ರಾಜ್ಯ

ಡಿಸೆಂಬರ್‌ ಒಳಗೆ ಡಿಕೆಶಿ ಸಿಎಂ ಆಗೇ ಆಗ್ತಾರೆ: ಶಿವಗಂಗಾ ಬಸವರಾಜ್‌

ದಾವಣಗೆರೆ: ರಕ್ತದಲ್ಲಿ ಬರೆದು ಕೊಡ್ತೀನಿ, ಮುಂದಿನ ಡಿಸೆಂಬರ್‌ ಒಳಗೆ ಡಿಕೆ ಶಿವಕುಮಾರ್‌ ಅವರು ಮುಖ್ಯಮಂತ್ರಿ ಆಗೇ ಆಗುತ್ತಾರೆ ಎಂದು ಚನ್ನಗಿರಿ ಕ್ಷೇತ್ರದ ಕೈ ಶಾಸಕ ಶಿವಗಂಗಾ ಬಸವರಾಜ್‌ ಸ್ಪೋಟಕ ಹೇಳಿಕೆ ನೀಡಿದ್ದಾರೆ.

ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ಪಕ್ಷಕ್ಕಾಗಿ ಡಿಕೆ ಶಿವಕುಮಾರ್‌ ಅವರು ಸಾಕಷ್ಟು ದುಡಿದಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ಅತಿ ಹೆಚ್ಚು ಕ್ಷೇತ್ರ ಗೆದ್ದು ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬರಲು ಹಾಗೂ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ 9 ಸ್ಥಾನ ಗೆಲ್ಲುವುದಕ್ಕೆ ಡಿಕೆ ಶಿವಕುಮಾರ್‌ ಅವರ ಶ್ರಮ ಸಾಕಷ್ಟಿದೆ. ಅವರು ಏನೇ ನಿರ್ಧಾರ ತೆಗೆದುಕೊಂಡರೂ ಅದಕ್ಕೆ ನಾವು ಬದ್ಧರಾಗಿರುತ್ತೇವೆ ಎಂದರು.

ಈ ಡಿಸೆಂಬರ್‌ನಿಂದ ಮುಂದಿನ 5 ವರ್ಷ ಅವರೇ ರಾಜ್ಯದ ಮುಖ್ಯಮಂತ್ರಿಯಾಗಿರುತ್ತಾರೆ. ಅಂದರೆ, ಏಲೂವರೆ ವರ್ಷ ಅವರೇ ಸಿಎಂ ಆಗಿರುತ್ತಾರೆ ಎಂದು ತಿಳಿಸಿದರು.

ಸಚಿವ‌ ಕೆಎನ್ ರಾಜಣ್ಣ ಅವರ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಅವರ ಹೇಳಿಕೆಯಿಂದ ಕಾಂಗ್ರೆಸ್‌ ಪಕ್ಷಕ್ಕೆ ಮುಜುಗರ ಆಗುತ್ತಿದೆ. ಹೈಕಮಾಂಡ್‌ ಇದನ್ನು ಗಮನಿಸಿ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ರೋಹಿಣಿ ಸಿಂಧೂರಿ ವಿರುದ್ಧ ತನಿಖೆ : ಮಾಜಿ ಸಚಿವ ಸಾ.ರಾ.ಮಹೇಶ್‌ ಹೇಳಿದಿಷ್ಟು?

ಮೈಸೂರು : ಬಟ್ಟೆ ಬ್ಯಾಗ್ ಖರೀದಿಯಲ್ಲಿ ಆಗಿರುವ ಅವ್ಯವಹಾರದ ಬಗ್ಗೆ ತನಿಖೆ ನಡೆಸಲು ಹೈಕೋರ್ಟ್ ಅನುಮತಿ ನೀಡಿರುವ ಕುರಿತು ಪ್ರತಿಕ್ರಿಯಿಸಿದ…

7 mins ago

ಆರ್‌ಸಿಬಿ ವಿರುದ್ಧದ ಪಂದ್ಯಕ್ಕೆ ಧೋನಿ ಲಭ್ಯ?

ಬೆಂಗಳೂರು : ಮಹೇಂದ್ರ ಸಿಂಗ್ ಧೋನಿ ಅವರು ಚೆನ್ನೈ ಸೂಪರ್ ಕಿಂಗ್ಸ್ ಅಭಿಮಾನಿಗಳಲ್ಲಿ ಹೊಸ ಆಶಾಕಿರಣ ಮೂಡಿಸಿದ್ದಾರೆ. ಸ್ನಾಯು ಸೆಳೆತದಿಂದ…

60 mins ago

24 ಗಂಟೆಗಳಲ್ಲಿ ಅಮೆರಿಕದ ಎರಡು F-35 ಜೆಟ್‌ಗಳನ್ನು ಹೊಡೆದುರುಳಿಸಿದ್ದೇವೆ : ಇರಾನ್

ಟೆಹ್ರಾನ್ : ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಕಳೆದ 24 ಗಂಟೆಗಳಲ್ಲಿ ಅಮೆರಿಕದ ಎರಡು F-35 ಸ್ಟೆಲ್ತ್…

2 hours ago

ಬಿಜೆಪಿಯವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು : ಮುಖ್ಯಮಂತ್ರಿ ಟೀಕೆ

ಬಾಗಲಕೋಟೆ : ಸೋಮಣ್ಣ ಬಿಜೆಪಿಯಲ್ಲಿ ಕೆಲಸವಿಲ್ಲದಿರುವ ಮಂತ್ರಿ. ಅವರಿಗೆ ಯಾವ ಕಡತವೂ ಹೋಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದರು.…

2 hours ago

ಹೊಸ ಸುಂಕ ಸಾರಿದ ಅಮೆರಿಕ, ಈ ಬಾರಿ ಯಾವುದರ ಮೇಲೆ ಟ್ರಂಪ್‌ ಕಣ್ಣು?

ವಾಷಿಂಗ್ಟನ್ : ಇರಾನ್ ವಿರುದ್ಧದ ಯುದ್ಧದ ನಡುವೆಯೂ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಹೊಸದಾಗಿ ಸುಂಕ ಸಮರ ಆರಂಭಿಸಿದ್ದಾರೆ.…

2 hours ago

HSRP ನಂಬರ್ ಪ್ಲೇಟ್ ಅಳವಡಿಕೆ ಕಡ್ಡಾಯವಲ್ಲ

ಬೆಂಗಳೂರು : ಹಳೆಯ ವಾಹನಗಳಿಗೆ ಹೈ ಸೆಕ್ಯುರಿಟಿ ರೆಜಿಸ್ಟ್ರೇಷನ್ ಪ್ಲೇಟ್ (HSRP) ಅಳವಡಿಸುವುದು ಇನ್ನು ಮುಂದೆ ಕಡ್ಡಾಯವಿರುವುದಿಲ್ಲ ಎಂದು ಕರ್ನಾಟಕ…

2 hours ago