ಬೆಂಗಳೂರು: ಅಚ್ಚರಿ ಗೆಲುವಿನ ಮೂಲಕ ಕನಕಪುರ ಬಂಡೆಯ ಸುಭದ್ರ ಕೋಟೆಯಾದ ಬೆಂಗಳೂರು ಗ್ರಾಮಾಂತರದಲ್ಲಿ ಡಾ. ಸಿಎನ್ ಮಂಜುನಾಥ್ ಅವರು ಗೆಲುವಿನ ಪತಾಕೆ ಹಾರಿಸಿದ್ದಾರೆ. ಆ ಮೂಲಕ ರಾಜ್ಯದಲ್ಲಿ ಮೈತ್ರಿ ಒಕ್ಕೂಟವು ಈ ಬಾರಿ ರಾಜ್ಯದಲ್ಲಿ ಉತ್ತಮ ಪ್ರದರ್ಶನ ತೋರಿದೆ.
ಇಂದು (ಜೂನ್.4) ದೇಶಾದ್ಯಂತ ಲೋಕಸಭಾ ಚುನಾವಣಾ ಮತೆ ಎಣಿಕೆ ಪ್ರಕ್ರಿಯೆ ನಡೆಯುತ್ತಿದೆ. ಬೆಂಗಳೂರು ಗ್ರಾಮಾಂತರದಲ್ಲಿ ಸ್ಪರ್ಧಿಸಿದ್ದ ಬಿಜೆಪಿ ಅಭ್ಯರ್ಥಿ ಡಾ. ಸಿಎನ್ ಮಂಜುನಾಥ್ ಅವರು ಕಾಂಗ್ರೆಸ್ ಅಭ್ಯರ್ಥಿ ಡಿಕೆ ಸುರೇಶ್ ಅವರನ್ನು ಹೀನಾಯವಾಗಿ ಸೋಲಿಸಿದ್ದಾರೆ.
ಇನ್ನು ಈ ಸೋಲಿನ ಬಳಿಕ ಮೊದಲ ಬಾರಿಗೆ ಡಿಕೆ ಸುರೇಶ್ ಅವರು ಮಾಧ್ಯಮದ ಜತೆ ಮಾತನಾಡಿದ್ದಾರೆ. ಜನರ ತೀರ್ಮಾನವೇ ಅಂತಿಮ ಇದನ್ನು ನಾನು ಗೌರವದಿಂದ ಸ್ವೀಕರಿಸುತ್ತೇನೆ. ಡಾ.ಸಿಎನ್ ಮಂಜುನಾಥ್ ಅವರಿಗೆ ನನ್ನ ಶುಭಾಷಯಗಳು. ನೂತನ ಸಂಸದರಾದ ಮಂಜುನಾಥ್ ಅವರು ಈ ಕ್ಷೇತ್ರದಲ್ಲಿ ಒಳ್ಳೆಯ ಕೆಲಸವನ್ನು ಮಾಡಲಿ ಎಂದು ಆಶಿಸುತ್ತೇನೆ. ಕ್ಷೇತ್ರದ ಬೆಳವಣಿಗೆಗೆ ನಮ್ಮ ಸಹಕಾರ ನಿಮ್ಮೊಂದಿಗಿರುತ್ತದೆ ಶುಭವಾಗಲಿ ಎಂದು ಟ್ವೀಟ್ ಮಾಡಿದ್ದಾರೆ.