ರಾಜ್ಯ

ಜನರ ತೀರ್ಪನ್ನು ಗೌರವದಿಂದ ಸ್ವಾಗತಿಸುತ್ತೇನೆ: ಸೋಲಿನ ಬಳಿಕ ಡಿಕೆ ಸುರೇಶ್‌ ರಿಯಾಕ್ಷನ್‌!

ಬೆಂಗಳೂರು: ಅಚ್ಚರಿ ಗೆಲುವಿನ ಮೂಲಕ ಕನಕಪುರ ಬಂಡೆಯ ಸುಭದ್ರ ಕೋಟೆಯಾದ ಬೆಂಗಳೂರು ಗ್ರಾಮಾಂತರದಲ್ಲಿ ಡಾ. ಸಿಎನ್‌ ಮಂಜುನಾಥ್‌ ಅವರು ಗೆಲುವಿನ ಪತಾಕೆ ಹಾರಿಸಿದ್ದಾರೆ. ಆ ಮೂಲಕ ರಾಜ್ಯದಲ್ಲಿ ಮೈತ್ರಿ ಒಕ್ಕೂಟವು ಈ ಬಾರಿ ರಾಜ್ಯದಲ್ಲಿ ಉತ್ತಮ ಪ್ರದರ್ಶನ ತೋರಿದೆ.

ಇಂದು (ಜೂನ್‌.4) ದೇಶಾದ್ಯಂತ ಲೋಕಸಭಾ ಚುನಾವಣಾ ಮತೆ ಎಣಿಕೆ ಪ್ರಕ್ರಿಯೆ ನಡೆಯುತ್ತಿದೆ. ಬೆಂಗಳೂರು ಗ್ರಾಮಾಂತರದಲ್ಲಿ ಸ್ಪರ್ಧಿಸಿದ್ದ ಬಿಜೆಪಿ ಅಭ್ಯರ್ಥಿ ಡಾ. ಸಿಎನ್‌ ಮಂಜುನಾಥ್‌ ಅವರು ಕಾಂಗ್ರೆಸ್‌ ಅಭ್ಯರ್ಥಿ ಡಿಕೆ ಸುರೇಶ್‌ ಅವರನ್ನು ಹೀನಾಯವಾಗಿ ಸೋಲಿಸಿದ್ದಾರೆ.

ಇನ್ನು ಈ ಸೋಲಿನ ಬಳಿಕ ಮೊದಲ ಬಾರಿಗೆ ಡಿಕೆ ಸುರೇಶ್‌ ಅವರು ಮಾಧ್ಯಮದ ಜತೆ ಮಾತನಾಡಿದ್ದಾರೆ. ಜನರ ತೀರ್ಮಾನವೇ ಅಂತಿಮ ಇದನ್ನು ನಾನು ಗೌರವದಿಂದ ಸ್ವೀಕರಿಸುತ್ತೇನೆ. ಡಾ.ಸಿಎನ್‌ ಮಂಜುನಾಥ್‌ ಅವರಿಗೆ ನನ್ನ ಶುಭಾಷಯಗಳು. ನೂತನ ಸಂಸದರಾದ ಮಂಜುನಾಥ್‌ ಅವರು ಈ ಕ್ಷೇತ್ರದಲ್ಲಿ ಒಳ್ಳೆಯ ಕೆಲಸವನ್ನು ಮಾಡಲಿ ಎಂದು ಆಶಿಸುತ್ತೇನೆ. ಕ್ಷೇತ್ರದ ಬೆಳವಣಿಗೆಗೆ ನಮ್ಮ ಸಹಕಾರ ನಿಮ್ಮೊಂದಿಗಿರುತ್ತದೆ ಶುಭವಾಗಲಿ ಎಂದು ಟ್ವೀಟ್‌ ಮಾಡಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಬಿಸಿ ಗಾಳಿ ; ಸಮವಸ್ತ್ರ ಕಡ್ಡಾಯಗೊಳಿಸದಂತೆ ಜಿಲ್ಲಾಧಿಕಾರಿ ಆದೇಶ

ಚಾಮರಾಜನಗರ : ತೀವ್ರ ಬಿಸಿ ಗಾಳಿ (ಹೀಟ್ ವೇವ್) ಇರುವುದರಿಂದ ಜಿಲ್ಲೆಯ ಎಲ್ಲಾ ಖಾಸಗಿ ಅನುದಾನಿತ, ಅನುದಾನರಹಿತ ಹಾಗೂ ಸರ್ಕಾರಿ…

52 mins ago

ಪಿರಿಯಾಪಟ್ಟಣ : ಈಜಲು ನೀರಿಗಿಳಿದಿ ಯುವಕರಿಬ್ಬರು ಸಾವು

ಪಿರಿಯಾಪಟ್ಟಣ : ಕಾವೇರಿ ನದಿಯಲ್ಲಿ ಈಜಲು ಹೋಗಿ ಇಬ್ಬರು ಯುವಕರು ಸಾವಿಗೀಡಾಗಿರುವ ಘಟನೆ ದೊಡ್ಡ ಹರವೆ ಬಳಿ ನಡೆದಿದೆ. ಪಿರಿಯಾಪಟ್ಟಣದಲ್ಲಿ…

57 mins ago

ನಮ್ಮ ಹಕ್ಕು ಕಸಿಯಲು ಅಮೆರಿಕ ಯಾರು? ; ಟ್ರಂಪ್‌ ವಿರುದ್ಧ ಇರಾನ್‌ ವಾಗ್ದಾಳಿ

ಟೆಹ್ರಾನ್ : ಇರಾನ್‌ನ ಪರಮಾಣು ಯೋಜನೆಯ ಸುತ್ತಲಿನ ಅಂತಾರಾಷ್ಟ್ರೀಯ ಬಿಕ್ಕಟ್ಟು ಮತ್ತೆ ತಾರಕಕ್ಕೇರಿದೆ. ಒಂದು ರಾಷ್ಟ್ರದ ಕಾನೂನುಬದ್ಧ ಹಕ್ಕುಗಳನ್ನು ಕಸಿದುಕೊಳ್ಳಲು…

1 hour ago

ಕಾವೇರಿ ನದಿಯಲ್ಲಿ ಆರು ಜನ ಸಾವು ; ಸಾವಿಗೀಡಾದವರೆಲ್ಲರೂ ಒಂದೇ ಕುಟುಂಬದವರು

ಕೆ.ಆರ್.ನಗರ : ತಾಲ್ಲೂಕಿನ ಹೊರವಲಯದ ಅರ್ಕೇಶ್ವರ ದೇಗುಲ ಬಳಿಯ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ಸಾವನ್ನಪ್ಪಿದ ಆರು ಮಂದಿಯೂ ಒಂದೇ…

11 hours ago

ಚಾ.ನಗರ ಆಕ್ಸಿಜನ್‌ ದುರಂತ : ಸಂತ್ರಸ್ಥರಿಗೆ ಕೊನೆಗೂ ಒಲಿದ ಸರ್ಕಾರಿ ನೌಕರಿ

ಚಾಮರಾಜನಗರ : ಕೋವಿಡ್ ವೇಳೆಯಲ್ಲಿ ನಗರದ ಜಿಲ್ಲಾಸ್ಪತ್ರೆಯಲ್ಲಿ (ಈಗ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ) ಸಂಭವಿಸಿದ್ದ ಆಕ್ಸಿಜನ್ ದುರಂತದಲ್ಲಿ 36…

11 hours ago

ಏ.20, 21 ರಂದು ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ

ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏ.20 ಹಾಗೂ 21ರಂದು ಮೈಸೂರು ಹಾಗೂ ಚಾಮರಾಜನಗರ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. 20ರಂದು…

12 hours ago