The Prime Minister, Shri Narendra Modi during his departing from KSRPTC Helipad, in Belagavi, Karnataka on November 13, 2016. The Union Minister for Chemicals & Fertilizers and Parliamentary Affairs, Shri Ananth Kumar is also seen.
ಬೆಳಗಾವಿ : ಸೋನಿಯಾ ಗಾಂಧಿಯನ್ನು ಹೆದರಿಸಿ ಡಿಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷನಾಗಿದ್ದಾನೆ ಎಂದು ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಆರೋಪಿಸಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು ಅಧ್ಯಕ್ಷ ಸ್ಥಾನ ನೀಡದಿದ್ದರೆ ಇಡಿಗೆ ನಿಮ್ಮ ಹೆಸರು ಹೇಳುತ್ತೇನೆಂದು ತಿಹಾರ್ ಜೈಲಿನಲ್ಲಿ ಸೋನಿಯಾಗೆ ಹೆದರಿಸಿ ಪಕ್ಷದ ಅಧ್ಯಕ್ಷ ಆಗಿದ್ದಾನೆ ಎಂದು ಡಿಸಿಎಂ ವಿರುದ್ಧ ಏಕವಚನದಲ್ಲಿಯೇ ರಮೇಶ್ ಜಾರಕಿಹೊಳಿ ವಾಗ್ದಾಳಿ ನಡೆಸಿದ್ದಾರೆ.
ಡಿಕೆ ಶಿವಕುಮಾರ್ ಬಹಳ ವೀಕ್ ಮನುಷ್ಯ, ಸಿಡಿ ಮಾಡಿ ಬ್ಲ್ಯಾಕ್ ಮೇಲ್ ಮಾಡುತ್ತಾನೆ. ಇಷ್ಟು ದಿನ ನಾನು ಸುಮ್ಮನಿದ್ದೆ, ಈಗ ಸೀರಿಯಸ್ ಆಗಿ ತೆಗೆದುಕೊಂಡಿದ್ದೇನೆ. ಸರ್ಕಾರ ನಮ್ಮ ಅರ್ಜಿ ನೆಗ್ಲೆಟ್ ಮಾಡಿದ್ರೆ, ಹೈಕೋರ್ಟ್, ಸುಪ್ರೀಂ ಕೋರ್ಟ್ ಹೋಗುತ್ತೇನೆ ಎಂದರು. ಇದೇ ವೇಳೆ ‘ಆಪರೇಷನ್ ಕಮಲ ಮಾಡುತ್ತಿಲ್ಲ, ಮಾಡುವುದಿಲ್ಲ. ಜನರನ್ನ ನಾವು ಕರೆದುಕೊಂಡು ಬರಲು ಹೇಗೆ ಸಾಧ್ಯ. ರಮೇಶ್ ಜಾರಕಿಹೊಳಿ ಆಪರೇಷನ್ ಕಮಲ ಮಾಡುತ್ತಿಲ್ಲ ಎಂದರು.
ಅಸ್ಸಾಂ, ಗುಹಾವಟಿ ಮೂಲಕ ನನಗೆ ಕರೆ ಬರುತ್ತಿವೆ. ಟೆರರಿಸ್ಟ್ ಲಿಂಕ್ ಮಾಡಿ ನನ್ನನ್ನು ಅರೆಸ್ಟ್ ಮಾಡಿಸುವ ಹಂತಕ್ಕೆ ಹೋಗುತ್ತಾನೆ. ಅದಕ್ಕೆ ನನ್ನ ಪೋನ್ನಲ್ಲಿ ಇಂಟರ್ನೆಟ್ ಇಟ್ಟಿಲ್ಲ. ದುಬೈ, ಯುಎಇ ಕಡೆಯಿಂದಲೂ ಪೋನ್ ಬರುತ್ತಿವೆ. ನನಗೆ ಬಹಳ ಟಾರ್ಚರ್ ಕೊಟ್ಟಿದ್ದಾರೆ, ಬೇರೆ ಯಾರಾದರೂ ಆಗಿದ್ದರೆ, ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದರು. ಅವನ ವಿರುದ್ಧ ಸಾಕ್ಷಿಗಳಿದ್ದು, ತನಿಖೆಯನ್ನು ಸಿಬಿಐಗೆ ಕೊಟ್ಟರೆ ಒದಗಿಸುತ್ತೇನೆ. ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಬಗ್ಗೆ ಡಿಕೆ ಶಿವಕುಮಾರ್ ಮಾತನಾಡಿರುವ ಆಡಿಯೋ ನನ್ನ ಬಳಿ ಇದೆ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ.
ಸಿಡಿ ಕೇಸ್ನಲ್ಲಿ ಕಾರು ಚಾಲಕ ಪರಶಿವಮೂರ್ತಿಯನ್ನು ಏಕೆ ವಿಚಾರಣೆಗೆ ಒಳಪಡಿಸಿಲ್ಲ. ಈ ಹಿಂದೆ ಬಿಜೆಪಿ ಸರ್ಕಾರ ಇದ್ದಾಗ ಯಾಕೆ ವಿಚಾರಣೆ ಮಾಡಲಿಲ್ಲ. ನನ್ನ ಮಾತಿನಿಂದ ಭಾರತೀಯ ಜನತಾ ಪಕ್ಷಕ್ಕೆ ಮುಜುಗರ ಆಗೋದು ಬೇಡ, ಪರೋಕ್ಷವಾಗಿ ಬಿಜೆಪಿ ನಾಯಕರು ಸಿಡಿ ಕೇಸ್ನಲ್ಲಿ ಇದ್ದಾರೆ ಎಂದು ರಮೇಶ್ ಜಾರಕಿಹೊಳಿ ಹೇಳಿದರು. ನಾಲ್ಕು ವರ್ಷಗಳಿಂದ ಅಪಮಾನ ಸಹಿಸಿಕೊಂಡಿದ್ದೇನೆ. ರಾಜಕಾರಣದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅಂತ್ಯವಾದ್ರೆ ಒಳ್ಳೆಯದು, ಡಿ.ಕೆ.ಶಿವಕುಮಾರ್ ಸಿಡಿ ಫ್ಯಾಕ್ಟರಿ ಬಂದ್ ಆಗಬೇಕಂದ್ರೆ ಸಿಬಿಐಗೆ ವಹಿಸಬೇಕು ಎಂದರು.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…