Mysore
23
clear sky

Social Media

ಮಂಗಳವಾರ, 24 ಮಾರ್ಚ್ 2026
Light
Dark

ಹೆಚ್ಚುವರಿ ಡಿಸಿಎಂ ಬಗ್ಗೆ ಮಾತನಾಡಿದ್ರೆ ನೋಟಿಸ್ ; ಡಿಕೆಶಿ ಖಡಕ್ ವಾರ್ನಿಂಗ್

ಬೆಂಗಳೂರು : ರಾಜ್ಯದಲ್ಲಿ ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿಸುವ ವಿಚಾರ ಸಾಕಷ್ಟು ಚರ್ಚೆಯಾಗುತ್ತಿದ್ದು, ಕಾಂಗ್ರೆಸ್‌ ಸಚಿವರು, ಶಾಸಕರು, ನಾಯಕರು ದಿನಕ್ಕೊಂದು ಹೇಳಿಕೆಗಳನ್ನ ಕೊಡುತ್ತಿದ್ದಾರೆ. ಇದರಿಂದಾಗಿ ಕಾಂಗ್ರೆಸ್‌ ಪಕ್ಷದಲ್ಲಿ ಆಂತರಿಕ ಸಂಘರ್ಷಕ್ಕೂ ಕಾರಣವಾಗುತ್ತಿದ್ದು, ಇದಕ್ಕೆ ಕಡಿವಾಣ ಹಾಕಲು ಸ್ವತಃ ಡಿಸಿಎಂ ಡಿಕೆ ಶಿವಕುಮಾರ್‌ ಅವರೇ ಅಖಾಡಕ್ಕೆ ಇಳಿದಿದ್ದಾರೆ.

ಹೆಚ್ಚುವರಿ ಡಿಸಿಎಂ ಬಗ್ಗೆಯಾಗಲಿ ಅಥವಾ ಪಕ್ಷಕ್ಕೆ ಧಕ್ಕೆಯಾಗುವಂತಹ ಹೇಳಿಕೆಗಳನ್ನಾಗಿ ಯಾರಾದ್ರೂ ಮಾತನಾಡಿದ್ದೆ ಆದಲ್ಲಿ ಶಿಸ್ತು ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಖಡಕ್‌ ವಾರ್ನಿಂಗ್‌ ಕೊಟ್ಟಿದ್ದಾರೆ.

ಬೆಂಗಳೂರಿನಲ್ಲಿ ಈ ವಿಚಾರವಾಗಿ ಮಾತನಾಡಿದ ಡಿಕೆಶಿ , ಯಾವ ಡಿಸಿಎಂ ಚರ್ಚೆಯೂ ಇಲ್ಲ, ಸಿಎಂ ಬದಲಾವಣೆಯ ಪ್ರಶ್ನೆಯೂ ಇಲ್ಲ. ಯಾರ ಶಿಫಾರಸ್ಸು ಸಹ ಅವಶ್ಯಕತೆ ಇಲ್ಲ. ನಾನು, ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ ಒಂದು ತೀರ್ಮಾನಕ್ಕೆ ಬಂದಿದ್ದು, ಯಾವ ಶಾಸಕರು ಕೂಡ ಮಾತನಾಡುವ ಅವಶ್ಯಕತೆ ಇಲ್ಲ. ಒಂದು ವೇಳೆ ಮಾತನಾಡಿದರೆ, ಎಐಸಿಸಿ ಹಾಗೂ ನಾನು ವಿಧಿಯಿಲ್ಲದೇ ನೊಟೀಸ್ ನೀಡಬೇಕಾಗುತ್ತದೆ. ಪಕ್ಷದ ಶಿಸ್ತು ಕಾಪಾಡಲು ಅನಿವಾರ್ಯವಾಗಿದೆ ಎಂದು ಹೇಳಿದ್ದಾರೆ.

Tags:
error: Content is protected !!