ಮೈಸೂರು: ಚನ್ನಪಟ್ಟಣ ಅಭ್ಯರ್ಥಿ ನಾನೇ ಎಂದು ಡಿಕೆ ಶಿವಕುಮಾರ್ ಅವರು ಎಲ್ಲಿಯೂ ಹೇಳಿಲ್ಲ. ಈ ಸಂಬಂಧ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ಸಂಬಂಧ ಹೈಕಮಾಂಡ್ ಅಂತಿಮ ತೀರ್ಮಾನ ಕೈಗೊಳ್ಳಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಹೇಳಿದರು.
ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಉಪ ಚುನಾವಣೆ ನಡೆಯಲಿರುವ ಮೂರು ಕ್ಷೇತ್ರಗಳಿಗೆ ಪಕ್ಷವು ಉಸ್ತುವಾರಿಗಳನ್ನು ನೇಮಕ ಮಾಡಲಾಗಿದೆ. ಅದರಂತೆ ಚನ್ನಪಟ್ಟಣ ಕ್ಷೇತ್ರಕ್ಕೆ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚೆಲುವರಾಯಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ಸಮಿತಿ ಸಭೆ ನಡೆಸಲಾಗಿದ್ದು, ಅಕಾಂಕ್ಷಿಗಳ ವಿವರಗಳನ್ನು ಸಲ್ಲಿಸಿದ್ದು, ಹೈಕಮಾಂಡ್ ಮೂಲಕವೇ ಅಂತಿಮ ತೀರ್ಮಾನ ಮಾಡಲಾಗುವುದು ಎಂದು ಗುಂಡೂರಾವ್ ಹೇಳಿದರು.
ಸತೀಶ್ ಜಾರಕಿಹೊಳಿ ಅವರ ಮೂರು ಉಪಮುಖ್ಯಮಂತ್ರಿ ಹುದ್ದೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿ, ಇದು ಅವರ ವೈಯಕ್ತಿಕ ವಿಚಾರ. ಇದೇ ರೀತಿ ಮೊದಲು ಸಹಾ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಪಕ್ಷದಲ್ಲಿ ಈ ಬಗ್ಗೆ ಯಾವುದೇ ಚಿಂತನೆ ನಡೆಸಿಲ್ಲ. ಈ ಬಗ್ಗೆ ಸೂಕ್ತ ಸಮಯದಲ್ಲಿ ಹೈಕಮಾಂಡ್ ತೀರ್ಮಾನ ಮಾಡಲಿದೆ ಎಂದು ತಿಳಿಸಿದರು.
ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯ ರೈತರ ನಿಯೋಗದೊಂದಿಗೆ ಸಭೆ ನಡೆಸಿ ಕಾಂಗ್ರೆಸ್ ಸರ್ಕಾರ ರೈತರ…
ಹಾಸನ: ಈ ಜಿಲ್ಲೆಗೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಕುಟುಂಬ ನೀಡಿದ ಕೊಡುಗೆ ಏನು ಎಂದು ಕೇಳಿದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ…
ಮೈಸೂರು: ಎಂಎಲ್‌ಸಿ ಸಿ.ಟಿ.ರವಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಫೇಕ್ ಎನ್‌ಕೌಂಟರ್ ಮಾಡಲು ಯತ್ನಿಸಿದ್ದರು ಎಂಬ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ…
50 ವರ್ಷಗಳ ದೂರದೃಷ್ಟಿಯ ಡಿಪಿಆರ್ ಸಿದ್ಧ ಆಗಬೇಕು • ಭಾಮಿ ವಿ ಶೆಣೈ, ಮೈಸೂರು ಗ್ರಾಹಕರ ಪರಿಷತ್ ಮೈಸೂರು ಜಿಲ್ಲಾ…
ಹಾಸನ: ಸಿ.ಟಿ.ರವಿ ಪ್ರಕರಣದಲ್ಲಿ ಬೆಳಗಾವಿ ಪೊಲೀಸರು ನಡೆದುಕೊಂಡ ರೀತಿಯ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು;…
ಬೆಂಗಳೂರು: ರಾಜ್ಯದ ವಿವಿಧ ಕೈಗಾರಿಕಾ ವಲಯಗಳಲ್ಲಿ ಒಟ್ಟು ರೂ. 9,823 ಕೋಟಿ ರೂ. ಮೊತ್ತದ 10 ಪ್ರಸ್ತಾವನೆಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ…