ವಿಜಯಪುರ: ಡಿಸಿಎಂ ಡಿಕೆ ಶಿವಕುಮಾರ್ ಶಿವರಾತ್ರಿ ಆಚರಣೆ ಅವರ ವೈಯುಕ್ತಿಕ ವಿಚಾರ. ಇದು ಪಕ್ಷದ ವಿರುದ್ಧ ಆಗುತ್ತಾ?, ಅವರು ಶಿವರಾತ್ರಿಗೆ ಹೋದರೆ ಏನಾಗುತ್ತದೆ ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಪ್ರಶ್ನಿಸಿದ್ದಾರೆ.
ಡಿಕೆ ಶಿವಕುಮಾರ್ ಶಿವರಾತ್ರಿ ಆಚರಣೆಗಾಗಿ ಕೊಯಮತ್ತೂರಿನ ಇಶಾ ಕೇಂದ್ರಕ್ಕೆ ಹೋಗಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ವಿಜಯಪುರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಡಿಕೆ ಶಿವಕುಮಾರ್ ಹಿಂದೂ ಅಲ್ವಾ. ಶಿವರಾತ್ರಿ ಆಚರಣೆ ಅವರ ವೈಯುಕ್ತಿಕ ವಿಚಾರ ಪಕ್ಷದಲ್ಲ. ನನ್ನ ವೈಯುಕ್ತಿಕ ವಿಚಾರ ಪಕ್ಷದಲ್ಲ. ಪಕ್ಷ ವಿಚಾರ ನನ್ನ ವೈಯುಕ್ತಿಕ ಅಲ್ಲ. ಹೀಗಾಗಿ ಒಂದಕ್ಕೊಂದು ಮಿಕ್ಸ್ ಮಾಡುವ ಅವಶ್ಯಕತೆ ಇಲ್ಲ ಎಂದು ಸಮರ್ಥಿಸಿಕೊಂಡರು.
ಅಮಿತ್ ಶಾ ಅವರ ಜೊತೆಯಲ್ಲಿ ಡಿಕೆ ಶಿವಕುಮಾರ್ ಅವರು ಶಿವರಾತ್ರಿ ಕಾರ್ಯಕ್ರಮದಲ್ಲಿ ಭಾಗಿ ಆದರೆ ಏನು ತಪ್ಪಿದೆ. ಅದು ವೈಯುಕ್ತಿಕ ವಿಚಾರ. ಅನೇಕ ಕಾರ್ಯಕ್ರಮಗಳಲ್ಲಿ ನಮ್ಮನ್ನು ಕರೆದಿರುತ್ತಾರೆ, ಅವರನ್ನು ಕರೆದಿರುತ್ತಾರೆ ಎಂದರು.
ಸಿಎಂ ಬದಲಾವಣೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಈ ಬಗ್ಗೆ ನಾನು ಯಾವುದೇ ಹೇಳಿಕೆ ನೀಡಬಾರದು ಎಂದು ತೀರ್ಮಾನಿಸಿದ್ದೇನೆ. ಈ ವಿಚಾರ ಹೈಕಮಾಂಡ್‌ಗೆ ಬಿಟ್ಟಿದ್ದು ಎಂದು ತಿಳಿಸಿದರು.
‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…
ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…
ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…
ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…
ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್ ಅಕಾಡೆಮಿ ಮೈಸೂರು ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…
ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…