ರಾಜ್ಯ

ಜಾತಿ ಗಣತಿಯಲ್ಲಿ ಮೂಲ ಪ್ರತಿಗಳು ಲಭ್ಯವಿಲ್ಲ: ಆರ್.‌ಅಶೋಕ್‌ ಹೇಳಿಕೆಗೆ ಡಿ.ಕೆ.ಶಿವಕುಮಾರ್‌ ತಿರುಗೇಟು

ಬೆಂಗಳೂರು: ಜಾತಿಗಣತಿಯಲ್ಲಿ ಮೂಲಪ್ರತಿಗಳು ಲಭ್ಯವಿಲ್ಲ ಎಂಬ ಆರೋಪ ನಿರಾಧಾರ. ವಿರೋಧ ಪಕ್ಷದ ನಾಯಕ ಆರ್.ಅಶೋಕ್ ತಪ್ಪು ಹೇಳಿಕೆ ನೀಡಬಾರದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾತಿಗಣತಿಯ ವರದಿಯನ್ನು ಹಿಂದುಳಿದ ವರ್ಗಗಳ ಆಯೋಗ ಮುಚ್ಚಿದ ಲಕೋಟೆಯಲ್ಲಿ ಸರ್ಕಾರಕ್ಕೆ ಸಲ್ಲಿಸಿತ್ತು. ಅವರು ಹೇಗೆ ಸುಳ್ಳು ಹೇಳಲು ಸಾಧ್ಯ ಎಂದು ಪ್ರಶ್ನಿಸಿದರು.

ಒಂದು ವೇಳೆ ಆರ್.ಅಶೋಕ್‍ರವರಿಗೆ ಅನುಮಾನವಿದ್ದರೆ ಜಯಪ್ರಕಾಶ್ ಹೆಗ್ಡೆಯವರನ್ನೇ ನೇರವಾಗಿ ಕೇಳಬಹುದು. ಅದನ್ನು ಬಿಟ್ಟು ಸುಳ್ಳು ಹೇಳುವುದೇಕೆ?, ಜವಾಬ್ದಾರಿಯುತ ಸ್ಥಾನದಲ್ಲಿರುವವರು ಎಚ್ಚರಿಕೆಯಿಂದ ಮಾತನಾಡಬೇಕು ಎಂದರು.

ಇನ್ನು ಸಿಇಟಿ ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಸಿಇಟಿ ಪರೀಕ್ಷೆಯಲ್ಲಿ ಜನಿವಾರ ತೆಗೆಸಬಾರದಿತ್ತು. ಈ ಸಂಪ್ರದಾಯ ಸರಿಯಲ್ಲ. ಜನಿವಾರ, ಲಿಂಗ ಸೇರಿದಂತೆ ಧಾರ್ಮಿಕವಾಗಿ ಅನೇಕ ಆಚರಣೆಗಳಿರುತ್ತವೆ.

ಮಹಿಳೆಯರು ಮಾಂಗಲ್ಯ ಸರ ಕೂಡ ಹಾಕಿರುತ್ತಾರೆ. ಇದನ್ನೆಲ್ಲಾ ತೆಗೆಸುವುದು ಒಳ್ಳೆಯ ನಿರ್ಧಾರವಲ್ಲ. ಪರೀಕ್ಷಾ ವೇಳೆ ತಪಾಸಣೆಗಾಗಿ ಎಲೆಕ್ಟ್ರಾನಿಕ್ ಉಪಕರಣಗಳನ್ನು ಅಳವಡಿಸಲಾಗಿರುತ್ತದೆ. ಪೊಲೀಸರು ತಪಾಸಣೆ ಮಾಡಿದ್ದಾರೆ. ಈ ಸಂದರ್ಭದಲ್ಲಿ ಧಾರ್ಮಿಕ ವಿಚಾರಕ್ಕೆ ಧಕ್ಕೆಯಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಸಲಹೆ ನೀಡಿದರು.

ಆಂದೋಲನ ಡೆಸ್ಕ್

Recent Posts

ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ಬಂಧನ ನೋಟಿಸ್‌ ಹಿಂಪಡೆದ ಕೋರ್ಟ್‌

ಮೈಸೂರು: ಮೈಸೂರು ಹೆಚ್ಚುವರಿ ಸಿವಿಲ್‌ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ವಿಚಾರಣೆ (ಜಯರಾಮು ಆರ್‌ ವಿರುದ್ಧ ಕರ್ನಾಟಕ ರಾಜ್ಯ) ಪ್ರಕರಣದಲ್ಲಿ…

2 hours ago

ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದ ಹುಲಿ ಪೃಥ್ವಿ ಇನ್ನಿಲ್ಲ

ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದ ಹುಲಿ ಪೃಥ್ವಿ ಇನ್ನಿಲ್ಲ ಮೈಸೂರು ಮೃಗಾಲಯದ ಪ್ರಮುಖ ಆಕರ್ಷಣೆಯಾಗಿದ್ದ ಪ್ರವಾಸಿಗರ ಮನಗೆದ್ದಿದ್ದ ಹೆಮ್ಮೆಯ ಹುಲಿ…

5 hours ago

ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಬಂಧನ

ಬೆಂಗಳೂರು: 42ನೇ ಎಸಿಜೆಎಂ ನ್ಯಾಯಾಲಯ ಅರೆಸ್ಟ್‌ ವಾರೆಂಟ್‌ ಜಾರಿಯ ಹಿನ್ನೆಲೆಯಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಅವರನ್ನು ಪೊಲೀಸರು ಬಂಧಿಸಿದ್ದಾರೆ.…

5 hours ago

ಮಡಿಕೇರಿ| ಗಾಂಜಾ ಮಾರಾಟ: ಮೈಸೂರು ಮೂಲದ ನಾಲ್ವರ ಬಂಧನ

ಮಡಿಕೇರಿ: ವಿರಾಜಪೇಟೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಮೈಸೂರು ಮೂಲದ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಕೊಡಗು…

6 hours ago

ಹನೂರು: ಚಿರತೆ ದಾಳಿಗೆ ಹಸುವಿಗೆ ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಿರತೆ ದಾಳಿ ನಡೆಸಿದ ಪರಿಣಾಮ ಹಸು ತೀವ್ರವಾಗಿ ಗಾಯಗೊಂಡಿರುವ ಘಟನೆ…

6 hours ago

ಹನೂರು: ಬಿಆರ್‌ಟಿ ವಲಯ ವ್ಯಾಪ್ತಿಯಲ್ಲಿ ಮತ್ತೆ ಕಾಡ್ಗಿಚ್ಚು: ಅರಣ್ಯ ಪ್ರದೇಶ ಸುಟ್ಟು ಭಸ್ಮ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್‌ಟಿ ಅರಣ್ಯ ಪ್ರದೇಶ ವ್ಯಾಪ್ತಿಯ ಲೊಕ್ಕನಹಳ್ಳಿ ಸಮೀಪದ ಹಾವಿನಮೂಲೆ…

6 hours ago