ರಾಜ್ಯ

ಮಂಜುನಾಥ್‌ರನ್ನು ಹುದ್ದೆಯಿಂದ ಕೆಳಗಿಳಿಸಲು ಪ್ರಯತ್ನಿಸಿದ್ದ ಡಿಕೆಶಿ: ಹೆಚ್‌ ಡಿ ದೇವೇಗೌಡ ಆರೋಪ

ರಾಮನಗರ: ಡಾ.ಮಂಜುನಾಥ್‌ರನ್ನು ಜಯದೇವ ಡೈರೆಕ್ಟರ್‌ ಹುದ್ದೆಯಿಂದ ತೆಗೆಸಲು ಡಿಕೆ ಶಿವಕುಮಾರ್ ಪ್ರಯತ್ನ ಮಾಡಿದ್ದರು. ಈ ಬಗ್ಗೆ ಎಸ್‌ಎಂ ಕೃಷ್ಣಗೆ ಚೀಟಿ ಕೊಟ್ಟಿದ್ದರು ಎಂದು ಹೆಚ್‌ಡಿ ದೇವೇಗೌಡ ಗಂಭೀರ ಆರೋಪ ಮಾಡಿದ್ದಾರೆ.

ಕನಕಪುರದಲ್ಲಿ ನಡೆದ ಬಿಜೆಪಿ-ಜೆಡಿಎಸ್‌ ಮೈತ್ರಿ ಸಭೆಯಲ್ಲಿ ಮಾತನಾಡಿದ ಅವರು ಇಡೀ ವಿಶ್ವದಲ್ಲೇ 2 ಸಾವಿರ ಬೆಡ್‌ಗಳನ್ನು ಹೊಂದಿರುವ ಹೃದಯ ಸಂಬಂಧಿ ಆಸ್ಪತ್ರೆ ಇಲ್ಲ, ಅಂತಹ ಆಸ್ಪತ್ರೆ ಮಾಡಿದ್ದು ಡಾ.ಮಂಜುನಾಥ್‌. ಇದನ್ನ ಮನಗಂಡು ನರೇಂದ್ರ ಮೋದಿ ಮತ್ತು ಅಮಿತ್‌ ಶಾ ಅವರು ಚುನಾವಣೆಗೆ ಸ್ಪರ್ಧಿಸುವಂತೆ ಒತ್ತಾಯಿಸಿದ್ದರು. 8 ಲಕ್ಷ ಜನರಿಗೆ ಉಚಿತ ಚಿಕಿತ್ಸೆ ಕೊಟ್ಟ ಮಂಜುನಾಥ್‌ರನ್ನು ನಮಗೆ ಕೊಡಿ, ಅವರ ಸೇವೆ ದೇಶಕ್ಕೆ ಬೇಕು ಎಂದ್ರು ಮೋದಿ ಅವರು ಎಂದು ದೇವೇಗೌಡ ಹೇಳಿದರು.

ಡಾ.ಮಂಜುನಾಥ್ ಒಬ್ಬ ಪ್ರಾಮಾಣಿಕ ವೈದ್ಯ. ದಯಮಾಡಿ ಡಾ.ಮಂಜುನಾಥ್ ಅವರನ್ನ ಗೆಲ್ಲಿಸಿಕೊಂಡು ಬನ್ನಿ. ಎಲ್ಲರಲ್ಲೂ ಕೈ ಮುಗಿದು ಪ್ರಾರ್ಥನೆ ಮಾಡ್ತೀನಿ ಎಂದು ಮನವಿ ಮಾಡಿದರು. ಕಾಂಗ್ರೆಸ್​ನವರು ಮೂರು ಜನ ಡಾ.ಮಂಜುನಾಥ್ ಎಂಬುವವರನ್ನ ನಿಲ್ಲಿಸಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಶ್ರೀನಿವಾಸ ಎ

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ನನ್ನೂರು. ಡಿ ಬನುಮಯ್ಯ ಕಾಲೇಜಿನಲ್ಲಿ ಪದವಿ ಮುಗಿಸಿದ ನಾನು ಕಳೆದ ನಾಲ್ಕು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡಿದ್ದೇನೆ. ಒನ್‌ಇಂಡಿಯಾ ಕನ್ನಡದಲ್ಲಿ ಸೋಷಿಯಲ್‌ ಮೀಡಿಯಾ ಎಕ್ಸಿಕ್ಯೂಟಿವ್‌ ಆಗಿ ಕೆಲಸ ಆರಂಭಿಸಿ ಮೈಖೇಲ್‌ ಕನ್ನಡ ಹಾಗೂ ಕನ್ನಡ ಫಿಲ್ಮಿಬೀಟ್‌ನಲ್ಲಿ ಮೂರು ವರ್ಷಗಳ ಕಾಲ ಸಬ್‌ಎಡಿಟರ್‌ ಆಗಿ ಕೆಲಸ ನಿರ್ವಹಿಸಿದ್ದೇನೆ. ಪ್ರಸ್ತುತ ಆಂದೋಲನ ದಿನಪತ್ರಿಕೆಯ ಡಿಜಿಟಲ್‌ ಟೀಮ್‌ ಲೀಡ್‌ ಆಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಕ್ರೀಡೆ ಹಾಗೂ ಸಿನಿಮಾ ನನ್ನ ಆಸಕ್ತಿ ಕ್ಷೇತ್ರಗಳಾಗಿದ್ದು, ಪ್ರವಾಸ ಮತ್ತು ಫೋಟೋಗ್ರಫಿ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ದಸರಾ ಚಿತ್ರೋತ್ಸವ ರದ್ದಾಗದಿರಲಿ

ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…

4 hours ago

ಚಲನೆ ಕೇವಲ ವ್ಯಾಯಾಮವಲ್ಲ ಆರೋಗ್ಯದ ಶಕ್ತಿ

ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…

4 hours ago

ಒಂದು ಸೈನ್ಯದ ಆತ್ಮಾಹುತಿ ತಡೆದಿದ್ದರು ಅರಸು

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…

4 hours ago

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

15 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

16 hours ago