ಬೆಳಗಾವಿ: ಬೆಳಗಾವಿ ಅಧಿವೇಶನದ ಬಳಿಕ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗುತ್ತಾರೆ ಎಂದು ಶಾಸಕ ಇಕ್ಬಾಲ್ ಹುಸೇನ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.
ಈ ಕುರಿತು ಬೆಳಗಾವಿಯಲ್ಲಿ ಸುದ್ದಿಗಾರರರೊಂದಿಗೆ ಮಾತನಾಡಿದ ಅವರು, ಶುಭ ಸುದ್ದಿಯನ್ನು ನಾನೇ ಕೊಡ್ತಿದ್ದೇನಲ್ಲ. ಬೆಳಗಾವಿ ಅಧಿವೇಶನದ ಬಳಿಕ ಡಿಕೆಶಿ ಸಿಎಂ ಆಗುತ್ತಾರೆ. ಇದರಲ್ಲಿ ತಪ್ಪೇನಿದೆ. ಎಲ್ಲವನ್ನೂ ಹೈಕಮಾಂಡ್ ನಿರ್ಧಾರ ಮಾಡುತ್ತದೆ ಎಂದು ಹೇಳಿದರು.
ಈ ಮೂಲಕ ರಾಜ್ಯದಲ್ಲಿ ಮತ್ತೆ ಕುರ್ಚಿ ಕದನ ಮುಂದುವರಿಯುವ ಎಲ್ಲಾ ಸಾಧ್ಯತೆಗಳು ಎದ್ದು ಕಾಣುತ್ತಿದ್ದು, ಬೆಳಗಾವಿ ಚಳಿಗಾಲದ ಅಧಿವೇಶನ ಮುಗಿದ ಬಳಿಕ ಸಿಎಂ ಬದಲಾವಣೆ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಏನು ತೀರ್ಮಾನ ಕೈಗೊಳ್ಳಲಿದೆ ಎಂಬುದನ್ನು ಕಾದುನೋಡಬೇಕಿದೆ.





