಿರತ್ನಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಕುಟುಕಿದ್ದು, ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದ್ದಾರೆ.

Tags:
error: Content is protected !!