ರಾಜ್ಯ

25ನೇ ಸಿಎಂ ಆಗಿ ಇಂದು ಡಿಕೆಶಿ ಪ್ರಮಾಣ ವಚನ ; ಸಂಭ್ರಮದ ಸಿದ್ಧತೆ

ಬೆಂಗಳೂರು : ರಾಜ್ಯ ರಾಜಕಾರಣದ ಅತ್ಯಂತ ಮಹತ್ವದ ಘಟ್ಟಕ್ಕೆ ರಾಜಧಾನಿ ಬೆಂಗಳೂರು ಸಾಕ್ಷಿಯಾಗುತ್ತಿದ್ದು, ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಅವರು ಅಧಿಕಾರ ಸ್ವೀಕರಿಸಲು ಕ್ಷಣಗಣನೆ ಶುರುವಾಗಿದೆ.

ಲೋಕಭವನದ ಗಾಜಿನ ಮನೆ (ಗ್ಲಾಸ್ ಹೌಸ್) ಮದುವಣಗಿತ್ತಿಯಂತೆ ಕಂಗೊಳಿಸುತ್ತಿದ್ದು, ಇಂದು (ಜೂನ್ 3) ಸಂಜೆ ಸರಿಯಾಗಿ 4 ಗಂಟೆ 5 ನಿಮಿಷದ ಶುಭ ಮುಹೂರ್ತದಲ್ಲಿ ಡಿಕೆ ಶಿವಕುಮಾರ್ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರತಿಜ್ಞಾವಿಧಿ ಸ್ವೀಕರಿಸಲಿದ್ದಾರೆ.

ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ನೂತನ ಸಿಎಂಗೆ ಪ್ರತಿಜ್ಞಾವಿಧಿ ಬೋಧಿಸಲಿದ್ದಾರೆ. ಹೈಕಮಾಂಡ್ ಸೂಚನೆಯಂತೆ ಆಡಂಬರವಿಲ್ಲದೆ, ಅತ್ಯಂತ ಶಿಸ್ತುಬದ್ಧವಾಗಿ ಈ ಐತಿಹಾಸಿಕ ಸಮಾರಂಭ ನೆರವೇರಲಿದ್ದು, ಬೆಂಗಳೂರಿನಾದ್ಯಂತ ನಿಯೋಜಿತ ಸಿಎಂ ಅವರ ಬೃಹತ್ ಕಟೌಟ್‌ ಹಾಗೂ ಬ್ಯಾನರ್‌ಗಳು ರಾರಾಜಿಸುತ್ತಿವೆ.

ಮುಖ್ಯಮಂತ್ರಿ ಸ್ಥಾನಕ್ಕೆ ತಲುಪುವುದು ಬರೀ ಕನಸಾಗಿರಲಿಲ್ಲ, ಇದು ಕಠಿಣ ಪರಿಶ್ರಮದೊಂದಿಗಿನ ಸಮರ್ಪಣೆಯಾಗಿದೆ. ಸಮಯ ಜಟಿಲವಾಗಿತ್ತು, ವಿಳಂಬವಾಗಿರಬಹುದು ಆದರೆ ಹೈಕಮಾಂಡ್ ನನ್ನನ್ನು ನಿರಾಕರಿಸಿಲ್ಲ. ಇದು ಕೇವಲ ಶಿವಕುಮಾರ್ ಒಬ್ಬನ ಸಾಧನೆಯಲ್ಲ. ಕಾಂಗ್ರೆಸ್ ಇತಿಹಾಸ ಹಾಗೂ ಪ್ರಜಾಪ್ರಭುತ್ವದ ಮೇಲೆ ನಂಬಿಕೆಯಿಟ್ಟಿರುವ ಸಾವಿರಾರು ಕಾರ್ಯಕರ್ತರ ಶ್ರಮದ ಫಲ ಎಂದು ಮಂಗಳವಾರ ದಿಲ್ಲಿಯಲ್ಲಿ ಡಿಕೆ ಶಿವಕುಮಾರ್ ಸುದ್ದಿಸಂಸ್ಥೆಯೊಂದಕ್ಕೆ ಪ್ರತಿಕ್ರಿಯಿಸಿದ್ದಾರೆ.

ಗಾಂಧಿ-ನೆಹರು ಕುಟುಂಬಕ್ಕೆ ನಿಷ್ಠರಾಗಿರುವುದು ತಮ್ಮ ಕರ್ತವ್ಯ ಎಂದಿರುವ ಅವರು, ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರ ತ್ಯಾಗವನ್ನು ಕೊಂಡಾಡಿದ್ದಾರೆ. ಅಲ್ಲದೆ, ರೈತರು, ಮಹಿಳೆಯರು ಹಾಗೂ ಯುವ ಪೀಳಿಗೆ ಸೇರಿದಂತೆ ಸಮಾಜದ ಪ್ರತಿಯೊಂದು ವರ್ಗವನ್ನು ಒಟ್ಟಿಗೆ ತೆಗೆದುಕೊಂಡು ಹೋಗುವ ಮೂಲಕ ರಾಜ್ಯದಲ್ಲಿ ಹೊಸ ‘ಯುವಯುಗ’ ಹಾಗೂ ‘ನವಯುಗ’ ಆರಂಭಿಸುವುದಾಗಿ ಭರವಸೆ ನೀಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

5 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

6 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

7 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

9 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

10 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

11 hours ago