ರಾಜ್ಯ

ಕುಮಾರಸ್ವಾಮಿಗೆ ಮಾನಸಿಕ ಅಸ್ವಸ್ಥತೆ ಕಾಡುತ್ತಿದೆ ; ಡಿಕೆಶಿ ಕಿಡಿ

ವಿಜಯಪುರ : ಕೇಂದ್ರ ಸಚಿವ ಕುಮಾರಸ್ವಾಮಿಯವರಿಗೆ ಮಾನಸಿಕ ಅಸ್ವಸ್ಥತೆ ಕಾಡುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕಿಡಿಕಾರಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಳ್ಳಿಗೆ ಮತ್ತೊಂದು ಹೆಸರೇ ಕುಮಾರಸ್ವಾಮಿ. ಅವರು ಮೆಂಟಲ್ ಆಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನಟಿ ರನ್ಯಾರಾವ್ ದುಬೈನಿಂದ ಚಿನ್ನ ತರುತ್ತಿರುವ ಮಾಹಿತಿಯನ್ನು ಅಧಿಕಾರಿಗಳಿಗೆ ನೀಡಿದ್ದೇ ಕಾಂಗ್ರೆಸ್‍ನ ಮಹಾನಾಯಕ ಎಂದು ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದರು. ಇದಕ್ಕೆ ಡಿ.ಕೆ.ಶಿವಕುಮಾರ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.

ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಬೇರೆ ಜಿಲ್ಲೆಯಿಂದ ಬಂದವರು, ನಾವು ಬೆಂಗಳೂರಿನವರು, ನಮ್ಮ ಅಸ್ಮಿತೆಯನ್ನು ಉಳಿಸಿಕೊಳ್ಳಲು ರಾಮನಗರ ಹೆಸರನ್ನು ಬದಲಾವಣೆ ಮಾಡಲಾಗಿದೆ, ಇದರಿಂದ ಅವರಿಗಾಗಿರುವ ತೊಂದರೆಯೇನು? ರಾಮನಗರವನ್ನು ಬದಲಾವಣೆ ಮಾಡುತ್ತಿಲ್ಲ. ರಾಮನಗರ ರಾಮನಗರವಾಗಿಯೇ ಉಳಿಯುತ್ತದೆ. ಕುಮಾರಸ್ವಾಮಿಯವರೇಕೆ ಹಾಸನ ಜಿಲ್ಲೆಯಿಂದ ಇಲ್ಲಿಗೆ ಬಂದರು. ಹಾಸನದಲ್ಲೇ ರಾಜಕಾರಣ ಮಾಡಬಹುದಿತ್ತಲ್ಲವೇ? ಎಂದು ಪ್ರಶ್ನಿಸಿದರು.

ಕುಮಾರಸ್ವಾಮಿ ಮೊದಲು ಹೆಸರು ಬದಲಾವಣೆ ಮಾಡಿಕೊಳ್ಳಲಿ. ಅವರ ಹೆಸರ ಮುಂದಿರುವ ಊರಿನ ಇನ್ಶಿಲ್ ಅನ್ನು ಬದಲಾವಣೆ ಮಾಡಿಕೊಳ್ಳಲಿ. ಈಗಲೂ ಅವರು ಎಚ್‍ಡಿ ಎಂದು ಇಟ್ಟುಕೊಂಡಿರುವುದೇಕೆ? ಎಂದರು.

ಮದ್ರಾಸ್‍ಗೆ ಚೆನ್ನೈ ಎಂದು ಗುಲ್ಬರ್ಗವನ್ನು ಕಲಬುರಗಿ ಎಂದು ಬಿಜಾಪುರವನ್ನು ವಿಜಯಪುರ ಎಂದು ಬದಲಾವಣೆ ಮಾಡಲಾಗಿದೆ. ಇದರಿಂದ ಅವರಿಗಾಗುವ ತೊಂದರೆಯೇನು ಎಂದು ಪ್ರಶ್ನಿಸಿದರು.

ರಿಯಲ್ ಎಸ್ಟೇಟ್ ಅಭಿವೃದ್ಧಿಗಾಗಿ ಹೆಸರು ಬದಲಾವಣೆ ಮಾಡಲಾಗಿದೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಡಿ.ಕೆ.ಶಿವಕುಮಾರ್, ಹೌದು. ರೈತರ, ಹಳ್ಳಿಜನಗಳ ಅಭಿವೃದ್ಧಿಯಾಗಬೇಕು. ನಮ್ಮ ಆಸ್ತಿಗಳ ಬೆಲೆ ಜಾಸ್ತಿಯಾಗಬೇಕು. ಪ್ರತಿಯೊಬ್ಬ ರೈತನಿಗೂ ಒಳ್ಳೆಯದಾಗಬೇಕು. ವಿದೇಶಗಳಿಂದ ಬಂದು ಬಂಡವಾಳ ಹೂಡಿಕೆ ಮಾಡಬೇಕು. ಉದ್ಯೋಗ ಸಿಗಬೇಕು ಎಂಬುದು ನಮ್ಮ ಆಸೆ ಎಂದರು.

ನ್ಯಾಷನಲ್ ಹೆರಾಲ್ಡ್ ಸಂಸ್ಥೆಗೆ ನಾನು 25 ಲಕ್ಷ ರೂ. ನೀಡಿದ್ದೇನೆ. ನಮ ಟ್ರ‌ಸ್ಟ್‌ ನಿಂದ 2.50 ಕೋಟಿ ರೂ. ನೀಡಿದ್ದೇವೆ. ನಾವೇನು ಕದ್ದು ಕೊಟ್ಟಿಲ್ಲ. ಸಂಪಾದನೆ ಮಾಡಿದ ಆಸ್ತಿಯಲ್ಲಿ ರಾಜಾರೋಷವಾಗಿ ನಮ್ಮ ಪಕ್ಷ ನಡೆಸುವ ಪತ್ರಿಕೆಗೆ ಕೊಟ್ಟಿದ್ದೇವೆ. ಇದರಲ್ಲಿ ತಪ್ಪೇನು ಎಂದು ಸಮರ್ಥಿಸಿಕೊಂಡರು.

ಆಂದೋಲನ ಡೆಸ್ಕ್

Recent Posts

ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು: ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…

11 hours ago

ನಾಡಹಬ್ಬ ಮೈಸೂರು ದಸರಾ: ಸಂಪ್ರದಾಯದಂತೆ ಪ್ರಮೋದಾ ದೇವಿ ಒಡೆಯರ್ ಗೆ ಆಹ್ವಾನ

ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…

11 hours ago

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಬಿದ್ದ ಮರ: ಕೂದಲೆಳೆಯಲ್ಲಿ ಪಾರಾದ ಚಾಲಕ

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…

18 hours ago

ಓದುಗರ ಪತ್ರ: ಗೊಬ್ಬಳಿ ಮರ ಬಸ್‌ನಿಲ್ದಾಣದ ಆವರಣ ಸ್ವಚ್ಛವಾಗಿರಲಿ

ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…

18 hours ago

ಓದುಗರ ಪತ್ರ: ಮಹಾತ್ಮರ ರಾಮರಾಜ್ಯದ ಕಲ್ಪನೆಯ ಸಂದೇಶ ಸಾಕಾರಗೊಳ್ಳಲಿ

ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…

18 hours ago

ಓದುಗರ ಪತ್ರ: ಇಬ್ಬರು ಮಹಾನ್ ನಾಯಕರ ಆಶಯ ಮುಂದಿನ ಪೀಳಿಗೆಗೆ ದಾಟಿಸಲಿ

ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…

18 hours ago