ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಕಾಲ್ತುಳಿತ ದುರಂತ ನೆನೆದು ಡಿಸಿಎಂ ಡಿ.ಕೆ.ಶಿವಕುಮಾರ್ ಕಣ್ಣೀರಿಟ್ಟಿದ್ದಾರೆ.
ದುರಂತ ನೆನೆದು ಮಾತನಾಡಿದ ಅವರು, ಮೃತಪಟ್ಟವರು ಎಳೆ ವಯಸ್ಸಿನವರು, ನೋವಿನ ಘಟನೆ ಆಗಿದೆ. ನಮ್ಮ ರಾಜ್ಯದಲ್ಲಿ ಇಂತಹ ಘಟನೆ ಆಗುತ್ತದೆ ಎಂದು ನಿರೀಕ್ಷೆ ಕೂಡ ಮಾಡಿರಲಿಲ್ಲ. ಮೃತಪಟ್ಟವರು ಅತ್ಯಂತ ಎಳೆ ವಯಸ್ಸಿನವರು. ಅವರ ಕುಟುಂಬದವರ ಕಣ್ಣೀರು ನೋಡುವುದಕ್ಕೆ ಆಗುತ್ತಿಲ್ಲ. ಘಟನೆಗೆ ಸಂಬಂಧಿಸಿದಂತೆ ವಿರೋಧ ಪಕ್ಷದವರು ರಾಜಕೀಯ ಮಾಡುತ್ತಿದ್ದಾರೆ, ಮಾಡಲಿ ಎಂದರು. ಅವರವರ ಕಾಲದಲ್ಲಿ ಏನೇನಾಗಿದೆ ಎಂದು ಎಲ್ಲರಿಗೂ ಗೊತ್ತಿದೆ. ಎಚ್.ಡಿ.ಕುಮಾರಸ್ವಾಮಿ ಟೀಕೆ ಮಾಡುತ್ತಲೇ ಇರಲಿ ಎಂದರು.





