ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್ ಅವರು ಸದ್ಗುರು ಕಾರ್ಯಕ್ರಮದಲ್ಲಿ ಭಾಗಿಯಾಗಿರುವುದರ ಬಗ್ಗೆ ಅನಗತ್ಯವಾಗಿ ಚರ್ಚೆ ಬೇಡ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ನಗರದಲ್ಲಿ ಇಂದು ಮಾತನಾಡಿದ ಅವರು, ಡಿಕೆ ಶಿವಕುಮಾರ್ ಅವರು ಮಹಾಕುಂಭಮೇಳಕ್ಕೆ ಹೋಗಿದ್ದು, ಸದ್ಗುರು ಕಾರ್ಯಕ್ರಮದಲ್ಲಿ ಭಾಗಿಯಾದ ತಕ್ಷಣ ಬಿಜೆಪಿ ಸೇರುತ್ತಾರೆ ಎನ್ನುವುದೆಲ್ಲ ಸುಳ್ಳು ಇದರ ಬಗ್ಗೆ ಅನಗತ್ಯ ಚರ್ಚೆ ಬೇಡ ಎಂದು ಹೇಳಿದರು.
ಬಿಜೆಪಿಯಲ್ಲಿ ನಾಯಕತ್ವದ ಕೊರತೆ ಇದೆ. ಆದ ಕಾರಣ ಈ ತರಹದ ವಿವಾದಗಳನ್ನು ಎಬ್ಬಿಸುತ್ತಾರೆ. ಸ್ವಂತ ಸಾಮರ್ಥ್ಯದಿಂದ ಯಾವತ್ತಾದರೂ ಬಿಜೆಪಿ ಅಧಿಕಾರಕ್ಕೆ ಬಂದಿದ್ದಾರಾ. ಹೋದ ಸಲ 17 ಏಕನಾಥ ಶಿಂಧೆಗಳನ್ನು ಕರೆದುಕೊಂಡು ಹೋಗಿದ್ರಲ್ಲಾ. ಈ ಸಲ ಅದು ಸಾಧ್ಯವಿಲ್ಲ ಎಂದರು.
ಬಿಜೆಪಿಯವರೂ ಯಾರನ್ನಾದರೂ ದ್ವೇಷಿಸಿಕೊಳ್ಳಲಿ, ನಾನು ತಲೆ ಕೆಡಿಸಿಕೊಳ್ಳುವುದಿಲ್ಲ. ಮೋದಿ, ಖರ್ಗೆ ಅಕ್ಕಪಕ್ಕ ಫೋಟೋ ಇರುತ್ತೆ ಹಾಗಂತ ಮೋದಿ ಕಾಂಗ್ರೆಸ್ ಸೇರುತ್ತಾರೆ ಅನ್ನೋಕ್ಕಾಗತ್ತಾ ಎಂದು ತಿರುಗೇಟು ನೀಡಿದರು.
ಡಿಕೆ ಶಿವಕುಮಾರ್ ಸಿಎಂ ಆಗಬೇಕು ಎಂಬ ಮಾಜಿ ಸಂಸದ ಸುರೇಶ್ ಅವರ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಎಲ್ಲರಿಗೂ ಅವರ ಕುಟುಂಬದವರು ದೊಡ್ಡ ಹುದ್ದೆಗೇರಬೇಕು ಎನ್ನುವ ಹಂಬಲ ಇರುತ್ತದೆ. ನಮ್ಮ ಕುಟಂಬದವರನ್ನು ಕೇಳಿದ್ರೂ ಅದನ್ನೇ ಹೇಳುತ್ತಾರೆ. ಆದರೆ, ಅಂತಿಮವಾಗಿ ಇದರ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡಲಿದೆ ಎಂದು ತಿಳಿಸಿದರು.
ಮೈಸೂರು: ಅಪಾರ್ಟ್‌ಮೆಂಟ್‌ವೊಂದರಲ್ಲಿ ಬಣ್ಣ ಹೊಡೆಯುವ ವೇಳೆ ಕಾಲು ಜಾರಿ ಕೆಳಗೆ ಬಿದ್ದು ಕಾರ್ಮಿಕನೋರ್ವ ಮೃತಪಟ್ಟಿರುವ ಘಟನೆ ಮೈಸೂರಿನ ದಿವಾನ್ಸ್ ರಸ್ತೆಯಲ್ಲಿರುವ…
ಮಹಾದೇಶ್ ಎಂ ಗೌಡ ಹನೂರು: ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟಕ್ಕೆ ಸಂಜೆ 6 ಗಂಟೆಯಿಂದ ಬೆಳಗಿನ ಜಾವ 6…
ಬೆಂಗಳೂರು: ವಿಧಾನಮಂಡಲ ಜಂಟಿ ಅಧಿವೇಶನ ಎರಡನೇ ದಿನಕ್ಕೆ ಕಾಲಿಟ್ಟಿದ್ದು, ಇಂದು ಆಡಳಿತ ಪಕ್ಷ ಹಾಗೂ ವಿರೋಧ ಪಕ್ಷದ ನಡುವೆ ತೀವ್ರ…
ಬೆಂಗಳೂರು: ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗಳಿಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ರಾಮಲಿಂಗಾರೆಡ್ಡಿ ಪ್ರತಿಕ್ರಿಯೆ ನೀಡಿದ್ದಾರೆ. ಈ…
ಮೈಸೂರು: ರಾಜ್ಯದ ಉಭಯ ಸದನದಲ್ಲಿ ನಿನ್ನೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಸರ್ಕಾರದ ಭಾಷಣವನ್ನು ಮೊಟಕುಗೊಳಿಸಿ ಹೊರ ನಡೆದ ನಡೆಯನ್ನು…
ಬೆಂಗಳೂರು: ರಾಜ್ಯದಲ್ಲಿ ಸರ್ಕಾರ ಬೈಕ್ ಟ್ಯಾಕ್ಸಿಗಳಿಗೆ ಲೈಸೆನ್ಸ್ ನಿರಾಕರಿಸುವಂತಿಲ್ಲ ಎಂದು ಹೈಕೋರ್ಟ ತೀರ್ಪು ನೀಡಿದೆ. ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ವಿಭು…