Mysore
32
few clouds

Social Media

ಶುಕ್ರವಾರ, 10 ಏಪ್ರಿಲ 2026
Light
Dark

ಚನ್ನಪಟ್ಟಣ ಅಭ್ಯರ್ಥಿ ನಾನೇ ಎಂದು ಡಿಕೆಶಿ ಅವರು ಎಲ್ಲಿಯೂ ಹೇಳಿಲ್ಲ: ದಿನೇಶ್‌ ಗುಂಡೂರಾವ್‌

ಮೈಸೂರು: ಚನ್ನಪಟ್ಟಣ ಅಭ್ಯರ್ಥಿ ನಾನೇ ಎಂದು ಡಿಕೆ ಶಿವಕುಮಾರ್‌ ಅವರು ಎಲ್ಲಿಯೂ ಹೇಳಿಲ್ಲ. ಈ ಸಂಬಂಧ ಕಾಂಗ್ರೆಸ್‌ ಅಭ್ಯರ್ಥಿ ಆಯ್ಕೆ ಸಂಬಂಧ ಹೈಕಮಾಂಡ್‌ ಅಂತಿಮ ತೀರ್ಮಾನ ಕೈಗೊಳ್ಳಲಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಅವರು ಹೇಳಿದರು.

ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಉಪ ಚುನಾವಣೆ ನಡೆಯಲಿರುವ ಮೂರು ಕ್ಷೇತ್ರಗಳಿಗೆ ಪಕ್ಷವು ಉಸ್ತುವಾರಿಗಳನ್ನು ನೇಮಕ ಮಾಡಲಾಗಿದೆ. ಅದರಂತೆ ಚನ್ನಪಟ್ಟಣ ಕ್ಷೇತ್ರಕ್ಕೆ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್‌. ಚೆಲುವರಾಯಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ಸಮಿತಿ ಸಭೆ ನಡೆಸಲಾಗಿದ್ದು, ಅಕಾಂಕ್ಷಿಗಳ ವಿವರಗಳನ್ನು ಸಲ್ಲಿಸಿದ್ದು, ಹೈಕಮಾಂಡ್‌ ಮೂಲಕವೇ ಅಂತಿಮ ತೀರ್ಮಾನ ಮಾಡಲಾಗುವುದು ಎಂದು ಗುಂಡೂರಾವ್‌ ಹೇಳಿದರು.

ಸತೀಶ್‌ ಜಾರಕಿಹೊಳಿ ಅವರ ಮೂರು ಉಪಮುಖ್ಯಮಂತ್ರಿ ಹುದ್ದೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿ, ಇದು ಅವರ ವೈಯಕ್ತಿಕ ವಿಚಾರ. ಇದೇ ರೀತಿ ಮೊದಲು ಸಹಾ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಪಕ್ಷದಲ್ಲಿ ಈ ಬಗ್ಗೆ ಯಾವುದೇ ಚಿಂತನೆ ನಡೆಸಿಲ್ಲ. ಈ ಬಗ್ಗೆ ಸೂಕ್ತ ಸಮಯದಲ್ಲಿ ಹೈಕಮಾಂಡ್‌ ತೀರ್ಮಾನ ಮಾಡಲಿದೆ ಎಂದು ತಿಳಿಸಿದರು.

Tags:
error: Content is protected !!