ಬೆಂಗಳೂರು : ಕುಮಾರಸ್ವಾಮಿ ಅವರು ಡಿಕೆ ಶಿವಕುಮಾರ್ ಅವರಿಗೆ ಬೆಂಬಲ ಕೊಡೋದಾದ್ರೆ ಕೊಡಲಿ ಎಂದು ಗೃಹ ಸಚಿವ ಜಿ ಪರಮೇಶ್ವರ್ ಲೇವಡಿ ಮಾಡಿದ್ದಾರೆ.
ಡಿಕೆ ಶಿವಕುಮಾರ್ ಸಿಎಂ ಆಗೋದಾದ್ರೆ ಜೆಡಿಎಸ್ ಶಾಸಕರು ಬೆಂಬಲ ಕೊಡೋಕೆ ರೆಡಿ ಎಂಬ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಕುಮಾರಸ್ವಾಮಿ ಬೆಂಬಲ ಕೊಡಲಿ. ಅದು ಒಳ್ಳೆಯದು ಅಲ್ಲವಾ? ಕುಮಾರಸ್ವಾಮಿ ಬೆಂಬಲ ಕೊಡುತ್ತಾರೆ ಅಂದರೆ ಒಳ್ಳೆಯದೇ. ಅವರು ಬಿಜೆಪಿ ಜೊತೆ ಸೇರಿಕೊಂಡಿದ್ದಾರೆ. ಅಲ್ಲಿಂದ ನಮಗೆ ಬೆಂಬಲ ಕೊಡುತ್ತಾರೆ ಅಂದರೆ ಒಳ್ಳೆಯದು ಎಂದು ವ್ಯಂಗ್ಯವಾಡಿದರು.
ಪರಮೇಶ್ವರ್ ಸಿಎಂ ಆಗೋಕೆ ಬೆಂಬಲ ಕೊಡುತ್ತೇನೆ ಎಂದು ಕುಮಾರಸ್ವಾಮಿ ಹೇಳಿಲ್ಲ ಎಂಬ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಇನ್ನು ಮುಂದೆ ಸಿಎಂ ವಿಚಾರವಾಗಿ ನನ್ನನ್ನು ಯಾರೂ ಪ್ರಶ್ನೆ ಕೇಳಬೇಡಿ. ಸಿಎಂ ವಿಚಾರವಾಗಿ ನಾನೇನು ಹೇಳುವುದಿಲ್ಲ. ಮುಖ್ಯಮಂತ್ರಿ ವಿಚಾರವಾಗಿ ಇನ್ನು ಮುಂದೆ ಪ್ರತಿಕ್ರಿಯೆ ಕೊಡಲ್ಲ ಎಂದರು.
ಡಿಕೆ ಶಿವಕುಮಾರ್‌ಗೆ ಬೆಂಬಲ ಕೊಡುವ ಮೂಲಕ ಕುಮಾರಸ್ವಾಮಿ ಒಕ್ಕಲಿಗ ಕಾರ್ಡ್ ಪ್ಲೇ ಮಾಡುತ್ತಿದ್ದಾರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಕುಮಾರಸ್ವಾಮಿ ಹೇಳಿಕೆ ಕೊಟ್ಟಿದ್ದಾರೆ. ಅದಕ್ಕೆ ಡಿಕೆ ಶಿವಕುಮಾರ್ ಕೂಡಾ ಪ್ರತಿಕ್ರಿಯೆ ನೀಡಿದ್ದಾರೆ. ಆದ್ದರಿಂದ ನಾನೇನು ಹೇಳುವುದಿಲ್ಲ. ಸರ್ಕಾರ ಚೆನ್ನಾಗಿ ನಡೆಯುತ್ತಿದೆ. ಜನಗಳಿಗೆ ನಾವು ಕೊಟ್ಟ ಭರವಸೆಯನ್ನು ಚಾಚು ತಪ್ಪದೆ ಈಡೇರಿಸುತ್ತಿದ್ದೇವೆ. ಜನ ಸಂತೋಷದಿಂದ ಇದ್ದಾರೆ. ನಮಗೆ ಕಾರ್ಯಕ್ರಮ ಕೊಟ್ಟರು. ಹೇಳಿದಂತೆ ನಡೆದುಕೊಂಡಿದ್ದಾರೆ ಎಂದು ಬಡ ಜನರು ಸಂತೋಷವಾಗಿ ಇದ್ದಾರೆ. ಬೇರೆಯವರ ಹೇಳಿಕೆಗಳು ಅಪ್ರಸ್ತುತ. ಬೇರೆಯವರ ಹೇಳಿಕೆ ಅಷ್ಟೇನು ಜಾಸ್ತಿ ಎಫೆಕ್ಟ್ ಆಗಲ್ಲ ಎಂದು ಕುಮಾರಸ್ವಾಮಿ ಹೇಳಿಕೆಗೆ ಪರಮೇಶ್ವರ್ ತಿರುಗೇಟು ನೀಡಿದರು.
ಮೈಸೂರು: ರಾಜ್ಯದಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣ ಮಾಸುವ ಮುನ್ನವೇ ಸಾಂಸ್ಕೃತಿಕ ನಗರಿ ಮೈಸೂರಲ್ಲಿ ವೈದ್ಯರ ನಿರ್ಲಕ್ಷ್ಯಕ್ಕೆ ಬಾಲಕಿ ಸಾವನ್ನಪ್ಪಿರುವ…
ಬೆಂಗಳೂರು: ಸ್ಯಾಂಡಲ್‌ವುಡ್ ನಟ ಡಾಲಿ ಧನಂಜಯ್ ಅವರು ತಮ್ಮ ಮದುವೆ ಕರೆಯೋಲೆಯನ್ನು ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಡಿ.ಕೆ.ಸುರೇಶ್ ಅವರಿಗೆ ನೀಡಿ…
ಕಲಬುರಗಿಯಲ್ಲಿ 371 ಹಾಸಿಗೆಗಳ ಜಯದೇವ ಹೃದ್ರೋಗ ಆಸ್ಪತ್ರೆಯ ನೂತನ ಕಟ್ಟಡವನ್ನು ಉದ್ಘಾಟಿಸಿ ಸಿಎಂ ಮಾತು.. ಕಲಬುರಗಿ: ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ…
ಬೆಳಗಾವಿ: ಎಂಎಲ್‌ಸಿ ಸಿ.ಟಿ.ರವಿ ಬಂಧನಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಪೊಲೀಸರ ವಿರುದ್ಧ ಫೇಕ್ ಎನ್‌ಕೌಂಟರ್ ಹೇಳಿಕೆ…
ನ್ಯೂ ಇಯರ್ ಸೆಲಬ್ರೇಷನ್‌ಗೆ ದಿನಗಣನೆ ಬೆಂಗಳೂರು: 2024ನ್ನು ಮುಗಿಸಿ 2025ನ್ನು ಬರಮಾಡಿಕೊಳ್ಳಲು ಸಿಲಿಕಾನ್ ಸಿಟಿಯೇ ತುದಿಗಾಲಲ್ಲಿ ಕಾತರದಿಂದ ಕಾಯುತ್ತಿದೆ. ಸದ್ಯ…
ಬಾಗಲಕೋಟೆ: ಬಿಜೆಪಿ ವಿಧಾನ ಪರಿಷತ್ ಶಾಸಕ ಸಿ.ಟಿ.ರವಿ ಅವರನ್ನು ಬಂಧಿಸಿ, ಫೇಕ್ ಎನ್‌ಕೌಂಟರ್ ಮಾಡುವ ಉದ್ದೇಶವಿತ್ತು ಎಂದೆನ್ನಿಸುತ್ತದೆ ಎಂದು ಕೇಂದ್ರ…