ರಾಮನಗರ: ಡಿಸಿಎಂ ಡಿ.ಕೆ.ಶಿವಕುಮಾರ್ ಗೊಡ್ಡು ಬೆದರಿಕೆಗಳಿಗೆ ನಾನು ಹೆದರಲ್ಲ ಎಂದು ಮಾಜಿ ಸಿಎಂ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ಈ ಬಗ್ಗೆ ರಾಮನಗರದಲ್ಲಿ ಮಾತನಾಡಿದ ಅವರು, ತಪ್ಪು ಮಾಡಿರುವುದು ನಾನಲ್ಲ ಅವರು. ಕಳೆದ ಕೆಲ ದಿನಗಳಿಂದ ನನ್ನನ್ನು ಗುಣಗಾನ ಮಾಡುತ್ತಿದ್ದಾರೆ. ಜನಾಂದೋಲನದಲ್ಲಿ ರಾಜ್ಯದ ಜನತೆ ಏನೆಲ್ಲಾ ಕಷ್ಟ ಪಡುತ್ತಿದ್ದಾರೆ ಎಂಬುದನ್ನು ಕುರಿತು ಚರ್ಚೆ ಮಾಡುವುದನ್ನು ಬಿಟ್ಟು ನನ್ನ ಬಗ್ಗೆ ಗುಣಗಾನ ಮಾಡ್ತಿದ್ದಾರೆ ಎಂದು ಕಿಡಿಕಾರಿದರು.
ಇನ್ನು ನನ್ನ ಕುಟುಂಬದ ಆಸ್ತಿ ದಾಖಲೆ ಬಗ್ಗೆ ಡಿಕೆಶಿ ಮಾತಾಡಿದ್ದಾರೆ. ಮಾಹಿತಿ ಬಿಚ್ಚಿಡುತ್ತೇನೆ ಎಂದೂ ಸಹ ಹೇಳಿದ್ದಾರೆ. ನನ್ನ ಬಗ್ಗೆ ಏನು ಬಿಚ್ಚಿಡುತ್ತಾರೋ ಬಿಚ್ಚಿಡಲಿ ಎಂದು ಸವಾಲು ಹಾಕಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಸಾವಿಗೀಡಾದ ಪಿಎಸ್‌ಐ ಪರಶುರಾಮ್ ಪತ್ನಿ ಗೋಳು ಅಷ್ಟಿಷ್ಟಲ್ಲ. ಆದರೆ ಮೃತ ಪಿಎಸ್‌ಐ ಪತ್ನಿಗೆ ಸರ್ಕಾರದಿಂದ ನ್ಯಾಯ ಕೊಡಿಸಲು ಇಲ್ಲಿಯವರೆಗೂ ಸಾಧ್ಯವಾಗಿಲ್ಲ. ಮೊದಲು ಆಕೆಗೆ ನ್ಯಾಯ ಕೊಡಿಸುವ ಕೆಲಸ ಆಗಬೇಕು. ಪರಶುರಾಮ್ ಸಾವಿನ ಪ್ರಕರಣ ಕುರಿತು ಸೂಕ್ತ ತನಿಖೆ ನಡೆಸಬೇಕು. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಆಗಬೇಕು ಎಂದು ಆಗ್ರಹಿಸಿದರು.
ಶೇ.30ರಷ್ಟು ಉತ್ಪಾದನೆ ಕುಸಿತ ; ಉತ್ತರ ಕೊಡಗಿನ ಭಾಗದಲ್ಲಿ ಹೆಚ್ಚಿನ ಬೆಳೆ ನಷ್ಟ ನವೀನ್ ಡಿಸೋಜ ಮಡಿಕೇರಿ: ಈ ಬಾರಿಯ…
ಭೇರ್ಯ ಮಹೇಶ್ ಕೆ.ಆರ್.ನಗರ : ಭತ್ತದ ನಾಡು ಎಂದೇ ಪ್ರಖ್ಯಾತಿ ಹೊಂದಿರುವ ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲ್ಲೂಕುಗಳಲ್ಲಿ ಇದೀಗ ಭತ್ತದ…
ದೊಡ್ಡ ಕವಲಂದೆ : ಗಬ್ಬೆದ್ದು ನಾರುತ್ತಿರುವ ಚರಂಡಿಯ ಕೊಳಚೆ ನೀರಿನಿಂದ ಗ್ರಾಮ ಸ್ಥರಿಗೆ ಸಾಂಕ್ರಾಮಿಕ ರೋಗಗಳು ಹರಡು ತ್ತಿದ್ದು, ಗ್ರಾಮ…
ಸರಗೂರು : ಪಟ್ಟಣ ಪಂಚಾಯಿತಿ ವ್ಯಾಪ್ತಿ ಯಲ್ಲಿ ಬೀದಿ ನಾಯಿಗಳ ಹಾವಳಿಯಿಂದ ಜನ ಸಾಮಾನ್ಯರು ತತ್ತರಿಸಿ ಆತಂಕದಲ್ಲಿದ್ದರೂ ನಿಯಂ ತ್ರಣ…
ನುರಿತ ತಜ್ಞರ ತಂಡದಿಂದ ಕೆರೆ ಸ್ವಚ್ಛತೆ ಆರಂಭಿಸಲು ತಯಾರಿ ಮೈಸೂರು : ಪ್ರವಾಸಿಗರು ಹಾಗೂ ವಾಯುವಿಹಾರಿಗಳ ನೆಚ್ಚಿನ ತಾಣವಾದ ಕುಕ್ಕರಹಳ್ಳಿ…
ಮೈಸೂರು ನಗರದ ಪ್ರತಿಯೊಂದೂ ವಾರ್ಡ್‌ನ ಪ್ರತಿ ಮಾರ್ಗದಲ್ಲೂ ಮೈಸೂರು ಮಹಾ ನಗರ ಪಾಲಿಕೆಯಿಂದ ವಾರ್ಡ್ ಸಂಖ್ಯೆ, ವಾರ್ಡ್‌ನ್ನು ಪ್ರತಿನಿಧಿಸುವ ಪಾಲಿಕೆ…