dk shivakumara
ಬೆಂಗಳೂರು : ಅಭಿಮಾನಿ ಇರಲಿ, ಆದರೆ ಜೀವಕ್ಕಿಂತ ದೊಡ್ಡದಲ್ಲ. ದಯವಿಟ್ಟು ಎಲ್ಲರೂ ಸುರಕ್ಷಿತವಾಗಿರಿ ಎಂದು ಡಿಸಿಎಂ ಡಿಕೆ ಶಿವಕುಮಾರ್ ಮನವಿ ಮಾಡಿದ್ದಾರೆ.
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ಪ್ರಕರಣ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನ್ ಕಂಟ್ರೊಲ್ಡ್ ಕ್ರೌಡ್ ಆಯ್ತು. ಹೀಗಾಗಿ ತೆರೆದ ವಾಹನದಲ್ಲಿ ವಿಜಯೋತ್ಸವ ಮೆರವಣಿಗೆ ರದ್ದು ಮಾಡಿದ್ದೆವು. ಪರಿಸ್ಥಿತಿ ಬಗ್ಗೆ ಬೆಳಿಗ್ಗೆನೆ ಗಮನಿಸಿದ್ದೇವು. ಅದಕ್ಕೆ ನಾವು ಮೆರವಣಿಗೆಯನ್ನು ರದ್ದು ಮಾಡಿ, ಕ್ಲೋಸ್ ವಾಹನದಲ್ಲಿ ಆಟಗಾರರನು ಕರೆತಂದೆವು ಎಂದು ವಿವರಿಸಿದರು.
ನಾವು ಅನೇಕ ಸಿದ್ಧತೆ ಮಾಡಿಕೊಂಡಿದ್ದೇವು. ಆದರೂ, ಹೀಗಾಗಿದೆ. ಆಸ್ಪತ್ರೆಗೆ ಹೋಗಿ ಮಾಹಿತಿ ಪಡೆಯುತ್ತೇನೆ ಎಂದಿದ್ದಾರೆ.
ಇನ್ನೂ ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಹಾಕಿರುವ ಡಿಕೆಶಿ, ಆರ್‌ಸಿಬಿಯ ಐಪಿಎಲ್ ಗೆಲುವಿನ ಸಂಭ್ರಮಾಚರಣೆಗೆ ಸಾಕ್ಷಿಯಾಗಬೇಕಿದ್ದ ಜನರು
ದುರಂತಕ್ಕೆ ಒಳಗಾಗಿ, ಮೃತಪಟ್ಟಿರುವುದು ತೀವ್ರ ನೋವು ಮತ್ತು ಆಘಾತ ತಂದಿದೆ. ಮೃತರಿಗೆ ನನ್ನ ಸಂತಾಪಗಳು. ಅವರ ಕುಟುಂಬಕ್ಕೆ ನನ್ನ ಸಾಂತ್ವನಗಳು. ಅಭಿಮಾನ ಇರಲಿ, ಆದರೆ ಜೀವಕ್ಕಿಂತ ದೊಡ್ಡದಲ್ಲ. ದಯವಿಟ್ಟು ಎಲ್ಲರೂ ಸುರಕ್ಷಿತವಾಗಿರಿ ಎಂದು ಮನವಿ ಮಾಡಿಕೊಳ್ಳುತ್ತೇನೆ ಎಂದು ತಿಳಿಸಿದ್ದಾರೆ.
ಚಾಮರಾಜನಗರ : ಆರು ತಿಂಗಳ ಹೆಣ್ಣು ಮಗುವನ್ನು ಮಾರಾಟ ಮಾಡಿರುವ ಪ್ರಕರಣ ನಗರದಲ್ಲಿ ನಡೆದಿದ್ದು, ಈ ಸಂಬಂಧ ಪೋಷಕರು ಸೇರಿದಂತೆ…
ಹನೂರು : ಜಮೀನಿನಲ್ಲಿ ಹುರುಳಿ ಫಸಲನ್ನು ಹಸು ಮೇಯ್ದಿದ್ದದನ್ನು ಪ್ರಶ್ನೆಸಿದ್ದಕ್ಕೆ ವೃದ್ಧೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿರುವ ಅಮಾನವೀಯ ಘಟನೆ…
ಹಾಸನ : ಮುಂದಿನ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಸಿದ್ಧತೆ ನಡೆಸುವ ಸಂದೇಶವನ್ನು ರಾಜ್ಯದ ಜನರಿಗೆ ತಲುಪಿಸುವ ಗುರಿಯೊಂದಿಗೆ ನಗರದಲ್ಲಿ ಆಯೋಜಿಸಿದ್ದ…
ಮಳವಳ್ಳಿ : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಹತ್ತುಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಹೊಸಹಳ್ಳಿ…
ನಂಜನಗೂಡು : ಶ್ರೀಕಂಠೇಶ್ವರ ದೇವಾಲಯದ ಆವರಣದಲ್ಲಿನ ಅನಧಿಕೃತ ಅಂಗಡಿಗಳನ್ನು ಇಂದು(ಜ.24) ಮತ್ತೋಮ್ಮೆ ತೆರವು ಗೊಳಿಸಲಾಯಿತು. ದೇವಾಲಯದ ನೂತನ ಕಾರ್ಯನಿರ್ವಾಹಕ ಅಧಿಕಾರ…
ಮುಂಬೈ : ಸೌದಿ ಅರೇಬಿಯಾದಿಂದ ಅಂತರರಾಷ್ಟ್ರೀಯ ಕೊರಿಯರ್ ಟರ್ಮಿನಲ್‌ನಲ್ಲಿ ಸಾಗಿಸುತ್ತಿದ್ದ ಗ್ರೈಂಡರ್‌ನಲ್ಲಿ ಬಚ್ಚಿಟ್ಟಿದ್ದ 2.89 ಕೋಟಿ ರೂ.ಮೌಲ್ಯದ ಚಿನ್ನವನ್ನು ಕಂದಾಯ…