Mysore
22
overcast clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

ಸೈನಿಕರಿಗೆ ಡಿಸಿಎಂ ಡಿ.ಕೆ ಶಿವಕುಮಾರ್ ಅಪಮಾನ ಮಾಡಿದ್ದಾರೆ ; ಎಚ್.ಡಿ ಕುಮಾರಸ್ವಾಮಿ

ಬೆಂಗಳೂರು :  ಕೇಂದ್ರ ಸಚಿವ ಎಚ್‌ ಡಿ ಕುಮಾರಸ್ವಾಮಿ ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ ವಾಕ್ಸಮರ ಮುಂದುವರೆದಿದ್ದು, ಇಂದು ಸಹ ಡಿಕೆಶಿ ವಿರುದ್ಧ ಎಚ್‌ ಡಿಕೆ ವಾಗ್ದಾಳಿ ನಡೆಸಿದ್ದಾರೆ.

ಗುಡ್ಡ ಕುಸಿತದ ಪರಿಹಾರ ಕಾರ್ಯಕ್ಕೆ ಕೇಂದ್ರ ಸಚಿವ ಕುಮಾರಸ್ವಾಮಿ ಸೇನೆ ಕರೆದುಕೊಂಡು ಬರಬೇಕಿತ್ತು ಎಂಬ ಡಿಕೆಶಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಎಚ್‌ ಡಿಕೆ, ಡಿಕೆ ಶಿವಕುಮಾರ್‌ ಸೈನಿಕರಿಗೆ ಅಪಮಾನ ಮಾಡಿದ್ದಾರೆ ಎಂದು ಆರೋಪಿಸಿದರು.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ ಖಾತೆ ಮೂಲಕ ವಾಗ್ದಾಳಿ ನಡೆಸಿದ ಅವರು, ಉತ್ತರ ಕನ್ನಡ ಜಿಲ್ಲೆಯಲ್ಲಿ  ಗುಡ್ಡ ಕುಸಿದು ೭ ಜನ ಸಾವನ್ನಪ್ಪಿದ್ದ ಶಿರೂರು ಗ್ರಾಮಕ್ಕೆ ನಾನು ಶನಿವಾರ ಭೇಟಿ ನೀಡಿದಾಗ ಈ ರಾಜ್ಯದ ಉಪಮುಖ್ಯ ಮಂತ್ರಿ ಡಿಕೆ ಶಿವಕುಮಾರ್‌ ಲೇವಡಿ ಮಾಡಿದರು. ಮಿಲಿಟರಿಯನ್ನ ಕರೆತಂದು ಫೀಲ್ಡಿಗೆ ಇಳಿಸಬೇಕಾಗಿತ್ತು. ಅವರೊಬ್ಬರೇ ಬಂದು ಏನು ಮಾಡುತ್ತಾರೆ ಎಂದು ಲಘುವಾಗಿ ಮಾತನಾಡಿದರು. ಮಾನ್ಯ ಡಿಸಿಎಂ ಅವರು ನನ್ನ ಬಗ್ಗೆ ಲಘುವಾಗಿ ಮಾತನಾಡಿವ ಭರದಲ್ಲಿ ನಮ್ಮ ಹೆಮ್ಮೆಯ ಸೇನೆಯನ್ನು ಹೀಗಳೆದಿದ್ದರು. ಇದು ದುರ್ದೈವದ ಸಂಗತಿ ಎಂದರು.

ಅಲ್ಲದೆ ಜಿಲ್ಲಾಡಳಿತ ಕಾರ್ಯ ಮಾಡುತ್ತಿಲ್ಲವೆಂದು ನಾನು ಹೇಳಿಲ್ಲ. ಸರ್ಕಾರವನ್ನೂ ಟೀಕಿಸಿಲ್ಲ. ಆದರೂ ನೊಂದ ಕುಟುಂಬಗಳ ಕಣ್ಣೀರಿಗೆ ಓಗೊಟ್ಟು ನಮ್ಮ ಹೆಮ್ಮೆಯ ಸೇನೆಯ ೪೦ಕ್ಕೂ ಹೆಚ್ಚು ವೀರ ಯೋಧರು ರಕ್ಷಣಾ ಕಾರ್ಯಕ್ಕೆ ಮತ್ತಷ್ಟು ವೇಗ ನೀಡಿದ್ದಾರೆ. ಇದಕ್ಕೆ ಡಿಸಿಎಂ ಅವರ ಆಕ್ಷೇಪಣೆ ಇದೆಯಾ..? ಈ ಬಗ್ಗೆ ಅವರೇ ಉತ್ತರಿಸಬೇಕು ಎಂದು ಪ್ರಶ್ನೆ ಮಾಡಿದರು.

ನಾವು ಒಕ್ಕೂಟ ವ್ಯವಸ್ಥೆಯಲ್ಲಿದ್ದೇವೆ. ನಾನು ಎನ್ನುವುದು ಅಹಂಕಾರ ನಾವು ಎನ್ನುವುದು ಸಂಸ್ಕಾರ. ಇಷ್ಟು ಸರಳ ಸಾಮರಸ್ಯ ತತ್ವವೂ ಡಿಸಿಎಂ ಆಗಿರುವ ವ್ಯಕ್ತಿಗೆ ತಿಳಿದಿಲ್ಲ ಎಂದರೆ ಇದಕ್ಕಿಂತ ತಿಳಿಗೇಡಿತಮ ಇನ್ನೋಂದಿಲ್ಲ. ನಮ್ಮ ಸೇನೆ ನಮ್ಮ ಹೆಮ್ಮೆ ಎಂದು ವಾಗ್ದಾಳಿ ನಡೆಸಿದ್ದಾರೆ.

Tags: