ರಾಜ್ಯ

ಡಿಕೆಶಿಗೆ ಹೈಕಮಾಂಡ್‌ ಬುಲಾವ್‌ : ಇಂದು ಡಿಸಿಎಂ ದೆಹಲಿಗೆ

ಬೆಂಗಳೂರು : ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಚರ್ಚೆ ನಡೆಯುತ್ತಿರುವ ಹೊತ್ತಲ್ಲೇ ಡಿಸಿಎಂ ಡಿ.ಕೆ.ಶಿವಕುಮಾರ್‌ಗೆ ಹೈಕಮಾಂಡ್‌ನಿಂದ ಬುಲಾವ್‌ ಬಂದಿದೆ. ಇಂದು ಡಿಕೆಶಿ ದೆಹಲಿಗೆ ತೆರಳಲಿದ್ದಾರೆ.
ರಾಜ್ಯ ಗೊಂದಲದ ನಂತರ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್‌ ಇಬ್ಬರನ್ನೂ ಕರೆಸಿ ಮಾತನಾಡಲು ಹೈಕಮಾಂಡ್‌ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಡಿಕೆಶಿ ದೆಹಲಿಗೆ ತೆರಳಲಿದ್ದಾರೆ.

ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಬಹುಮತದೊಂದಿಗೆ ಗೆಲುವು ಸಾಧಿಸಿದ ಬಳಿಕ ಸಿಎಂ ಗಾದಿಗಾಗಿ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್‌ ಪೈಪೋಟಿ ನಡೆಸಿದ್ದರು. ಕೊನೆಗೆ ಸಿದ್ದರಾಮಯ್ಯ ಅವರು ಸಿಎಂ ಪಟ್ಟ ಅಲಂಕರಿಸಿದರು.

ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದು 100 ದಿನಗಳನ್ನೂ ಪೂರೈಸಿದೆ. ಆ ಸಂಭ್ರಮಾಚರಣೆ ಕೂಡ ನಡೆಯಿತು. ಆದರೆ ಪಕ್ಷದೊಳಗಿನ ಆಂತರಿಕ ಭಿನ್ನಾಭಿಪ್ರಾಯ, ಅಧಿಕಾರಕ್ಕಾಗಿನ ಪೈಪೋಟಿ ಇನ್ನೂ ನಿಂತಂತೆ ಕಾಣುತ್ತಿಲ್ಲ. ಸಿದ್ದು ಪರ ಶಾಸಕರು ಹಾಗೂ ನಾಯಕರು, ಸಿದ್ದರಾಮಯ್ಯ ಅವರೇ 5 ವರ್ಷ ಸಿಎಂ ಆಗಿ ಆಡಳಿತ ನಡೆಸಲಿದ್ದಾರೆ ಎಂದು ಹೇಳುತ್ತಿದ್ದಾರೆ. ಆದರೆ ಡಿಕೆಶಿ ಪರ ನಾಯಕರು ಮುಂದಿನ ಎರಡೂವರೆ ವರ್ಷ ಅವಧಿಗೆ ಡಿ.ಕೆ.ಶಿವಕುಮಾರ್‌ ಸಿಎಂ ಆಗಲಿದ್ದಾರೆ ಎಂದು ಹೇಳಿಕೆ ನೀಡುತ್ತಿದ್ದಾರೆ.

ಈ ಬೆಳವಣಿಗೆ ಪಕ್ಷದೊಳಗಿನ ನಾಯಕತ್ವದ ಭಿನ್ನಾಭಿಪ್ರಾಯಕ್ಕೆ ಕಾರಣವಾಗಿದೆ. ಇದು ವಿಪಕ್ಷಗಳಿಗೆ ವರದಾನವಾಗಿ ಪರಿಣಮಿಸಿದೆ. ಹೀಗಾಗಿ ಕಾಂಗ್ರೆಸ್‌ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್‌ ಪಕ್ಷಗಳು ಕಿಡಿಕಾರಿವೆ. ನಾಯಕತ್ವದ ಕಿತ್ತಾಟದಿಂದ ರಾಜ್ಯದ ಆಡಳಿತದಲ್ಲಿ ಅಭಿವೃದ್ಧಿ ಕ್ಷೀಣಿಸುತ್ತಿದೆ ಎಂದು ಟೀಕಿಸಿವೆ.

 

lokesh

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

11 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

15 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

15 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

15 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

15 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

15 hours ago