ರಾಜ್ಯ

ಬಿಜೆಪಿಗರ ರ್ಯಾಲಿ ಧರ್ಮಸ್ಥಳದ ಪರ, ನ್ಯಾಯದ ಪರ ಅಲ್ಲ ಎಂದ ಡಿಕೆಶಿ

ಬೆಂಗಳೂರು: ಬಿಜೆಪಿಗರು ರ್ಯಾಲಿ ಮಾಡುತ್ತಿರುವುದು ಧರ್ಮಸ್ಥಳದ ಪರವಾಗಿಯೇ ಹೊರತು ನ್ಯಾಯದ ಪರ ಅಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಬಿಜೆಪಿ ನಾಯಕರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಧರ್ಮಸ್ಥಳದ ಮೇಲೆ ಬಂದಿರುವ ಆರೋಪಿಗಳಿಗೆ ಮುಕ್ತಿ ಸಿಗಲಿ, ಅದು ಸತ್ಯನಾ ಅಥವಾ ಸುಳ್ಳಾ ಅನ್ನೋದು ಜನಕ್ಕೆ ಗೊತ್ತಾಗಲಿ ಎಂದು ಎಸ್‌ಐಟಿ ರಚನೆ ಮಾಡಿದ್ದೇವೆ. ಅದರಲ್ಲಿ ಈಗ ಏನು ಸಿಕ್ಕಿಲ್ಲ ಎಂದು ಗೊತ್ತಾದ ಮೇಲೆ ಬಿಜೆಪಿಗರು ಧರ್ಮಸ್ಥಳದ ಪರವಾಗಿ ರ್ಯಾಲಿ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಇಷ್ಟು ದಿನ ರ್ಯಾಲಿ ಯಾಕೆ ಮಾಡಲಿಲ್ಲ? ಎಂದು ಪ್ರಶ್ನೆ ಮಾಡಿದ ಅವರು, ಎಸ್‌ಐಟಿ ರಚನೆ ಆದಾಗ ಯಾಕೆ ಅವರು ಮಾತಾಡಲಿಲ್ಲ. ಈಗ ರಾಜಕೀಯ ಮಾಡೋಕೆ ಬಂದಿದ್ದಾರೆ. ಇದು ಧರ್ಮಸ್ಥಳ ಪರ ರ್ಯಾಲಿ ಅನ್ನೋದಕ್ಕಿಂತ ಬಿಜೆಪಿಯ ರಾಜಕೀಯ ರ್ಯಾಲಿ ಎನ್ನಬಹುದು ಎಂದು ಟೀಕೆ ಮಾಡಿದರು.

ಆಂದೋಲನ ಡೆಸ್ಕ್

Recent Posts

ಮಾದಕ ವಸ್ತು ಪತ್ತೆ ; ನಾಲ್ವರು ಸಿಸಿಬಿ ವಶಕ್ಕೆ

ಮೈಸೂರು : ಮಾದಕ ವ್ಯಸನ ಮುಕ್ತ ಮೈಸೂರು ವಿಮುಕ್ತಿ ಅಭಿಯಾನದ ಮುಂದುವರಿದ ಕಾರ್ಯಾಚರಣೆಯಲ್ಲಿ ಸಿಸಿಬಿ ಪೊಲೀಸರು ನಾಲ್ವರನ್ನು ಬಂಧಿಸಿ ಸುಮಾರು…

11 hours ago

ಏಳು ವಿದೇಶಿಯರ ಬಂಧಿಸಿದ ಎನ್‌ಐಎ

ಹೊಸದಿಲ್ಲಿ : ಭಾರತೀಯ ದಂಗೆಕೋರ ಗುಂಪುಗಳೊಂದಿಗೆ ಸಂಬಂಧ ಹೊಂದಿರುವ ಜನಾಂಗೀಯ ಯುದ್ಧ ಗುಂಪುಗಳನ್ನು ಸಂಪರ್ಕಿಸಲು ಮತ್ತು ತರಬೇತಿ ನೀಡಲು ಅಕ್ರಮವಾಗಿ…

13 hours ago

ಮೈಸೂರು | ಆಕಸ್ಮಿಕ ಬೆಂಕಿಗೆ ವ್ಯಕ್ತಿ ಸಜೀವ ದಹನ

ಮೈಸೂರು : ಸ್ಥಗಿತಗೊಂಡಿದ್ದ ಚಿತ್ರಮಂದಿರದ ಆವರಣದಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಅಲ್ಲಿನ ವಾಚ್‌ಮನ್ ಒಬ್ಬರು ಸಜೀವ ದಹನಗೊಂಡ ದಾರುಣ…

14 hours ago

ಎಸ್‌ಎಸ್‌ಎಲ್‌ಸಿ ಪರೀಕ್ಷೆ : ವಿದ್ಯಾರ್ಥಿಗಳಿಗೆ ಶುಭಕೋರಿದ ಸಿಎಂ

ಬೆಂಗಳೂರು : 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾ.18ರಿಂದ ಪ್ರಾರಂಭವಾಗುತ್ತಿದ್ದು, ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…

14 hours ago

ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಸಂಭ್ರಮ : ಮಾದಪ್ಪನಿಗೆ ಎಣ್ಣೆಮಜ್ಜನ

ಹನೂರು : ರಾಜ್ಯದ ಪ್ರಸಿದ್ದ ಧಾರ್ಮಿಕ ಯಾತ್ರಸ್ಥಳ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಯುಗಾದಿ ಜಾತ್ರಾ ಮಹೋತ್ಸವ ಹಿನ್ನೆಲೆ ಮಂಗಳವಾರ…

14 hours ago

ಕುಡಿಯುವ ನೀರು ಸಮಸ್ಯೆಗೆ ಸರ್ಕಾರದ ಕ್ರಮವೇನು? : ಅಧಿವೇಶನದಲ್ಲಿ ಎಂಎಲ್‌ಎ ಮಂಜುನಾಥ್‌ ಪ್ರಶ್ನೆ

ಹನೂರು : ತಾಲೂಕು ವ್ಯಾಪ್ತಿಯ ಒಂಬತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು ಶಾಶ್ವತ ಪರಿಹಾರಕ್ಕೆ ಸರ್ಕಾರ…

14 hours ago