ಬೆಂಗಳೂರು: ಆದಿಚುಂಚನಗಿರಿ ಮಠಾಧೀಶರಾದ ನಿರ್ಮಲಾನಂದ ಶ್ರೀಗಳು ರಾಜಕಾರಣ ಮಾಡುವವರಲ್ಲ, ಅವರಿಗೆ ಎಲ್ಲವೂ ಗೊತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬಿಜೆಪಿ ಜೆಡಿಎಸ್ ನಾಯಕರು ನಿರ್ಮಲಾನಂದ ಶ್ರೀಗಳನ್ನು ಭೇಟಿ ಮಾಡಿರುವ ಬಗ್ಗೆ ಪ್ರತಿಕ್ರಿಯಿಸಿದರು.
ಸ್ವಾಮೀಜಿಯವರು ಬಂದವರಿಗೆಲ್ಲ ಹಾರ ಹಾಕಿ ಆರ್ಶೀವಾದ ಮಾಡಿ ಕಳುಹಿಸುತ್ತಾರೆ. ಏನೇ ಇರಲಿ ಸ್ವಾಮೀಜಿ ಬುದ್ಧಿವಂತರು, ಇತಿಹಾಸ ಅವರಿಗೆ ಗೊತ್ತಿದೆ. ಈ ಹಿಂದೆ ಒಕ್ಕಲಿಗ ಮಠವನ್ನು ಒಡೆದವರು ಯಾರು ಎಂಬುದು ಎಲ್ಲರಿಗೂ ಗೊತ್ತಿದೆ. ಒಕ್ಕಲಿಗರು ದಡ್ಡರಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು.
ಒಕ್ಕಲಿಗ ಮುಖ್ಯಮಂತ್ರಿಯನ್ನು ಅಧಿಕಾರದಿಂದ ಇಳಿಸಿದವರು ಜತೆ ಸೇರಿ ಒಕ್ಕಲಿಗ ಮಠಕ್ಕೆ ಭೇಟಿ ಕೊಟ್ಟು ಅವರಿಗೆ ಆರ್ಶಿವಾದ ಕೊಡಿಸಿರುವುದು ಕುಮಾರಸ್ವಾಮಿ ಅವರ ಅನುಕೂಲ ಸಿಂಧು ರಾಜಕಾರಣವನ್ನು ಜಗಜ್ಜಾಹೀರು ಮಾಡಿದೆ ಎಂದರು.
ಜೆಡಿಎಸ್ ನವರದ್ದು ಸಿದ್ದಾಂತ ರಾಜಕಾರಣವಲ್ಲ. ಅವರದು ಅನುಕೂಲ ರಾಜಕಾರಣ ಎಂದು ವ್ಯಂಗ್ಯವಾಡಿದರು. ಈ ಚುನಾವಣೆಯಲ್ಲಿ ಜೆಡಿಎಸ್‌ನ ಅಭ್ಯರ್ಥಿಗಳು ಸೋಲುತ್ತಾರೆ. ಹಾಗೆಯೇ ಬಿಜೆಪಿ ಟಿಕೆಟ್ ಮೇಲೆ ಚುನಾವಣಾ ಕಣಕ್ಕಿಳಿದಿರುವ ಜೆಡಿಎಸ್ ಕುಟುಂಬದ ಅಭ್ಯರ್ಥಿಯೂ ಸೋಲುತ್ತಾರೆ. ಜನ ದಡ್ಡರಲ್ಲ ಜನಕ್ಕೆ ಎಲ್ಲವೂ ಗೊತ್ತಿದೆ ಎಂದು ಡಿ.ಕೆ ಶಿವಕುಮಾರ್ ಹೇಳಿದರು.
ಕಾಡಾನೆಗಳ ಹಾವಳಿಯಿಂದಾಗಿ ಕಾಡಂಚಿನ ಜನರಿಗೆ ತೊಂದರೆಯಾಗುತ್ತಿದೆ. ಆದ್ದರಿಂದ ಆನೆಗಳನ್ನು ಕೊಲ್ಲಲು ಅನುಮತಿ ನೀಡಬೇಕು ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ…
ರಾಜ್ಯಸಭೆಯ ಕಲಾಪದ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾತನಾಡುವ ಭರದಲ್ಲಿ ಕೆಲವರು ಅಂಬೇಡ್ಕರ್ ಎನ್ನುವುದನ್ನು ಈಗ ಫ್ಯಾಷನ್…
ದಾ.ರಾ. ಮಹೇಶ್ ವೀರನಹೊಸಹಳ್ಳಿ: ತಾಲ್ಲೂಕಿನ ಬನ್ನಿಕುಪ್ಪೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿತ್ಯ ಅವರೆಕಾಯಿ ಮಾರಾಟದಿಂದಾಗಿ ಟ್ರಾಫಿಕ್ ಜಾಮ್ ಆಗುತ್ತಿದ್ದು, ವಾಹನಗಳ ಸಂಚಾರಕ್ಕೆ…
ಮಂಡ್ಯ: ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20,21 ಮತ್ತು 22ರಂದು ಮೂರು ದಿನಗಳ ಕಾಲ ಜರುಗಲಿರುವ ಕನ್ನಡ ನುಡಿ ಜಾತ್ರೆ…
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…