ಬೆಂಗಳೂರು: ಹೈಕಮಾಂಡ್ ಹೇಳಿದಾಗ ಡಿಸಿಎಂ ಡಿ.ಕೆ.ಶಿವಕುಮಾರ್ ಸಿಎಂ ಆಗುತ್ತಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಕುರಿತು ಸದಾಶಿವನಗರದಲ್ಲಿರುವ ಡಿ.ಕೆ.ಶಿವಕುಮಾರ್ ನಿವಾಸದಲ್ಲಿ ಬ್ರೇಕ್‌ಫಾಸ್ಟ್ ಮೀಟಿಂಗ್ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾವಿಬ್ಬರೂ ಪಕ್ಷದ ವಿಚಾರದ ಬಗ್ಗೆ ಚರ್ಚೆ ಮಾಡಿದ್ದೇವೆ. ನಾವು ಹಿಂದೆಯೂ ಒಗ್ಗಟ್ಟಾಗಿದ್ದೆವು. ಈಗಲೂ ಒಗ್ಗಟ್ಟಾಗಿದ್ದೇವೆ. ನಮ್ಮಿಬ್ಬರದ್ದು ಒಂದೇ ಸಿದ್ಧಾಂತ. 2028ಕ್ಕೆ ಮತ್ತೆ ನಾವೇ ಅಧಿಕಾರಕ್ಕೆ ಬರುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಬಳಿಕ ಡಿಕೆಶಿ ಯಾವಾಗ ಸಿಎಂ ಆಗುತ್ತಾರೆ ಎಂದು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಹೈಕಮಾಂಡ್ ಹೇಳಿದಾಗ ಡಿ.ಕೆ.ಶಿವಕುಮಾರ್ ಸಿಎಂ ಆಗುತ್ತಾರೆ ಎಂದು ಹೇಳಿದರು.
ಈ ಮೂಲಕ ಕುರ್ಚಿ ಕದನ ವಿಚಾರವನ್ನು ಸಿಎಂ ಹಾಗೂ ಡಿಸಿಎಂ ಹೈಕಮಾಂಡ್ ನಾಯಕರ ನಿರ್ಧಾರಕ್ಕೆ ಬಿಟ್ಟಿದ್ದಾರೆ.
ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್‌ಟಿಎಂ) ಶಾಲೆ’…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…
ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…
ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…
ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…