Mysore
26
broken clouds

Social Media

ಸೋಮವಾರ, 26 ಜನವರಿ 2026
Light
Dark

ಪಕ್ಷದಿಂದ ಉಚ್ಛಾಟನೆಗೆ ಹೆದರಿ ಡಿಕೆಶಿ ಕ್ಷಮೆಯಾಚಿಸಿದ್ದಾರೆ: ಜೆಡಿಎಸ್‌ ವ್ಯಂಗ್ಯ

dk shivakumar

ಬೆಂಗಳೂರು: ಪಕ್ಷದಿಂದ ಉಚ್ಛಾಟನೆಗೆ ಹೆದರಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕ್ಷಮೆ ಯಾಚಿಸಿದ್ದಾರೆ ಎಂದು ಜೆಡಿಎಸ್ ವ್ಯಂಗ್ಯವಾಡಿದೆ.

ಈ ಸಂಬಂಧ ತನ್ನ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಜೆಡಿಎಸ್‌, ಸದನದಲ್ಲಿ ಹುಲಿ, ಹೈಕಮಾಂಡ್ ಮುಂದೆ ಇಲಿ ಎಂದು ಡಿ.ಕೆ.ಶಿವಕುಮಾರ್ ಅವರನ್ನು ಮೂದಲಿಸಿದೆ.

ವಿಧಾನಸಭೆಯಲ್ಲಿ ಗೀತೆ ಹಾಡಿ ಇಟಲಿ ಕಾಂಗ್ರೆಸ್ ನಾಯಕರ ಕೆಂಗಣ್ಣಿಗೆ ಗುರಿಯಾಗಿದ್ದ ಡಿಕೆಶಿ ಅಧಿಕಾರ ಉಳಿಸಿಕೊಳ್ಳಲು, ಉಚ್ಛಾಟನೆಯಿಂದ ಪಾರಾಗಲು ಮಂಡಿಯೂರಿ ಕ್ಷಮೆಯಾಚಿಸಿದ್ದಾರೆ ಎಂದು ಟೀಕಿಸಿದೆ.

ನಾಯಕ ಸಮುದಾಯದ ಸಚಿವರನ್ನು ಏಕಾಏಕಿ ಮಂತ್ರಿಸ್ಥಾನದಿಂದ ವಜಾಗೊಳಿಸಲಾಗಿತ್ತು. ಅವರಿಗೆ ಕ್ಷಮೆಕೇಳುವ ಒಂದು ಅವಕಾಶವನ್ನು ಸಹ ಹೈಕಮಾಂಡ್ ನೀಡಿರಲಿಲ್ಲ. ಕಾಂಗ್ರೆಸ್ ಹೈಕಮಾಂಡ್‍ನಲ್ಲಿ ದಲಿತರಿಗೊಂದು ನ್ಯಾಯ, ಬಲಾಢ್ಯರಿಗೊಂದು ನ್ಯಾಯ ಎಂದು ಆರೋಪಿಸಿದೆ.

Tags:
error: Content is protected !!