dkshi and hdk
ವಿಜಯಪುರ : ಕೇಂದ್ರ ಸಚಿವ ಕುಮಾರಸ್ವಾಮಿಯವರಿಗೆ ಮಾನಸಿಕ ಅಸ್ವಸ್ಥತೆ ಕಾಡುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕಿಡಿಕಾರಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಳ್ಳಿಗೆ ಮತ್ತೊಂದು ಹೆಸರೇ ಕುಮಾರಸ್ವಾಮಿ. ಅವರು ಮೆಂಟಲ್ ಆಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ನಟಿ ರನ್ಯಾರಾವ್ ದುಬೈನಿಂದ ಚಿನ್ನ ತರುತ್ತಿರುವ ಮಾಹಿತಿಯನ್ನು ಅಧಿಕಾರಿಗಳಿಗೆ ನೀಡಿದ್ದೇ ಕಾಂಗ್ರೆಸ್‍ನ ಮಹಾನಾಯಕ ಎಂದು ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದರು. ಇದಕ್ಕೆ ಡಿ.ಕೆ.ಶಿವಕುಮಾರ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.
ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಬೇರೆ ಜಿಲ್ಲೆಯಿಂದ ಬಂದವರು, ನಾವು ಬೆಂಗಳೂರಿನವರು, ನಮ್ಮ ಅಸ್ಮಿತೆಯನ್ನು ಉಳಿಸಿಕೊಳ್ಳಲು ರಾಮನಗರ ಹೆಸರನ್ನು ಬದಲಾವಣೆ ಮಾಡಲಾಗಿದೆ, ಇದರಿಂದ ಅವರಿಗಾಗಿರುವ ತೊಂದರೆಯೇನು? ರಾಮನಗರವನ್ನು ಬದಲಾವಣೆ ಮಾಡುತ್ತಿಲ್ಲ. ರಾಮನಗರ ರಾಮನಗರವಾಗಿಯೇ ಉಳಿಯುತ್ತದೆ. ಕುಮಾರಸ್ವಾಮಿಯವರೇಕೆ ಹಾಸನ ಜಿಲ್ಲೆಯಿಂದ ಇಲ್ಲಿಗೆ ಬಂದರು. ಹಾಸನದಲ್ಲೇ ರಾಜಕಾರಣ ಮಾಡಬಹುದಿತ್ತಲ್ಲವೇ? ಎಂದು ಪ್ರಶ್ನಿಸಿದರು.
ಕುಮಾರಸ್ವಾಮಿ ಮೊದಲು ಹೆಸರು ಬದಲಾವಣೆ ಮಾಡಿಕೊಳ್ಳಲಿ. ಅವರ ಹೆಸರ ಮುಂದಿರುವ ಊರಿನ ಇನ್ಶಿಲ್ ಅನ್ನು ಬದಲಾವಣೆ ಮಾಡಿಕೊಳ್ಳಲಿ. ಈಗಲೂ ಅವರು ಎಚ್‍ಡಿ ಎಂದು ಇಟ್ಟುಕೊಂಡಿರುವುದೇಕೆ? ಎಂದರು.
ಮದ್ರಾಸ್‍ಗೆ ಚೆನ್ನೈ ಎಂದು ಗುಲ್ಬರ್ಗವನ್ನು ಕಲಬುರಗಿ ಎಂದು ಬಿಜಾಪುರವನ್ನು ವಿಜಯಪುರ ಎಂದು ಬದಲಾವಣೆ ಮಾಡಲಾಗಿದೆ. ಇದರಿಂದ ಅವರಿಗಾಗುವ ತೊಂದರೆಯೇನು ಎಂದು ಪ್ರಶ್ನಿಸಿದರು.
ರಿಯಲ್ ಎಸ್ಟೇಟ್ ಅಭಿವೃದ್ಧಿಗಾಗಿ ಹೆಸರು ಬದಲಾವಣೆ ಮಾಡಲಾಗಿದೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಡಿ.ಕೆ.ಶಿವಕುಮಾರ್, ಹೌದು. ರೈತರ, ಹಳ್ಳಿಜನಗಳ ಅಭಿವೃದ್ಧಿಯಾಗಬೇಕು. ನಮ್ಮ ಆಸ್ತಿಗಳ ಬೆಲೆ ಜಾಸ್ತಿಯಾಗಬೇಕು. ಪ್ರತಿಯೊಬ್ಬ ರೈತನಿಗೂ ಒಳ್ಳೆಯದಾಗಬೇಕು. ವಿದೇಶಗಳಿಂದ ಬಂದು ಬಂಡವಾಳ ಹೂಡಿಕೆ ಮಾಡಬೇಕು. ಉದ್ಯೋಗ ಸಿಗಬೇಕು ಎಂಬುದು ನಮ್ಮ ಆಸೆ ಎಂದರು.
ನ್ಯಾಷನಲ್ ಹೆರಾಲ್ಡ್ ಸಂಸ್ಥೆಗೆ ನಾನು 25 ಲಕ್ಷ ರೂ. ನೀಡಿದ್ದೇನೆ. ನಮ ಟ್ರಸ್ಟ್ ನಿಂದ 2.50 ಕೋಟಿ ರೂ. ನೀಡಿದ್ದೇವೆ. ನಾವೇನು ಕದ್ದು ಕೊಟ್ಟಿಲ್ಲ. ಸಂಪಾದನೆ ಮಾಡಿದ ಆಸ್ತಿಯಲ್ಲಿ ರಾಜಾರೋಷವಾಗಿ ನಮ್ಮ ಪಕ್ಷ ನಡೆಸುವ ಪತ್ರಿಕೆಗೆ ಕೊಟ್ಟಿದ್ದೇವೆ. ಇದರಲ್ಲಿ ತಪ್ಪೇನು ಎಂದು ಸಮರ್ಥಿಸಿಕೊಂಡರು.
ಚಾಮರಾಜನಗರ : ತಾಲೂಕಿನ ದೇವರಾಜಪುರ ಗ್ರಾಮದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಕೋಳಿ ಫಾರಂ ಶೆಡ್‌ಗೆ ಬೆಂಕಿ ತಗುಲಿ ಸುಮಾರು 4…
ದಾವಣಗೆರೆ : ಆಟೋ ರಿಕ್ಷಾಗಳಿಗೆ ಅನಿಲ ಪೂರೈಕೆ ಸಮಸ್ಯೆ ಇಲ್ಲ, ಆದರೂ ವಿನಾಕಾರಣ ಆತಂಕಕ್ಕೊಳಗಾಗಿ ಕ್ಯೂ ನಿಲ್ಲಲಾಗುತ್ತಿದೆ ಎಂದು ಆಹಾರ…
ಶ್ರೀರಂಗಪಟ್ಟಣ : ಪ್ರವಾಸಕ್ಕೆ ಬಂದಿದ್ದ ಇನ್ಫೋಸಿಸ್ ಉದ್ಯೋಗಿಯೊಬ್ಬರು ಕಾವೇರಿ ನದಿಯಲ್ಲಿ ಈಜಲು ಹೋಗಿ ಮುಳುಗಿ ಸಾವನ್ನಪ್ಪಿದ ಘಟನೆ ಶ್ರೀರಂಗಪಟ್ಟಣ ತಾಲೂಕಿನ…
ಬೆಂಗಳೂರು : ಕರ್ನಾಟಕ ಸರ್ಕಾರವು ದಿನಗೂಲಿ ನೌಕರರು ಮತ್ತು ಅವರ ಅವಲಂಬಿತರಿಗೆ ವಾರ್ಷಿಕ 5 ಲಕ್ಷದವರೆಗೆ ನಗದು ರಹಿತ ಆರೋಗ್ಯ…
ಬೆಂಗಳೂರು : ಪರಿಸರ ಸ್ನೇಹಿ ಬಟ್ಟೆ ಬ್ಯಾಗ್ ಖರೀದಿ ಹಗರಣ ಸಂಬಂಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್…
ಮೈಸೂರು : ಜಿಲ್ಲೆಯಲ್ಲಿ ಏ.16 ರಿಂದ ಮೇ 15ರವರೆಗೆ ನಡೆಯುವ ಜನಗಣತಿಗೆ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ. ಜನಗಣತಿಗೂ ಮುನ್ನ ‘ಸ್ವಯಂ…