ರಾಜ್ಯ

ಡಿಕೆಶಿ ಪವರ್‌ ಶೇರಿಂಗ್‌ ಸತ್ಯ ಬಹಿರಂಗಪಡಿಸಲಿ :ಆರ್.ಅಶೋಕ

ಬೆಂಗಳೂರು:  ರಾಜ್ಯ  ಕಾಂಗ್ರೆಸ್‌ ಸರ್ಕಾರದಲ್ಲಿ  ಸಿಎಂ  ಗಾದಿಗೆ ಕಿತ್ತಾಟ ಜಾಸ್ತಿ ಆಗಿದೆ. ಧೈರ್ಯ ಇದ್ದರೆ ಡಿ.ಕೆ.ಶಿವಕುಮಾರ್‌ ಪವರ್‌ ಶೇರಿಂಗ್‌ ಸತ್ಯ ಬಹಿರಂಗಪಡಿಸಲಿ ಎಂದು ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ಸವಾಲು ಹಾಕಿದ್ದಾರೆ.

ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ  ಸಿದ್ದರಾಮಯ್ಯ ರಾಜ್ಯದ ಅಭಿವೃದ್ದಿಯ ಬಗ್ಗೆ ಮಾತನಾಡುವುದು ಬಿಟ್ಟು ಸಿಎಂ ಕುರ್ಚಿ ಬಗ್ಗೆಯೇ ಮಾತನಾಡಿ, ಸಿಎಂ ಕುರ್ಚಿ ಖಾಲಿ ಇಲ್ಲವಲ್ಲ ಎಂದೇ ಹೇಳುತ್ತಿದ್ದಾರೆ. ಆದರೆ ಡಿಕೆಶಿ ಬಣ ಕುರ್ಚಿ ಖಾಲಿ ಮಾಡಿಸುವ ಬಗ್ಗೆಯೇ ಚಿಂತಿಸುತ್ತಿದೆ.  ಅಡಳಿತ ಮಾಡುವುದು ಬಿಟ್ಟು ಕಾಂಗ್ರೆಸ್‌ ಕುರ್ಚಿಗಾಗಿ ಪವರ್‌ ಪಾಲಿಟಿಕ್ಸ್‌ ನಡೆಸುತ್ತಿದೆ ಎಂದು ಕಿಡಿಕಾರಿದ್ದಾರೆ.

ಡಿಕೆಶಿ ಚುನಾವಣೆ ವೇಳೆ ನನ್ನ ಕೈಗೆ ಪೆನ್ನು ಕೊಡಿ ಎಂದು ಹೇಳುತ್ತಿದ್ದರು. ಈಗ ಎಂಎಲ್‌ಎಗಳ ಮುಂದೆ ಪೆನ್ನು ಅಂಗಲಾಚುವ ಸ್ಥಿತಿ ಬಂದಿದೆ. ಡಿಕೆಶಿಗೆ ಧೈರ್ಯವಿದ್ದರೆ ಪವರ್‌ ಶೇರಿಂಗ್‌ ಮಾತುಕತೆ ವೇಳೆ ಯಾರಿದ್ದರು ಎಂದು ಹೇಳಲಿ ಎಂದಿದ್ದಾರೆ.

ಸಚಿವ ರಾಜಣ್ಣ, ಪರಮೇಶ್ವರ್‌ ಎಲ್ಲರೂ ಡಿಕೆಶಿ ವಿರುದ್ಧ ಇದ್ದಾರೆ. ಆದರೆ ಮಾಗಡಿ ಶಾಸಕ ಬಾಲಕೃಷ್ಣ ಡಿಕೆಶಿನೆ ಮುಂದಿನ ಸಿಎಂ ಎನ್ನುತ್ತಾರೆ. ಕಾಂಗ್ರೆಸ್‌ನಲ್ಲಿ ಡಿಕೆಶಿಗೆ ಬೆಲೆಯೂ ಇಲ್ಲ, ರೈತರ ಬೆಳೆಗೆ ಪರಿಹಾರವೂ ಇಲ್ಲದಂತಾಗಿದೆ. ಒಳ್ಳೆಯ ಸರ್ಕಾರ ನೀಡುತ್ತೇವೆ ಎಂದು ರಾಜ್ಯದ ಜನತೆಗೆ ಭರವಸೆ ನೀಡಿದ್ದ ಕಾಂಗ್ರೆಸ್‌ ಆಭದ್ರ ಸರ್ಕಾರ ನೀಡಿ ಪ್ರತಿದಿನ ಕುರ್ಚಿ ಕಿತ್ತಾಟ ನಡೆಸುತ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.

ಈಗಾಗಲೇ ಬೆಲೆ ಏರಿಕೆ ಜಾಸ್ತಿಯಾಗಿದೆ. ಬಜೆಟ್‌ನಲ್ಲಿ ಇನ್ನು ಏನೇನು ಕಾದಿದೆಯೋ. ಇದನ್ನೆಲ್ಲ ಸರಿ ಮಾಡದೇ ಇದ್ದರೆ, ದೇಶದಲ್ಲಿ ಜನತೆ ಕಾಂಗ್ರೆಸ್‌ ಓಡಿಸಿದ ಹಾಗೆ ರಾಜ್ಯದಲ್ಲಿನ ಕಾಂಗ್ರೆಸ್‌ ಸರ್ಕಾರವನ್ನು ಓಡಿಸುವ ಕಾಲ ಬರುತ್ತದೆ ಎಂದು ಭವಿಷ್ಯ ನುಡಿದಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕದನ ವಿರಾಮ | ಇರಾನ್‌ ಮೇಲೆ 2ವಾರ ಬಾಂಬ್‌ ಹಾಕುವುದಿಲ್ಲ ಎಂದ ಟ್ರಂಪ್‌

ವಾಷಿಂಗ್ಟನ್‌ : ಇವತ್ತಿನ ರಾತ್ರಿ ಇರಾನ್‌ನ ಇಡೀ ನಾಗರಿಕತೆಯೇ ನಾಶವಾಗಲಿದೆ ಎಂದು ಬೆದರಿಕೆ ಒಡ್ಡಿದ ಕೆಲವೇ ಹೊತ್ತಲ್ಲಿ ಅಮೆರಿಕ ಅಧ್ಯಕ್ಷ…

1 hour ago

ಉಪಚುನಾವಣೆ ಬಹಿರಂಗ ಪ್ರಚಾರಕ್ಕೆ ತೆರೆ: ನಾಳೆ ಮನೆ ಮನೆಗೆ ತೆರಳಿ ಮತಯಾಚನೆ

ಬೆಂಗಳೂರು: ಮುಂಬರುವ 2028ರ ವಿಧಾನಸಭಾ ಚುನಾವಣೆಗೆ ದಿಕ್ಸೂಚಿ ಎಂದೇ ಹೇಳಲಾಗಿರುವ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಬಹಿರಂಗ ಪ್ರಚಾರಕ್ಕೆ…

17 hours ago

ಮಣಿಪುರದಲ್ಲಿ ಮನೆ ಮೇಲೆ ಬಾಂಬ್‌ ದಾಳಿ: ಇಬ್ಬರು ಮಕ್ಕಳು ಸಾವು

ಇಂಪಾಲ: ಮಣಿಪುರದಲ್ಲಿ ಮನೆಯೊಂದರ ಮೇಲೆ ಬಾಂಬ್‌ ದಾಳಿ ನಡೆದಿದ್ದು, ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಮಣಿಪುರದ ಬಿಷ್ಣುಪುರ ಜಿಲ್ಲೆಯ…

17 hours ago

ನನ್ನ ತಾಳ್ಮೆಗೆ ಕಾಲವೇ ಉತ್ತರ ನೀಡುತ್ತದೆ: ಡಿಸಿಎಂ ಡಿ.ಕೆ.ಶಿವಕುಮಾರ್‌

ಹುಬ್ಬಳ್ಳಿ: ಸಿದ್ದರಾಮಯ್ಯ ಐದು ವರ್ಷ ಸಿಎಂ ಎಂಬ ಸಚಿವ ಜಮೀರ್‌ ಅಹ್ಮಮದ್‌ ಖಾನ್‌ ಹೇಳಿಕೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ.…

17 hours ago

ನಮ್ಮಣ್ಣ ಇವತ್ತೇ ಸಿಎಂ ಆಗಬೇಕು ಎಂದೇನಿಲ್ಲ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ನಮ್ಮ ಅಣ್ಣ ಸಿಎಂ ಆಗಬೇಕು ಎಂಬ ಆಸೆ ಇದೆ. ಆದರೆ ಇವತ್ತೇ ಸಿಎಂ ಆಗಬೇಕು ಅಂತೇನಿಲ್ಲ. ಇನ್ನೂ ಸಮಯವಿದೆ…

17 hours ago

ಏಪ್ರಿಲ್.‌17ರಂದು ಸಿಎಂ ಸಿದ್ದರಾಮಯ್ಯ ಕೊಡಗು ಜಿಲ್ಲೆಗೆ ಭೇಟಿ ಸಾಧ್ಯತೆ

ಮಡಿಕೇರಿ: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಏಪ್ರಿಲ್.‌17ರಂದು ಕೊಡಗು ಜಿಲ್ಲೆಗೆ ಭೇಟಿ ನೀಡುವ ಸಾಧ್ಯತೆ ಇದ್ದು, ಅಗತ್ಯ ತಯಾರಿ ಮಾಡಿಕೊಳ್ಳುವಂತೆ ಸಂಬಂಧಪಟ್ಟ…

17 hours ago