ಬೆಂಗಳೂರು : ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಮೊದಲ ದಿನವೇ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಂಪುಟದ ಸಹೋದ್ಯೋಗಿಗಳಿಗೆ ಮತ್ತು ಪಕ್ಷದ ನಾಯಕರಿಗೆ ಅತ್ಯಂತ ಕಠಿಣ ಸಂದೇಶ ರವಾನಿಸಿದ್ದಾರೆ. ಆಡಳಿತ ಮತ್ತು ಪಕ್ಷದ ಸಂಘಟನೆಯಲ್ಲಿ ಯಾವುದೇ ರೀತಿಯ ಮೈಗಳ್ಳತನವನ್ನು ಸಹಿಸುವುದಿಲ್ಲ ಎಂದು ಎಚ್ಚರಿಸಿದ್ದಾರೆ.
ಮುಖ್ಯಮಂತ್ರಿಯಾದ ಬೆನ್ನಲ್ಲೇ ಸಚಿವರ ಸಭೆ ನಡೆಸಿದ ಡಿ.ಕೆ. ಶಿವಕುಮಾರ್, “ನಾನು ಯಾವ ಮಂತ್ರಿಗಳನ್ನೂ ಸುಮ್ಮನೆ ಬಿಡುವುದಿಲ್ಲ. ಎಲ್ಲರೂ 24/7 ರೀತಿ ಸಕ್ರಿಯವಾಗಿ ಕೆಲಸ ಮಾಡಬೇಕು” ಎಂದು ಖಡಕ್ ಆಗಿ ಹೇಳಿದ್ದಾರೆ.
ಕೇವಲ ಬೆಂಗಳೂರಿಗೆ ಸೀಮಿತವಾಗದೆ, ಎಲ್ಲಾ ಸಚಿವರು ಮತ್ತು ಶಾಸಕರು ತಮ್ಮ ವ್ಯಾಪ್ತಿಯ ಪ್ರತಿ ಜಿಲ್ಲೆಯಲ್ಲೂ ಕಡ್ಡಾಯವಾಗಿ ಪ್ರವಾಸ ಮಾಡಿ, ಸಭೆಗಳನ್ನು ನಡೆಸಿ ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಆದೇಶಿಸಿದ್ದಾರೆ. ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ಕಾಂಗ್ರೆಸ್ ಹೈಕಮಾಂಡ್ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಎಸ್‌ಐಆರ್ ವಿಚಾರದಲ್ಲಿ ದೊಡ್ಡ ಸಮಸ್ಯೆಯಿದೆ, ಇದನ್ನು ಯಾರೂ ಹಗುರವಾಗಿ ಪರಿಗಣಿಸುವಂತಿಲ್ಲ ಎಂದು ಎಚ್ಚರಿಸಿರುವ ಸಿಎಂ, ಚುನಾವಣಾ ವ್ಯವಸ್ಥೆಯ ಈ ಪ್ರಮುಖ ಪ್ರಕ್ರಿಯೆಯ ಕಡೆಗೆ ನಾಯಕರು ಹೆಚ್ಚಿನ ಗಮನ ಹರಿಸಬೇಕು ಎಂದು ಸೂಚಿಸಿದ್ದಾರೆ.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…