ರಾಜ್ಯ

ಲೋಕಭವನದ ಗ್ಲಾಸ್‌ಹೌಸ್‌ನಲ್ಲೇ ಡಿಕೆಶಿ ಪ್ರಮಾಣವಚನ ಸ್ವೀಕಾರ ; ಸಾರ್ವಜನಿಕರಿಗಿಲ್ಲ ಪ್ರವೇಶ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಬೆನ್ನಲ್ಲಿಯೇ ನೂತನ ಮುಖ್ಯಮಂತ್ರಿ ಆಯ್ಕೆ ಮತ್ತು ಪ್ರಮಾಣವಚನ ಸ್ವೀಕಾರಕ್ಕೆ ಸಿದ್ಧತೆಗಳು ಆರಂಭವಾಗಿವೆ.

ಇಂದು ಸಂಜೆ ವಿಧಾನಸೌಧದಲ್ಲಿ ನಡೆಯುವ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರನ್ನು ಅಧಿಕೃತವಾಗಿ ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆ ಮಾಡಲಿದ್ದು, ಬುಧವಾರ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಈ ಸಂಬಂಧ ಇಂದು ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಮತ್ತು ರಾಜ್ಯಸಭಾ ಸದಸ್ಯ ಜಿ.ಸಿ. ಚಂದ್ರಶೇಖರ್ ಅವರು, ಜೂನ್ 3 ರಂದು ನೂತನ ಮುಖ್ಯಮಂತ್ರಿಯ ಪ್ರಮಾಣವಚನ ಕಾರ್ಯಕ್ರಮ ರಾಜಭವನದ ಗ್ಲಾಸ್ ಹೌಸ್ ನಲ್ಲಿ ಅತ್ಯಂತ ಸರಳವಾಗಿ ನಡೆಸಲು ತೀರ್ಮಾನಿಸಲಾಗಿದೆ ಎಂದರು.

ಆರಂಭದಲ್ಲಿ ಪ್ರಮಾಣವಚನ ಸಮಾರಂಭದ ಸ್ಥಳದ ಬಗ್ಗೆ ಗೊಂದಲವಿತ್ತು. ಆದರೆ ಅಂತಿಮವಾಗಿ ಲೋಕಭವನದಲ್ಲಿ ನಡೆಸಲು ನಿರ್ಧರಿಸಲಾಯಿತು ಎಂದರು.

ಡಿಕೆ ಶಿವಕುಮಾರ್ ಅವರು ಇದೇ ಮೊದಲ ಬಾರಿಗೆ ಸಿಎಂ ಆಗುತ್ತಿದ್ದರೂ ಸಹ ಯಾವುದೇ ಆಡಂಬರವಿಲ್ಲದೇ ಲೋಕಭವನದಲ್ಲಿ(ರಾಜಭವನ) ಸರಳವಾದ ಕಾರ್ಯಕ್ರಮದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಚಂದ್ರಶೇಖರ್ ಅವರು ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.

ಪ್ರಮಾಣವಚನ ಸಮಾರಂಭಕ್ಕೆ ಸಾರ್ವಜನಿಕರಿಗೆ ಪ್ರವೇಶ ಇಲ್ಲ. ನಾವು ಯಾರಿಗೂ ಯಾವುದೇ ಪಾಸ್ ಗಳನ್ನು ಸಹ ನೀಡುತ್ತಿಲ್ಲ. ತೈಲ ಬೆಲ ಏರಿಕೆ ಆಗಿರುವುದಿಂದ ದೊಡ್ಡ ಪ್ರಮಾಣದಲ್ಲಿ ಕಾರ್ಯಕ್ರಮ ಬೇಡ ಎಂದು ತೀರ್ಮಾನ ಮಾಡಲಾಗಿದೆ. ಹೀಗಾಗಿ ಯಾರೂ ಸಹ ಬೆಂಗಳೂರಿಗೆ ಬರಬಾರದು ಎಂದು ಮನವಿ ಮಾಡಿದರು.

ಆಂದೋಲನ ಡೆಸ್ಕ್

Recent Posts

ನೇಪಾಳ ಪ್ರವಾಹದಲ್ಲಿ ನಾಪತ್ತೆಯಾದ 213 ಭಾರತೀಯರು: ಮರಣ ಘೋಷಣೆ ಪ್ರಕ್ರಿಯೆ ಆರಂಭ

ಕಠ್ಮಂಡು: ನೇಪಾಳದ ಭೀಕರ ಪ್ರವಾಹದಲ್ಲಿ ನಾಪತ್ತೆಯಾಗಿದ್ದ 213 ಭಾರತೀಯರನ್ನು ಕಾನೂನುಬದ್ಧವಾಗಿ ಮೃತಪಟ್ಟಿದ್ದಾರೆಂದು ಘೋಷಿಸುವ ಪ್ರಕ್ರಿಯೆಯನ್ನು ಅಲ್ಲಿನ ಸರ್ಕಾರ ಆರಂಭಿಸಿದೆ ಎಂದು…

18 hours ago

ನ.30ಕ್ಕೆ ಲೋಕಸಭೆ, ಡಿ.2ಕ್ಕೆ ರಾಜ್ಯಸಭೆ ಕಲಾಪ: ಕ್ಷೇತ್ರ ಪುನರ್ವಿಂಗಡಣೆ ಮಸೂದೆ ಮಂಡನೆಯಾಗುತ್ತಾ?

ನವದೆಹಲಿ: ಸಂಸತ್ತಿನ ಉಭಯ ಸದನಗಳು ಮತ್ತೆ ಸಮಾವೇಶಗೊಳ್ಳಲಿದ್ದು, ರಾಜಕೀಯ ವಲಯದಲ್ಲಿ ಕುತೂಹಲ ಹೆಚ್ಚಿದೆ. ನವೆಂಬರ್‌ 30ರ ಸೋಮವಾರ ಬೆಳಗ್ಗೆ ಲೋಕಸಭೆ…

18 hours ago

ಹಾಸನದ ನಿಡುಡಿ ಬಳಿ ಹಾಡಹಗಲೇ ಜೋಡಿ ಚಿರತೆ ಪ್ರತ್ಯಕ್ಷ | ಗ್ರಾಮಸ್ಥರಲ್ಲಿ ಆತಂಕ

ಹಾಸನ: ಜನರು ಓಡಾಡುವ ರಸ್ತೆಯಲ್ಲೇ ಹಾಡಹಗಲು ಎರಡು ಚಿರತೆಗಳು ಕಾಣಿಸಿಕೊಂಡಿವೆ. ಈ ಘಟನೆ ನಡೆದದ್ದು ಹಾಸನ ತಾಲೂಕಿನ ನಿಡುಡಿ ಗ್ರಾಮದ…

18 hours ago

11ನೇ ದಿನಕ್ಕೆ ಆಶಾ ಹೋರಾಟ | ತಡರಾತ್ರಿ ಕಾರ್ಯಕರ್ತೆ ಅಸ್ವಸ್ಥ

ಬೆಂಗಳೂರು:  ಬೆಂಗಳೂರಿನಲ್ಲಿ ಆಶಾ ಕಾರ್ಯಕರ್ತೆಯರ ಹೋರಾಟ 11ನೇ ದಿನಕ್ಕೆ ಕಾಲಿಟ್ಟಿದೆ. ಈ ಮಧ್ಯೆ, ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ 38 ವರ್ಷದ ಗಂಗಾ ತಡರಾತ್ರಿ…

18 hours ago

ಮೈಸೂರು ಸೇರಿ 8 ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ | ನವೆಂಬರ್ 29, 30ರಂದು ರಾಜ್ಯಾದ್ಯಂತ ಒಣಹವೆ

ಬೆಂಗಳೂರು: ಮೈಸೂರು ಸೇರಿದಂತೆ ಕರ್ನಾಟಕದ ಎಂಟು ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಮಳೆಯಾಗುವ ಸಾಧ್ಯತೆಯಿದೆ. ಎಲ್ಲೆಲ್ಲಿ ಮಳೆಯ ಮುನ್ಸೂಚನೆ ಇದೆ…

18 hours ago

ಎಲ್ಲೆಂದರಲ್ಲಿ ಕೆಟ್ಟು ನಿಲ್ಲುವ ಸಾರಿಗೆ ಬಸ್‌ಗಳು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ಕೆಎಸ್‌ಆರ್‌ಟಿಸಿ ಬಸ್‌ಗಳು ಸೂಕ್ತ ನಿರ್ವಹಣೆ ಇಲ್ಲದೆ ಎಲ್ಲೆಂದರಲ್ಲಿ ಕೆಟ್ಟು ನಿಲ್ಲುತ್ತಿದ್ದು, ಪ್ರಯಾಣಿಕರು ಪರದಾಡುವಂತಾಗಿದೆ. ಕೆಲವು ಬಸ್‌ಗಳಂತೂ…

18 hours ago