ರಾಮನಗರ: ಜಿಲ್ಲೆಯ ಕನಕಪುರ ವಿಧಾನಸಭಾ ಕ್ಷೇತ್ರದಲ್ಲಿ ಲೋಕಸಭಾ ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸಿದ ಅಪಾರ ಅಭಿಮಾನಿಗಳಿಗೆ ಕೃತಜ್ಞತೆ ಸಮಾರಂಭದಲ್ಲಿ ಡಿಕೆ ಸುರೇಶ್ ಅವರು ಭಾವುಕರಾದರು.
ಇನ್ನು 18ನೇ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಸ್ಪರ್ಧಿಸಿದ್ದ ಡಿಕೆ ಸುರೇಶ್, ಮೈತ್ರಿ ಅಭ್ಯರ್ಥಿ ಡಾ. ಸಿಎನ್ ಮಂಜುನಾಥ್ ವಿರುದ್ಧ ಎರಡು ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಸೋಲು ಕಂಡಿದ್ದರು. ಈ ಚುನಾವಣೆಯಲ್ಲಿ ತಾವು ಸೋತ ಬಗ್ಗೆ ಮಾತನಾಡಿ, ಇದೊಂದು ಆಕಸ್ಮಿಕ ಸೋಲು ಇದು ಶಾಶ್ವತ ಸೋಲಲ್ಲ. ಸೋತೆ ಎಂದು ಕ್ಷೇತ್ರದಿಂದ ದೂರ ಉಳಿಯುವುದಿಲ್ಲ. ಜನರ ಒಳಿತಿಗಾಗಿ ಸದಾ ದುಡಿಯುತ್ತಿರುತ್ತೇನೆ ಎಂದರು
ಇದು ಚುನಾವಣಾ ಗೆಲುವಲ್ಲ, ನನ್ನ ಮೇಲಿನ ಆಕ್ರೋಶದ ಗೆಲುವಾಗಿದೆ. ಈ ಕ್ಷೇತ್ರದಲ್ಲಿ ಬಿಜೆಪಿಯೂ ಗೆದ್ದಿಲ್ಲ, ಜೆಡಿಎಸ್ ಕೂಡಾ ಗದ್ದಿಲ್ಲ ಎಂದು ಭಾವುಕರಾಗಿ ನುಡಿದರು.
ರಾಜಕೀಯವೆಂದರೆ ಅಧಿಕಾರವಲ್ಲ. ಅಧಿಕಾರಕ್ಕಾಗಿ ನಾನು ಯಾವತ್ತು ಆತುರ ಬಿದ್ದಿಲ್ಲ. ನಿಮ್ಮಲ್ಲಿ ಒಬ್ಬನಾಗಿ ಕೆಲಸ ಮಾಡಿದ್ದೇನೆ. ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಜತೆ ಸೇರಿ ಅಭಿವೃದ್ಧಿ ಕೆಲಸ ಮುಂದುವರೆಸಲು ಕಂಕಣ ಬದ್ಧನಾಗಿದ್ದೇನೆ ಎಂದು ಹೇಳಿದರು.
ಚಿತ್ರದುರ್ಗ: ಸಿಎಂ ಸ್ಥಾನಕ್ಕಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ ಬಕ ಪಕ್ಷಿಯಂತೆ ಕಾಯುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ವ್ಯಂಗ್ಯವಾಡಿದ್ದಾರೆ. ಈ ಕುರಿತು…
ಬಾಗಲಕೋಟೆ: ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿಯವರ ಪರವಾಗಿ ನಿರೀಕ್ಷೆಗೂ ಮೀರಿ ಜನಬೆಂಬಲ ವ್ಯಕ್ತವಾಗುತ್ತಿದೆ ಎಂದು…
ಇಸ್ಲಾಮಾಬಾದ್: ಭಾರತದಲ್ಲಿ ಈ ಹಿಂದೆ ನಡೆದಿದ್ದ ಹಲವಾರು ಭಯೋತ್ಪಾದಕ ಕೃತ್ಯಗಳಲ್ಲಿ ಭಾಗಿಯಾಗಿದ್ದ ಪಾಕಿಸ್ತಾನ ಮೂಲದ ಉಗ್ರಗಾಮಿ ಸಂಘಟನೆ ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ…
ಮಡಿಕೇರಿ: ಸಿದ್ದಾಪುರದಿಂದ ಮೈಸೂರಿಗೆ ಸಂಪರ್ಕ ಕಲ್ಪಿಸುವ ಮಾಲ್ದಾರೆ ಗ್ರಾಮ ಸಮೀಪದ ಕುಶಾಲನಗರ ಹಾಗೂ ದೇವಮತಿ ಅರಣ್ಯ ಪ್ರದೇಶದಲ್ಲಿ ಪ್ರವಾಸಿಗರಿಗೆ ಹುಲಿಯೊಂದು…
ಬೆಂಗಳೂರು: ನಾನು ಬಿಜೆಪಿಗೆ ಮರಳುವ ಚಿಂತನೆ ಮಾಡಿಲ್ಲ. ಕಾಂಗ್ರೆಸ್‌ಗೆ ಹೋಗುತ್ತೇನೆ ಎಂದು ಶಾಸಕ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ…
ನಳಂದಾ: ಬಿಹಾರದ ನಳಂದಾ ಜಿಲ್ಲೆಯ ಶೀತಲಾ ದೇವಸ್ಥಾನದ ಧಾರ್ಮಿಕ ಸಮಾರಂಭವೊಂದರಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ ಎಂಟು ಮಂದಿ ಮಹಿಳೆಯರು ಸಾವನ್ನಪ್ಪಿದ್ದಾರೆ.…