ರಾಜ್ಯ

ಗೃಹ ಸಚಿವ ಪರಮೇಶ್ವರ್‌ ಯಾವುದೇ ತಪ್ಪು ಮಾಡಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಗೃಹ ಸಚಿವ ಜಿ.ಪರಮೇಶ್ವರ್‌ ಯಾವುದೇ ತಪ್ಪು ಮಾಡಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ಗೃಹ ಸಚಿವ ಪರಮೇಶ್ವರ್‌ ಶಿಕ್ಷಣ ಸಂಸ್ಥೆಗಳ ಮೇಲೆ ಇಡಿ ದಾಳಿ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಪರಮೇಶ್ವರ್‌ ಅವರ ಮನೆಗೆ ಭೇಟಿ ನೀಡಿ ಅವರ ಜೊತೆ ಚರ್ಚೆ ಮಾಡಿದೆ. ನಾವು ಸಾರ್ವಜನಿಕ ಜೀವನದಲ್ಲಿದ್ದು, ಬೇಕಾದಷ್ಟು ಜನ ಟ್ರಸ್ಟ್‌ ನಡೆಸುತ್ತಾರೆ. ಮದುವೆ ಶುಭ ಸಮಾರಂಭದಲ್ಲಿ ಅನೇಕ ಉಡುಗೊರೆಗಳನ್ನು ಕೊಟ್ಟಿರಬಹುದು. ಪರಮೇಶ್ವರ್‌ ಅವರಂತಹ ಪ್ರಭಾವಿ ವ್ಯಕ್ತಿ ಬೇರೆಯವರಿಗೆ ಸ್ಮಗ್ಲಿಂಗ್‌ ಮಾಡಲು ಹೇಳಲು ಸಾಧ್ಯವಿಲ್ಲ ಎಂದರು.

ಪರಮೇಶ್ವರ್‌ ಜೊತೆ ಮಾತನಾಡಿದ್ದೇನೆ. ರನ್ಯಾರಾವ್‌ಗೆ 25 ಲಕ್ಷ ರೂ ವರೆಗೆ ನೀಡಿದ್ದಾರಂತೆ. ಕುಟುಂಬದವರಿಗೂ ಆ ಹಣ ಕೊಟ್ಟಿರಬಹುದು. ಪರಮೇಶ್ವರ್‌ ಅವರು ಕಾನೂನಿಗೆ ತಲೆಬಾಗುವ ವ್ಯಕ್ತಿ. ಅವರ ಬಗ್ಗೆ ನಮಗೆ ಹೆಮ್ಮೆಯಿದೆ. ಅವರು ಯಾವುದೇ ತಪ್ಪು ಮಾಡಿಲ್ಲ ಎಂದು ತಿಳಿಸಿದರು.

ಆಂದೋಲನ ಡೆಸ್ಕ್

Recent Posts

ಸಿದ್ದಾಪುರ | ಉಪಟಳ ನೀಡುತ್ತಿದ್ದ ಒಂಟಿ ಸಲಗ ಸೆರೆ

ಕೃಷಿ ಫಸಲು ನಾಶ ಮಾಡಿ, ಕಾರ್ಮಿಕರು, ಬೆಳೆಗಾರರಲ್ಲಿ ಆತಂಕ ಸೃಷ್ಟಿಸಿದ್ದ ಕಾಡಾನೆ ಸಿದ್ದಾಪುರ : ವಿರಾಜಪೇಟೆ ತಾಲೂಕಿನ ಚೆಂಬೆಬೆಳ್ಳೂರು ಸುತ್ತಮುತ್ತಲ…

5 hours ago

ಇರಾನ್‌ ಈವರೆಗೆ 400ಕ್ಕೂ ಹೆಚ್ಚು ಕ್ಷಿಪಣಿ ದಾಳಿ ನಡೆಸಿದೆ ; ಇಸ್ರೇಲ್‌

ಜೆರುಸಲೆಂ : ಮಧ್ಯಪ್ರಾಚ್ಯದಲ್ಲಿ ಯುದ್ಧ ಆರಂಭವಾದ ಬಳಿಕ ಇರಾನ್‌ನಿಂದ ಇಸ್ರೇಲ್‌ ಮೇಲೆ ಈವರೆಗೆ 400ಕ್ಕೂ ಹೆಚ್ಚು ಬ್ಯಾಲಿಸ್ಟಿಕ್ ಕ್ಷಿಪಣಿ ದಾಳಿ…

6 hours ago

ಏಪ್ರಿಲ್ 1ರಿಂದ ಜಾರಿ ಟೋಲ್‌ ದರ ಹೆಚ್ಚಳ ; ಮೈ-ಬೆಂ ಹೆದ್ದಾರಿ ಪ್ರಯಾಣವೂ ದುಬಾರಿ

ಬೆಂಗಳೂರು : ಏಪ್ರಿಲ್ 1 ರಿಂದ ಬೆಂಗಳೂರು-ಮೈಸೂರು ಹೆದ್ದಾರಿ ಸೇರಿದಂತೆ ರಾಜ್ಯದ 9 ರಾಷ್ಟ್ರೀಯ ಹೆದ್ದಾರಿಗಳಲ್ಲಿ ಶೇಕಡಾ 3 ರಿಂದ…

6 hours ago

ಮಧ್ಯಪ್ರಾಚ್ಯ ಸಂಘರ್ಷ : ಇಂಧನ ಬಿಕ್ಕಟ್ಟಿನ ಬಗ್ಗೆ ಪ್ರಧಾನಿ ಮೋದಿ ಮಹತ್ವದ ಸಭೆ

ಹೊಸದಿಲ್ಲಿ : ಪಶ್ಚಿಮ ಏಷ್ಯಾದಲ್ಲಿ ಯುದ್ಧ ತೀವ್ರಗೊಳ್ಳುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು, ಪೆಟ್ರೋಲಿಯಂ, ವಿದ್ಯುತ್ ಮತ್ತು ರಸಗೊಬ್ಬರ ವಲಯಗಳ ಪರಿಶೀಲನೆಗಾಗಿ ಪ್ರಧಾನಿ ನರೇಂದ್ರ…

7 hours ago

ಕರ್ನಾಟಕ ಹೈಕೋರ್ಟ್‌ : 70 ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು : 70 ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳಿಗೆ ಕರ್ನಾಟಕ ಹೈಕೋರ್ಟ್ ಅರ್ಜಿ ಆಹ್ವಾನಿಸಿದೆ. ಕಾನೂನು ಪದವಿ ಸೇರಿದಂತೆ ವಿವಿಧ…

7 hours ago

ಸಿಲಿಂಡರ್‌ಗೆ ಮುಗಿಬಿದ್ದ ಜನ : ಪೊಲೀಸ್‌ ರಕ್ಷಣೆಯಲ್ಲಿ ಸಿಲಿಂಡರ್‌ ವಿತರಣೆ

ಕೆ.ಆರ್.ಪೇಟೆ : ಗೃಹ ಬಳಕೆ ಸಿಲಿಂಡರ್ ಸಿಗುವುದಿಲ್ಲ ಎಂದು ಏಕಾಏಕಿ ನೂರಾರು ಗ್ರಾಹಕರು ಗ್ಯಾಸ್ ಏಜೆನ್ಸಿ ಬಳಿ ಜಮಾಯಿಸಿದ ಪರಿಣಾಮ…

7 hours ago