ಬೆಂಗಳೂರು : ರಾಜ್ಯದಲ್ಲಿ ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿಸುವ ವಿಚಾರ ಸಾಕಷ್ಟು ಚರ್ಚೆಯಾಗುತ್ತಿದ್ದು, ಕಾಂಗ್ರೆಸ್ ಸಚಿವರು, ಶಾಸಕರು, ನಾಯಕರು ದಿನಕ್ಕೊಂದು ಹೇಳಿಕೆಗಳನ್ನ ಕೊಡುತ್ತಿದ್ದಾರೆ. ಇದರಿಂದಾಗಿ ಕಾಂಗ್ರೆಸ್ ಪಕ್ಷದಲ್ಲಿ ಆಂತರಿಕ ಸಂಘರ್ಷಕ್ಕೂ ಕಾರಣವಾಗುತ್ತಿದ್ದು, ಇದಕ್ಕೆ ಕಡಿವಾಣ ಹಾಕಲು ಸ್ವತಃ ಡಿಸಿಎಂ ಡಿಕೆ ಶಿವಕುಮಾರ್ ಅವರೇ ಅಖಾಡಕ್ಕೆ ಇಳಿದಿದ್ದಾರೆ.
ಹೆಚ್ಚುವರಿ ಡಿಸಿಎಂ ಬಗ್ಗೆಯಾಗಲಿ ಅಥವಾ ಪಕ್ಷಕ್ಕೆ ಧಕ್ಕೆಯಾಗುವಂತಹ ಹೇಳಿಕೆಗಳನ್ನಾಗಿ ಯಾರಾದ್ರೂ ಮಾತನಾಡಿದ್ದೆ ಆದಲ್ಲಿ ಶಿಸ್ತು ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ.
ಬೆಂಗಳೂರಿನಲ್ಲಿ ಈ ವಿಚಾರವಾಗಿ ಮಾತನಾಡಿದ ಡಿಕೆಶಿ , ಯಾವ ಡಿಸಿಎಂ ಚರ್ಚೆಯೂ ಇಲ್ಲ, ಸಿಎಂ ಬದಲಾವಣೆಯ ಪ್ರಶ್ನೆಯೂ ಇಲ್ಲ. ಯಾರ ಶಿಫಾರಸ್ಸು ಸಹ ಅವಶ್ಯಕತೆ ಇಲ್ಲ. ನಾನು, ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ ಒಂದು ತೀರ್ಮಾನಕ್ಕೆ ಬಂದಿದ್ದು, ಯಾವ ಶಾಸಕರು ಕೂಡ ಮಾತನಾಡುವ ಅವಶ್ಯಕತೆ ಇಲ್ಲ. ಒಂದು ವೇಳೆ ಮಾತನಾಡಿದರೆ, ಎಐಸಿಸಿ ಹಾಗೂ ನಾನು ವಿಧಿಯಿಲ್ಲದೇ ನೊಟೀಸ್ ನೀಡಬೇಕಾಗುತ್ತದೆ. ಪಕ್ಷದ ಶಿಸ್ತು ಕಾಪಾಡಲು ಅನಿವಾರ್ಯವಾಗಿದೆ ಎಂದು ಹೇಳಿದ್ದಾರೆ.
ಸಿದ್ದಾಪುರ : ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಗ್ರಾ.ಪಂ. ಮಾಜಿ ಅಧ್ಯಕ್ಷನ ವಿರುದ್ಧ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ…
ಬೆಂಗಳೂರು : ಪ್ರಧಾನಿ ನರೇಂದ್ರಮೋದಿ ಅವರ ನೇತೃತ್ವದ ಕೇಂದ್ರ ಸಚಿವ ಸಂಪುಟವು ೨೦೨೬ರ ಹಂಗಾಮಿನ ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆಯನ್ನು…
ಹಲವು ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ೩೦ ಡಿ.ಸೆ. ಬೆಂಗಳೂರು : ಈಗಾಗಲೇ ರಾಜ್ಯದಲ್ಲಿ ಹೆಚ್ಚಾಗಿರುವ ಮಾಗಿ ಚಳಿಯ ವಾತಾವರಣಕ್ಕೆ ಜನರು…
ಗುಂಡ್ಲುಪೇಟೆ : ತಾಲ್ಲೂಕಿನಲ್ಲಿ ಹುಲಿ ದಾಳಿ ಪ್ರಕರಣಗಳು ಮುಂದುವರಿದಿದ್ದು ಹಸುವಿನ ಮೇಲೆ ದಾಳಿ ಮಾಡಿದ ವ್ಯಾಘ್ರ ರಕ್ತ ಹೀರಿ ಕೊಂದಿರುವ…
ಮೈಸೂರು : NFHS-5 ವರದಿಯ ಪ್ರಕಾರ ಮೈಸೂರು ಜಿಲ್ಲೆಯ SAM ಮಕ್ಕಳ ಪ್ರಮಾಣ 7.2% ಇದ್ದು ಪ್ರಸ್ತುತ 0.21% ಗೆ…
ಮೈಸೂರು : ರಾಜ್ಯದಲ್ಲಿ ನಾಯಕತ್ವ, ಅಧಿಕಾರ ಹಂಚಿಕೆ ಕಿತ್ತಾಟ ಬಿಟ್ಟು ರಾಜ್ಯದ ಸರ್ವತೋಮುಖ ಅಭಿವೃದ್ಧಿ ಬಗ್ಗೆ ಚರ್ಚೆ ನಡೆಯಲಿ ಎಂದು…