ಬೆಂಗಳೂರು : ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಚರ್ಚೆ ನಡೆಯುತ್ತಿರುವ ಹೊತ್ತಲ್ಲೇ ಡಿಸಿಎಂ ಡಿ.ಕೆ.ಶಿವಕುಮಾರ್‌ಗೆ ಹೈಕಮಾಂಡ್‌ನಿಂದ ಬುಲಾವ್ ಬಂದಿದೆ. ಇಂದು ಡಿಕೆಶಿ ದೆಹಲಿಗೆ ತೆರಳಲಿದ್ದಾರೆ.
ರಾಜ್ಯ ಗೊಂದಲದ ನಂತರ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಇಬ್ಬರನ್ನೂ ಕರೆಸಿ ಮಾತನಾಡಲು ಹೈಕಮಾಂಡ್ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಡಿಕೆಶಿ ದೆಹಲಿಗೆ ತೆರಳಲಿದ್ದಾರೆ.
ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಬಹುಮತದೊಂದಿಗೆ ಗೆಲುವು ಸಾಧಿಸಿದ ಬಳಿಕ ಸಿಎಂ ಗಾದಿಗಾಗಿ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಪೈಪೋಟಿ ನಡೆಸಿದ್ದರು. ಕೊನೆಗೆ ಸಿದ್ದರಾಮಯ್ಯ ಅವರು ಸಿಎಂ ಪಟ್ಟ ಅಲಂಕರಿಸಿದರು.
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು 100 ದಿನಗಳನ್ನೂ ಪೂರೈಸಿದೆ. ಆ ಸಂಭ್ರಮಾಚರಣೆ ಕೂಡ ನಡೆಯಿತು. ಆದರೆ ಪಕ್ಷದೊಳಗಿನ ಆಂತರಿಕ ಭಿನ್ನಾಭಿಪ್ರಾಯ, ಅಧಿಕಾರಕ್ಕಾಗಿನ ಪೈಪೋಟಿ ಇನ್ನೂ ನಿಂತಂತೆ ಕಾಣುತ್ತಿಲ್ಲ. ಸಿದ್ದು ಪರ ಶಾಸಕರು ಹಾಗೂ ನಾಯಕರು, ಸಿದ್ದರಾಮಯ್ಯ ಅವರೇ 5 ವರ್ಷ ಸಿಎಂ ಆಗಿ ಆಡಳಿತ ನಡೆಸಲಿದ್ದಾರೆ ಎಂದು ಹೇಳುತ್ತಿದ್ದಾರೆ. ಆದರೆ ಡಿಕೆಶಿ ಪರ ನಾಯಕರು ಮುಂದಿನ ಎರಡೂವರೆ ವರ್ಷ ಅವಧಿಗೆ ಡಿ.ಕೆ.ಶಿವಕುಮಾರ್ ಸಿಎಂ ಆಗಲಿದ್ದಾರೆ ಎಂದು ಹೇಳಿಕೆ ನೀಡುತ್ತಿದ್ದಾರೆ.
ಈ ಬೆಳವಣಿಗೆ ಪಕ್ಷದೊಳಗಿನ ನಾಯಕತ್ವದ ಭಿನ್ನಾಭಿಪ್ರಾಯಕ್ಕೆ ಕಾರಣವಾಗಿದೆ. ಇದು ವಿಪಕ್ಷಗಳಿಗೆ ವರದಾನವಾಗಿ ಪರಿಣಮಿಸಿದೆ. ಹೀಗಾಗಿ ಕಾಂಗ್ರೆಸ್ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಕಿಡಿಕಾರಿವೆ. ನಾಯಕತ್ವದ ಕಿತ್ತಾಟದಿಂದ ರಾಜ್ಯದ ಆಡಳಿತದಲ್ಲಿ ಅಭಿವೃದ್ಧಿ ಕ್ಷೀಣಿಸುತ್ತಿದೆ ಎಂದು ಟೀಕಿಸಿವೆ.
ಮಂಜು ಕೋಟೆ ಎಚ್.ಡಿ.ಕೋಟೆ: ಬಿಜೆಪಿ ಘಟಕದ ತಾಲ್ಲೂಕು ಅಧ್ಯಕ್ಷ ಹಿರೇಹಳ್ಳಿ ಶಂಭುಗೌಡ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು, ಅಧ್ಯಕ್ಷ ಸ್ಥಾನಕ್ಕೆ…
ರಾಜ್ಯ ಸರ್ಕಾರದ ಯುವನಿಧಿ ಯೋಜನೆ ಉದ್ದೇಶವು ವಿದ್ಯಾವಂತ ನಿರುದ್ಯೋಗಿ ಯುವಕ/ಯುವತಿಯರಿಗೆ ಉದ್ಯೋಗ ಸಿಗುವವರೆಗೆ ಆರ್ಥಿಕ ಸಹಾಯ ನೀಡುವುದಾಗಿದೆ. ಪದವೀಧರರಿಗೆ ಮಾಸಿಕ ೩,೦೦೦…
‘ಆಂದೋಲನ’ ವಿಶೇಷ ಸಂದರ್ಶನದಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೆಮ್ಮೆಯ ನುಡಿ' ಆಂದೋಲನ: ರಾಜ್ಯ ಸರ್ಕಾರಕ್ಕೆ ಸಾವಿರ ದಿನಗಳು ಭರ್ತಿಯಾಗಿವೆ.…
ಕೆ.ಬಿ.ರಮೇಶನಾಯಕ ವಿದ್ಯಾರಣ್ಯಪುರಂನ ಸಿವೇಜ್ ಫಾರಂನಲ್ಲಿ ಭರದಿಂದ ಸಾಗಿದ ಕಾಮಗಾರಿ ಮೈಸೂರು: ಎರಡು ದಶಕಗಳಿಗೂ ಹೆಚ್ಚು ಕಾಲದಿಂದ ಸ್ಥಳೀಯ ನಿವಾಸಿಗಳಿಗೆ ಕಂಟಕವಾಗಿದ್ದ…
ನ್ಯೂಯಾರ್ಕ್: ಅಮೆರಿಕದ ಕ್ಯಾಲಿಫೋರ್ನಿಯಾದ ಬರ್ಕ್ಲಿಯಲ್ಲಿ ಕಾಣೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ (22) ಅವರ ಮೃತದೇಹ ಪತ್ತೆಯಾಗಿದೆ ಎಂದು ಸ್ಯಾನ್…