ರಾಜ್ಯ

ಎಸ್‌ಎಸ್‌ಎಲ್‌ಸಿ ಟಾಪರ್‌ಗೆ ಡಿಕೆಶಿ ನಗದು ಬಹುಮಾನ; ಕೊಟ್ಟ ಮೊತ್ತವೆಷ್ಟು ?

ಬೆಂಗಳೂರು : ೨೦೨೩-೨೪ರ ಎಸ್‌ಎಸ್‌ಎಲ್‌ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಹಾಗೂ ಮೂರನೇ ಸ್ಥಾನ  ಪಡೆದ ವಿದ್ಯಾರ್ಥಿಗಳಿಗೆ ಡಿಸಿಎಂ ಡಿಕೆಶಿ  ನಗದು ಬಹುಮಾನ ನೀಡಿ ಗೌರವಿಸಿದ್ದಾರೆ.

ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಅಂಕೀತಾ ಹಾಗೂ ಮೂರನೇ ಸ್ಥಾನ ಪಡೆದ ಮಂಡ್ಯದ ವಿದ್ಯಾರ್ಥಿ ನವನೀತ್‌ನನ್ನು ಮನೆಗೆ ಆಹ್ವಾನಿಸಿ ಬಹುಮಾನ ನೀಡಿದ್ದಾರೆ. ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿ ಅಂಕಿತಾಗೆ ೫ಲಕ್ಷ ನಗದು ನೀಡದ್ದು, ಮೂರನೇ ಸ್ಥಾನ ಪಡೆದ ಮಂಡ್ಯದ ನವನೀತ್‌ಗೆ ೨ಲಕ್ಷ ರೂ ಬಹುಮಾನ ನೀಡಿದ್ದಾರೆ.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ, ಬಾಗಲಕೋಟೆ ವಿದ್ಯಾರ್ಥಿ ೬೨೫ಕ್ಕೆ ೬೨೫ ಅಂಕ ಪಡೆದಿರುವುದನ್ನು ಕಂಡು ಸಂತೋಷವಾಯಿತು. ತಕ್ಷಣ ಆಕೆಗೆ ದೂರವಾಣಿ ಕರೆ ಮಾಡಿ ಶುಭಾಶಯ ತಿಳಿಸಿದೆ ಎಂದರು.

ಬೆಂಗಳೂರಿಗೆ ಬಂದಾಗ ನನ್ನ ಮನೆಗೆ ಬರುವಂತೆ ಆಹ್ವಾನ ಮಾಡಿದ್ದೆ. ಸರ್ಕಾರದ ಪರವಾಗಿ ಅವರನ್ನು ಅಭಿನಂದಿಸಿದ್ದೇನೆ. ವಿದ್ಯಾರ್ಥಿಗಳ ಮುಂದಿನ ವಿದ್ಯಾಭ್ಯಾಸಕ್ಕಾಗಿ ಹಣವನ್ನು ಬಹುಮಾನದ ರೂಪದಲ್ಲಿ  ನೀಡುತ್ತಿದ್ದೇನೆ ಎಂದು ತಿಳಿಸಿದರು. ಅದಲ್ಲದೇ ಈ ಬಾಲಕಿಯ ಸಾಧನೆ ಮೂಲಕ ನಮ್ಮ ಸರ್ಕಾರಿ ಶಾಲೆಗಳು ಹಾಗೂ ಶಾಲೆಯ ಶಿಕ್ಷಕರು ಸಮರ್ಥರಿದ್ದಾರೆ ಎಂಬ ಭಾವನೆ ಮೂಡಿತು. ಗ್ರಾಮೀಣ ಭಾಗದ ಪಂಚಾಯ್ತಿಮಟ್ಟದಲ್ಲಿ ಸರ್ಕಾರಿ ಶಾಲೆಗಳನ್ನು ವಿಶ್ವ ಗುಣಮಟ್ಟದ ಕರ್ನಾಟಕ ಪಬ್ಲಿಕ್‌ ಶಾಲೆಗಳಾಗಿ ಮಾಡುವುದು ನನ್ನ ಗುರಿ ಎಂದು ತಿಳಿಸಿದರು.

 

 

 

 

 

 

 

 

 

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಮೈಸೂರಿನಲ್ಲಿ ಮಾಗಿ ಉತ್ಸವ: ಸಂಗೀತದ ಹೊನಲು ಹರಿಸಿದ ವಿಜಯ್‌ ಪ್ರಕಾಶ್‌

ಮೈಸೂರು: ಮಾಗಿ ಉತ್ಸವದ ಅಂಗವಾಗಿ ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ ಇಂದು ಸಂಜೆ ಖ್ಯಾತ ಗಾಯಕ ವಿಜಯ್‌ ಪ್ರಕಾಶ್‌ ಅವರು…

2 hours ago

ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯದಲ್ಲಿ ಪಶು ವೈದ್ಯರ ಕೊರತೆ

ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯದಲ್ಲಿ ಪಶು ವೈದ್ಯರ ಕೊರತೆ ಎದ್ದು ಕಾಣುತ್ತಿದ್ದು, ಹೊರಗುತ್ತಿಗೆ ಆಧಾರದಲ್ಲಿ ವೈದ್ಯರ ಹುದ್ದೆಯ ನೇಮಕಾತಿಗೂ ಜಾಹೀರಾತು…

3 hours ago

ರೈತರಿಗೆ ಮತ್ತೊಂದು ಸಂಕಷ್ಟ: ಈ ಬಾರಿ ಮಾವಿನ ಇಳುವರಿ ಭಾರೀ ಇಳಿಕೆ

ಬೆಂಗಳೂರು: ರಾಜ್ಯದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಹಣ್ಣುಗಳ ರಾಣಿ ಎಂದು ಕರೆಯಿಸಿಕೊಳ್ಳುವ ಮಾವಿಗೆ ಅನೇಕ ರೋಗಗಳು ಕಾಣಿಸಿಕೊಂಡಿದ್ದು, ರೈತರಿಗೆ ಇಳುವರಿ…

3 hours ago

ಬಂಡೀಪುರದಲ್ಲಿ ಮತ್ತೊಂದು ಕಾಡಾನೆ ಸಾವು

ಗುಂಡ್ಲುಪೇಟೆ: ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದಕೆರೆ ವಲಯದ ಚಿಕ್ಕ…

3 hours ago

ಪ್ರಮುಖ ಆಕರ್ಷಣೀಯ ಕೇಂದ್ರವಾಗಿ ಹೊರಹೊಮ್ಮಿದ ಅಯೋಧ್ಯೆ ರಾಮಮಂದಿರ

ಲಕ್ನೋ: ಆಕರ್ಷಣೀಯ ಪ್ರವಾಸಿತಾಣಗಳ ಪಟ್ಟಿಯಲ್ಲಿ ಅಯೋಧ್ಯೆ ರಾಮಮಂದಿರವು ತಾಜ್‌ಮಹಲನ್ನು ಹಿಂದಿಕ್ಕಿ ನಂಬರ್‌ ಒನ್‌ ಪಟ್ಟ ಪಡೆದಿದೆ. ಈ ಮೂಲಕ ಈಗ…

3 hours ago

ಪ್ರವಾಸಿಗರಿಗೆ ಬಿಗ್‌ ಶಾಕ್: ನಂದಿಗಿರಿಧಾಮದಲ್ಲಿ ಹೊಸ ವರ್ಷಾಚರಣೆಗೆ ಬ್ರೇಕ್‌

ಚಿಕ್ಕಬಳ್ಳಾಪುರ: ನಂದಿಗಿರಿಧಾಮದಲ್ಲಿ ಹೊ ವರ್ಷಾಚರಣೆಗೆ ಬ್ರೇಕ್‌ ನೀಡಲಾಗಿದ್ದು, ಪ್ರವಾಸಿಗರಿಗೆ ಬಿಗ್‌ ಶಾಕ್‌ ಎದುರಾಗಿದೆ. ಪ್ರಕೃತಿ ಮಡಿಲಿನಲ್ಲಿ ಕುಣಿಸು ಕುಪ್ಪಳಿಸಿ ಹೊಸ…

4 hours ago