ಬೆಂಗಳೂರು: ಚನ್ನಪಟ್ಟಣದಿಂದ ಡಿಕೆ ಶಿವಕುಮಾರ್ ಸ್ಪರ್ಧೇ ಮಾಡಿದರೇ ಅವರ ರಾಜಕೀಯ ಜೀವನ ಅಂತ್ಯ ಕಾಣಲಿದೆ ಎಂದು ಮಾಜಿ ಸಚಿವ ಸಿ.ಪಿ ಯೋಗೇಶ್ವರ್ ಹೇಳಿಕೆಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಟಕ್ಕರ್ ಕೊಟ್ಟಿದ್ದಾರೆ.
ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ನನ್ನ ರಾಜಕೀಯ ಅಂತ್ಯದ ಬಗ್ಗೆ ಜನರು ತೀರ್ಮಾನಿಸುತ್ತಾರೆ. ದೊಡ್ಡವರ ಮಾತಿನ ಬಗ್ಗೆ ನಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಡಿಕೆ ಶಿವಕುಮಾರ್ ತಿರುಗೇಟು ನೀಡಿದರು.
ನಾನು ಚನ್ನಪಟ್ಟಣ ಜನರ ಬಳಿ ಬಂದಿದ್ದೇನೆ. ನಿಮ್ಮ ಋಣ ತೀರಿಸಲು ಒಂದು ಅವಕಾಶ ನೀಡಿ ಎಂದು ಮನವಿ ಮಾಡಿದ್ದೇನೆ ಎಂದು ಹೇಳಿದರು.
ನನ್ನ ಹಿಂದೆ ಒಂದು ಶಕ್ತಿಯಿದೆ. ಅದುವೇ ಜನರು ಜನರು ನಮಗೆ ಮತ ನೀಡುವ ವಿಶ್ವಾಸವಿದ್ದು, ಉಪ ಚುನಾವಣೆ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರ ಜತೆಯಲ್ಲಿ ಚರ್ಚಿಸಿ ತೀರ್ಮಾನ ಮಾಡಲಾಗುವುದು ಎಂದು ಅವರು ಹೇಳಿದರು.
ಡಿಕೆ ಸುರೇಶ್ ಅವರಿಗೆ ತಮ್ಮ ಸ್ವಕ್ಷೇತ್ರ ಕನಕಪುರ ಬಿಟ್ಟುಕೊಟ್ಟು, ಮಾಜಿ ಸಿಎಂ ಎಚ್‌ಡಿಕೆ ಅವರಿಂದ ತೆರವಾಗಿರುವ ಚನ್ನಪಟ್ಟಣ ಕ್ಷೇತ್ರದಿಂದ ಡಿಕೆ ಶಿವಕುಮಾರ್ ಅವರು ಸ್ಪರ್ಧೆ ಮಾಡಲಿದ್ದಾರೆ ಎಂದು ಊಹಿಸಲಾಗಿದೆ.





