ರಾಜ್ಯ

ಸೋನಿಯಾ ಗಾಂಧಿಯನ್ನು ಹೆದರಿಸಿ ಡಿಕೆಶಿ ಕೆಪಿಸಿಸಿ ಅಧ್ಯಕ್ಷನಾಗಿದ್ದಾನೆ : ರಮೇಶ್ ಜಾರಕಿಹೊಳಿ

ಬೆಳಗಾವಿ : ಸೋನಿಯಾ ಗಾಂಧಿಯನ್ನು ಹೆದರಿಸಿ ಡಿಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷನಾಗಿದ್ದಾನೆ ಎಂದು ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಆರೋಪಿಸಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು ಅಧ್ಯಕ್ಷ ಸ್ಥಾನ ನೀಡದಿದ್ದರೆ ಇಡಿಗೆ ನಿಮ್ಮ ಹೆಸರು ಹೇಳುತ್ತೇನೆಂದು ತಿಹಾರ್​ ಜೈಲಿನಲ್ಲಿ ಸೋನಿಯಾಗೆ ಹೆದರಿಸಿ ಪಕ್ಷದ ಅಧ್ಯಕ್ಷ ಆಗಿದ್ದಾನೆ ಎಂದು ಡಿಸಿಎಂ ವಿರುದ್ಧ ಏಕವಚನದಲ್ಲಿಯೇ ರಮೇಶ್ ಜಾರಕಿಹೊಳಿ ವಾಗ್ದಾಳಿ ನಡೆಸಿದ್ದಾರೆ.

ಡಿಕೆ ಶಿವಕುಮಾರ್​ ಬಹಳ ವೀಕ್ ಮನುಷ್ಯ, ಸಿಡಿ ಮಾಡಿ ಬ್ಲ್ಯಾಕ್ ಮೇಲ್ ಮಾಡುತ್ತಾನೆ. ಇಷ್ಟು ದಿನ ನಾನು ಸುಮ್ಮನಿದ್ದೆ, ಈಗ ಸೀರಿಯಸ್‌ ಆಗಿ ತೆಗೆದುಕೊಂಡಿದ್ದೇನೆ. ಸರ್ಕಾರ ನಮ್ಮ ಅರ್ಜಿ ನೆಗ್ಲೆಟ್ ಮಾಡಿದ್ರೆ, ಹೈಕೋರ್ಟ್, ಸುಪ್ರೀಂ ಕೋರ್ಟ್ ಹೋಗುತ್ತೇನೆ ಎಂದರು. ಇದೇ ವೇಳೆ ‘ಆಪರೇಷನ್ ಕಮಲ ಮಾಡುತ್ತಿಲ್ಲ, ಮಾಡುವುದಿಲ್ಲ. ಜನರನ್ನ ನಾವು ಕರೆದುಕೊಂಡು ಬರಲು ಹೇಗೆ ಸಾಧ್ಯ. ರಮೇಶ್ ಜಾರಕಿಹೊಳಿ ಆಪರೇಷನ್ ಕಮಲ ಮಾಡುತ್ತಿಲ್ಲ ಎಂದರು.

ಅಸ್ಸಾಂ, ಗುಹಾವಟಿ ಮೂಲಕ ನನಗೆ ಕರೆ ಬರುತ್ತಿವೆ. ಟೆರರಿಸ್ಟ್ ಲಿಂಕ್ ಮಾಡಿ ನನ್ನನ್ನು ಅರೆಸ್ಟ್ ಮಾಡಿಸುವ ಹಂತಕ್ಕೆ ಹೋಗುತ್ತಾನೆ. ಅದಕ್ಕೆ ನನ್ನ ಪೋನ್​ನಲ್ಲಿ ಇಂಟರ್ನೆಟ್ ಇಟ್ಟಿಲ್ಲ. ದುಬೈ, ಯುಎಇ ಕಡೆಯಿಂದಲೂ ಪೋನ್ ಬರುತ್ತಿವೆ. ನನಗೆ ಬಹಳ ಟಾರ್ಚರ್ ಕೊಟ್ಟಿದ್ದಾರೆ, ಬೇರೆ ಯಾರಾದರೂ ಆಗಿದ್ದರೆ, ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದರು. ಅವನ ವಿರುದ್ಧ ಸಾಕ್ಷಿಗಳಿದ್ದು, ತನಿಖೆಯನ್ನು ಸಿಬಿಐಗೆ ಕೊಟ್ಟರೆ ಒದಗಿಸುತ್ತೇನೆ‌. ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಬಗ್ಗೆ ಡಿಕೆ ಶಿವಕುಮಾರ್​ ಮಾತನಾಡಿರುವ ಆಡಿಯೋ ನನ್ನ ಬಳಿ ಇದೆ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ.

ಸಿಡಿ ಕೇಸ್​ನಲ್ಲಿ ಕಾರು ಚಾಲಕ ಪರಶಿವಮೂರ್ತಿಯನ್ನು ಏಕೆ ವಿಚಾರಣೆಗೆ ಒಳಪಡಿಸಿಲ್ಲ. ಈ ಹಿಂದೆ ಬಿಜೆಪಿ ಸರ್ಕಾರ ಇದ್ದಾಗ ಯಾಕೆ ವಿಚಾರಣೆ ಮಾಡಲಿಲ್ಲ. ನನ್ನ ಮಾತಿನಿಂದ ಭಾರತೀಯ ಜನತಾ ಪಕ್ಷಕ್ಕೆ ಮುಜುಗರ ಆಗೋದು ಬೇಡ, ಪರೋಕ್ಷವಾಗಿ ಬಿಜೆಪಿ ನಾಯಕರು ಸಿಡಿ ಕೇಸ್​ನಲ್ಲಿ ಇದ್ದಾರೆ ಎಂದು ರಮೇಶ್ ಜಾರಕಿಹೊಳಿ ಹೇಳಿದರು. ನಾಲ್ಕು ವರ್ಷಗಳಿಂದ ಅಪಮಾನ ಸಹಿಸಿಕೊಂಡಿದ್ದೇನೆ. ರಾಜಕಾರಣದಲ್ಲಿ ಡಿಸಿಎಂ ಡಿಕೆ ಶಿವಕುಮಾರ್​ ಅಂತ್ಯವಾದ್ರೆ ಒಳ್ಳೆಯದು, ಡಿ.ಕೆ.ಶಿವಕುಮಾರ್ ಸಿಡಿ ಫ್ಯಾಕ್ಟರಿ ಬಂದ್ ಆಗಬೇಕಂದ್ರೆ ಸಿಬಿಐಗೆ ವಹಿಸಬೇಕು ಎಂದರು.

lokesh

Recent Posts

2.20ಕೋಟಿ ರೂ.ಮೌಲ್ಯದ ಚಿನ್ನಾಭರಣ ವಶ ; 26 ಮಂದಿ ಬಂಧನ.

ಮಂಡ್ಯ : ಜಿಲ್ಲೆಯ ನಾಲ್ಕು ಪೊಲೀಸ್ ಉಪ ವಿಭಾಗಗಳಲ್ಲಿ ನಡೆದಿದ್ದ ಕಳ್ಳತನ ಪ್ರಕರಣಗಳನ್ನು ಪೊಲೀಸರು ಬೇಧಿಸಿದ್ದಾರೆ. 28 ಮಂದಿ ಆರೋಪಿಗಳನ್ನು…

10 hours ago

ತಳಸಮುದಾಯಕ್ಕೆ ಆರ್ಥಿಕ ಸಾಮಾಜಿಕ ಶಕ್ತಿ ಅಗತ್ಯ : ಸಿಎಂ

ಬಾಗಲಕೋಟೆ : ಕಾಂಗ್ರೆಸ್ ಸರ್ಕಾರ ಮಹಿಳೆಯರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಸೇರಿದಂತೆ ಶೋಷಿತ ವರ್ಗಗಳ ಏಳಿಗೆಗೆ ಶ್ರಮಿಸುತ್ತಿದೆ. ತಳಸಮುದಾಯದವರಿಗೆ ಆರ್ಥಿಕ…

10 hours ago

ಅಭಿವೃದ್ಧಿ ವಿಷಯದಲ್ಲಿ ರಾಜ್ಯ ಸರ್ಕಾರದ ಜತೆ ನಿಲ್ಲುತ್ತೇನೆ : ಕೇಂದ್ರ ಸಚಿವ ಎಚ್‌ಡಿಕೆ

ರಾಯಚೂರು : ಜಿಲ್ಲೆಯ ಸಿಂಧನೂರು ಪಟ್ಟಣದ ಶ್ರೀ ಕೃಷ್ಣದೇವರಾಯ ವಿದ್ಯಾಸಂಸ್ಥೆಯಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ ಸೈನಿಕ ಶಾಲೆಯನ್ನು ಕೇಂದ್ರದ ಬೃಹತ್ ಕೈಗಾರಿಕೆ…

10 hours ago

IPL 2026 | ಮುಂಬೈ ವಿರುದ್ಧ ಡೆಲ್ಲಿಗೆ ಭರ್ಜರಿ ಜಯ

ನವದೆಹಲಿ : ಸಮೀರ್ ರಿಜ್ವಿ ಸ್ಫೋಟಕ ಬ್ಯಾಟಿಂಗ್ ಜತೆಗೆ ಸಂಘಟಿತ ಬೌಲಿಂಗ್ ನೆರವಿನಿಂದ ಮುಂಬೈ ಇಂಡಿಯನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್…

11 hours ago

ಇರಾನ್ ಮೇಲೆ ಕ್ಷಿಪಣಿ ದಾಳಿ ; ಬುಶೆಹರ್ ಅಣುಸ್ಥಾವರದ ಬಳಿ ಹಾನಿ

ಟೆಹ್ರಾನ್ : ಅಮೆರಿಕದ ಮಿತ್ರರಾಷ್ಟ್ರಗಳಲ್ಲಿನ ಸೇನಾ ನೆಲೆಗಳ ಮೇಲೆ ಇರಾನ್ ಕ್ಷಿಪಣಿ ದಾಳಿ ಮುಂದುವರಿದಿರುವಂತೆಯೇ ಇತ್ತ ಇರಾನ್ ಮೇಲೆ ಮುಗಿಬಿದ್ದಿರುವ…

11 hours ago

ಇಂಧನ ವ್ಯತ್ಯಯ ಆತಂಕ ; ಎಲೆಕ್ಟ್ರಿಕ್‌ ವಾಹನ ಮಾರಾಟದಲ್ಲಿ ಏರಿಕೆ

ಬೆಂಗಳೂರು : ಯುದ್ಧದ ಪರಿಣಾಮ ಕೆಲ ಉದ್ಯಮಗಳಿಗೆ ಹೊಡೆತ ನೀಡಿದರೆ, ಇನ್ನೂ ಕೆಲವು ಕ್ಷೇತ್ರಗಳಿಗೆ ಅದೇ ಅವಕಾಶವಾಗಿ ಪರಿಣಮಿಸಿದೆ. ಅದರಲ್ಲೂ…

12 hours ago