Mysore
25
clear sky

Social Media

ಸೋಮವಾರ, 05 ಜನವರಿ 2026
Light
Dark

ಇವಿಎಂ ಹ್ಯಾಕ್‌ ಬಗ್ಗೆ ಮಾಸ್ಕ್‌ ಹೇಳಿಕೆ ಬೆಂಬಲಿಸಿದ ಡಿಸಿಎಂ ಡಿಕೆ ಶಿವಕುಮಾರ್‌

ಮೈಸೂರು: ವಿಶ್ವದ ಶ್ರೇಷ್ಠ ತಂತ್ರಜ್ಞಾನ ನಿಪುಣ ಟೆಸ್ಲಾ ಕಂಪೆನಿ ಒಡೆಯ ಎಲಾನ್‌ ಮಸ್ಕ್‌ ಅವರು ಇತ್ತೀಚೆಗೆ ಭಾರತದ ಸಾರ್ವತ್ರಿಕ ಚುನಾವಣೆಯಲ್ಲಿ ಬಳಸಲಾದ ಇವಿಎಂ ಗಳನ್ನು ಹ್ಯಾಕ್‌ ಮಾಡಬಹುದು ಎಂದು ಹೇಳಿದ್ದರು.

ಇದಕ್ಕೆ ದೇಶಾದ್ಯಂತ ಹಲವಾರು ಟೀಕೆಗಳು, ಪರ-ವಿರೋಧಗಳು ವ್ಯಕ್ತವಾಗಿದ್ದವು. ರಾಷ್ಟ್ರೀಯ ಚುನಾವಣಾ ಆಯೋಗವು ಸಹಾ ಎಲಾನ್‌ ಮಸ್ಕ್‌ ಅವರಿಗೆ ಬಹಿರಂಗ ಸವಾಲು ಹಾಕಿತ್ತು. ಇನ್ನು ಎಲಾನ್‌ ಮಸ್ಕ್‌ ಅವರನ್ನು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಬೆಂಬಲಿಸದ್ದರು. ಈಗ ಅವರ ಸಾಲಿಗೆ ರಾಜ್ಯದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರು ಸೇರಿದ್ದು, ಎಲಾನ್‌ ಮಸ್ಕ್‌ ಹೇಳಿಕೆಯನ್ನು ಬೆಂಬಲಿಸಿದ್ದಾರೆ.

ಈ ಸಂಬಂಧ ತಮ್ಮ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿರುವ ಡಿಸಿಎಂ ಡಿಕೆ ಶಿವಕುಮಾರ್‌ ಅವರು, ವಿಶ್ವದ ಶ್ರೇಷ್ಠ ತಂತ್ರಜ್ಞಾನ ನಿಪುಣನೆ ಭಾರತದ ಚುನಾವಣೆಯಲ್ಲಿ ಬಳಸಿರುವ ಇವಿಎಂಗಳ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ ಎಂದರೆ ಇದು ಭಾರತದಲ್ಲಿ ನಡೆದ ಮತದಾನ ಪ್ರಕ್ರಿಯೆಗಳ ಬಗ್ಗೆ ಆತಂಕ ಮೂಡಿಸುತ್ತದೆ ಎಂದು ಅಚ್ಚರಿ ವ್ಯಕ್ತಪಡಿಸಿದ್ದಾರೆ.

ಡಿಕೆ ಟ್ವೀಟ್‌ನಲ್ಲೇನಿದೆ? : ಮಸುಕಾʼಗಿದ್ದ ಅನುಮಾನ ಈಗ ತೀಕ್ಷ್ಣ! ತಂತ್ರಜ್ಞಾನ ನಿಪುಣ ಎಂದು ಇಡೀ ಪ್ರಪಂಚವೇ ಒಪ್ಪಿಕೊಂಡಿರುವ ಎಲಾನ್‌ ಮಸ್ಕ್‌ ಅವರೇ ಇವಿಎಂಗಳ ಮೇಲೆ ವ್ಯಕ್ತಪಡಿಸಿರುವ ಅನುಮಾನವು ಭಾರತದಲ್ಲಿ ನಡೆದ ಮತದಾನ ಪ್ರಕ್ರಿಯೆಗಳ ಬಗ್ಗೆ ಆತಂಕ ಮೂಡಿಸಿದೆ. ಚುನಾವಣೆಯ ನಂತರ ದೇಶದ ಕೆಲವೆಡೆ ನಡೆಯುತ್ತಿರುವ ಘಟನೆಗಳಿಗೂ ಮಸ್ಕ್‌ ಅವರ ಹೇಳಿಕೆಗೂ ತಾಳೆಯಾಗುತ್ತಿದೆ. ಚುನಾವಣೆ ವ್ಯವಸ್ಥೆಯೇ ಪಾರದರ್ಶಕವಾಗಿರದಿದ್ದರೆ ಜನಾದೇಶ ಯಾರ ಕಡೆ ಇದೆ ಎಂದು ತಿಳಿಯುವುದಾದರೂ ಹೇಗೆ? ಇವಿಎಂಗಳ ಸತ್ಯಾಸತ್ಯತೆ ಬಗ್ಗೆ ಈಗ ಪ್ರಪಂಚಕ್ಕೇ ಅರ್ಥವಾಗಿದೆ. ಭಾರತಕ್ಕೂ ಆ ಕಾಲ ಸನ್ನಿಹಿತವಾಗಿದೆ ಎಂದು ತಮ್ಮ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

Tags:
error: Content is protected !!