ಮಂಡ್ಯ: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲು ಸಿದ್ದರಾಮಯ್ಯ ಅವರಷ್ಟೇ ಡಿ.ಕೆ. ಶಿವಕುಮಾರ್ ಅವರೂ ಕಷ್ಟಪಟ್ಟಿದ್ದಾರೆ. ಎಲ್ಲ ಸಂಕಷ್ಟಗಳನ್ನು ಸಮರ್ಥವಾಗಿ ಎದುರಿಸಿ ಕಾಂಗ್ರೆಸ್ ಪಕ್ಷವನ್ನು ಕಟ್ಟಿದ್ದು ಡಿಕೆ ಶಿವಕುಮಾರ್, ಅವರು ಮುಖ್ಯಮಂತ್ರಿಯಾಗಬೇಕೆಂಬುದು ನನ್ನ ಒತ್ತಾಯವಾಗಿದೆ ಎಂದು ವಿಧಾನ ಪರಿಷತ್ ಶಾಸಕ ಮಧು ಜಿ.ಮಾದೇಗೌಡ ಹೇಳಿದರು.
ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಹೆಚ್ಚಿನ ಸ್ಥಾನ ಗಳಿಸಿದರೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ ಎಂದು ಅವರ ಪುತ್ರ, ಮಾಜಿ ಶಾಸಕ ಯತೀಂದ್ರ ಅವರು ಹೇಳಿರುವುದನ್ನು ಕೇಳಿದ್ದೇನೆ. ಅವರ ಹೇಳಿಕೆ ಹಿಂದೆ ಏನು ಅಡಗಿದೆ ಎಂಬುದು ಗೊತ್ತಿಲ್ಲ. ಆದರೆ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಬೇಕು ಎಂಬುದು ನನ್ನ ಒತ್ತಾಯವಾಗಿದೆ ಎಂದು ಇದೇ ವೇಳೆ ತಿಳಿಸಿದರು.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ ನಾಯಕರ ಕೆಲ ನಿರ್ಧಾರ ಹಾಗೂ ಬೇರೆ ಬೇರೆ ರೀತಿಯ ಹಲವು ವಿಚಾರಗಳಿಂದ ತಟಸ್ಥವಾಗುಳಿಯಲು ತೀರ್ಮಾನಿಸಿದ್ದೇನೆ. ಚುನಾವಣೆ ವಿಷಯವಾಗಿ ನಮ್ಮ ನಾಯಕರಾದ ಸಚಿವ ಎನ್. ಚಲುವರಾಯಸ್ವಾಮಿ ಅವರು ಇತ್ತೀಚೆಗೆ ನಡೆಸಿದ ಸಭೆಯಲ್ಲಿ ನಾನು ಭಾಗವಹಿಸಿ, ನಮ್ಮಲ್ಲೇ ಕೆಲ ಗೊಂದಲಗಳಿವೆ. ಅದನ್ನು ಬಗೆಹರಿಸಿ ಎಂದು ತಿಳಿಸಿದ್ದೇನೆ ಎಂದರು.
ಸುಮಲತಾ ಕಾಂಗ್ರೆಸ್‌ಗೆ ಬರುವುದು ಗೊತ್ತಿಲ್ಲ: ಸಂಸದೆ ಸುಮಲತಾ ಅಂಬರೀಶ್ ಅವರು ಕಾಂಗ್ರೆಸ್ ಪಕ್ಷಕ್ಕೆ ಬರುವುದು ನನಗೆ ಗೊತ್ತಿಲ್ಲ, ನಾನೇ ಚುನಾವಣೆಯಲ್ಲಿ ತಟಸ್ಥವಾಗಿರುವುದರಿಂದ ಆ ಬಗ್ಗೆ ನಾನು ಹೇಳಲು ಇಚ್ಚಿಸುವುದಿಲ್ಲ. ತಟಸ್ಥಕ್ಕೆ ಕಾರಣ ಏನೆಂಬುದನ್ನು ಮುಂದಿನ ದಿನಗಳಲ್ಲಿ ತಿಳಿಸುತ್ತೇನೆ ಎಂದು ಹೇಳಿದರು.
ನಾನು ಅಭ್ಯರ್ಥಿಯಲ್ಲ: ಲೋಕಸಭೆ ಚುನಾವಣೆಯ ಅಭ್ಯರ್ಥಿ ನಾನಲ್ಲ, ಸ್ಪರ್ಧಿಸುವುದಾಗಿ ನಾನು ಹೇಳಿಲ್ಲ. ಕಾಂಗ್ರೆಸ್ ಪಕ್ಷದಲ್ಲಿ ಕೆಲ ಗೊಂದಲಗಳಿದ್ದು, ಅವುಗಳನ್ನು ಬಗೆಹರಿಸುವಂತೆ ಜಿಲ್ಲಾ ನಾಯಕರು ಹಾಗೂ ವರಿಷ್ಠರಿಗೆ ತಿಳಿಸಿದ್ದೇನೆ ಎಂದರು.
ಅನಂತ ಕುಮಾರ್ ಹೆಗಡೆಗೆ ತಲೆ ಸರಿಯಿಲ್ಲ: ಸಂಸದ ಅನಂತ ಕುಮಾರ್ ಹೆಗಡೆ ಅವರಿಗೆ ತಲೆ ಸರಿಯಿಲ್ಲ, ಕಳೆದ ಮೂರು ವರ್ಷಗಳಿಂದ ಮನೆಯಲ್ಲೇ ಇದ್ದರು. ಹಾಗಾಗಿ ಅವರು ಏನೇನೋ ಮಾತನಾಡುತ್ತಾರೆ. ಅದಕ್ಕೆಲ್ಲ ಪ್ರಾಮುಖ್ಯತೆ ಕೊಡಬಾರದು. ಚುನಾವಣೆ ಸಂದರ್ಭದಲ್ಲಿ ಹಿಂದೂ ಧರ್ಮ ಮತ್ತು ಶ್ರೀರಾಮನನ್ನು ಮುನ್ನಲೆಗೆ ತಂದು ಜನರನ್ನು ಹಿಡಿದಿಟ್ಟುಕೊಳ್ಳಲು ಪ್ರಯತ್ನಿಸುತ್ತಾರೆ. ಇದು ಅವರ ಚುನಾವಣಾ ಗಿಮಿಕ್ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಚುನಾವಣೆಗಾಗಿ ರಾಮಮಂದಿರ ಉದ್ಘಾಟನೆ: ಪ್ರತಿಯೊಂದು ಚುನಾವಣೆಯಲ್ಲೂ ಬಿಜೆಪಿಯವರು ಶ್ರೀರಾಮ ಮಂದಿರ ಉದ್ಘಾಟನೆ ಹಾಗೂ ಪುಲ್ವಾಮಾ ದಾಳಿಯಂತಹವುಗಳನ್ನು ಮಾಡಿ, ಜನರನ್ನು ದಿಕ್ಕು ತಪ್ಪಿಸುತ್ತಾರೆ. ನಮ್ಮೂರಲ್ಲೂ ಶ್ರೀರಾಮ ಮಂದಿರವಿದೆ, ನಾನೂ ಪೂಜೆ ಮಾಡುತ್ತೇನೆ. ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಇನ್ನೂ ಪೂರ್ಣಗೊಳ್ಳದಿದ್ದರೂ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಉದ್ಘಾಟಿಸಿ, ಜನರ ಭಾವನೆಯನ್ನು ಹಿಡಿದಿಟ್ಟುಕೊಳ್ಳಲು ಹೊರಟಿದ್ದಾರೆ ಎಂದು ಆರೋಪಿಸಿದ್ದಾರೆ.
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಹಗರಣದ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಮಾಜಿ ಆಯುಕ್ತ ದಿನೇಶ್…
ಮಡಿಕೇರಿ : ದುಬಾರೆ ಶಿಬಿರದ ಸಾಕಾನೆ ತಕ್ಷ ಅನಾರೋಗ್ಯದಿಂದ ಸೋಮವಾರ ರಾತ್ರಿ ಮೃತಪಟ್ಟಿದೆ. ಡಿ.೮ರಂದು ರಾತ್ರಿ ೯.೩೦ರ ಸಮಯದಲ್ಲಿ ತಕ್ಷ…
ಮೈಸೂರು : ಕೇಳಿದ ತಕ್ಷಣ ಹಣ ಕೊಡಲಿಲ್ಲ ಎಂಬ ಕಾರಣಕ್ಕಾಗಿ ಸ್ನೇಹಿತನ ಮೇಲೆ ಯುವಕನೊಬ್ಬ ಚಾಕುವಿನಿಂದ ಇರಿದಿರುವ ಘಟನೆ ನಗರದಲ್ಲಿ…
ಮೈಸೂರು : ಲೈಂಗಿಕವಾಗಿ ಸಹಕರಿಸಿದಲ್ಲಿ ಚೆನ್ನಾಗಿ ನೋಡಿಕೊಳ್ಳುತ್ತೀನಿ ಎಂದು ಮಹಿಳಾ ಉದ್ಯೋಗಿಗೆ ಕಿರುಕುಳ ನೀಡಿದ ಖಾಸಗಿ ಕಾರ್ಖಾನೆ ಮಾಲೀಕನ ವಿರುದ್ದ…
ಮೈಸೂರು : ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಯ ದರ್ಶನ ಹಾಗೂ ಸಮೂಹ ದೇವಾಲಯಗಳ ಸೇವೆಗಳ ಶುಲ್ಕಗಳನ್ನು ಏರಿಸಿರುವ ರಾಜ್ಯ…
ಬೆಳಗಾವಿ : ರಾಜ್ಯದಲ್ಲಿ 545 ಪಿಎಸ್‌ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಈಗಾಗಲೇ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಮೂರು ತಿಂಗಳ…