Mysore
26
overcast clouds

Social Media

ಭಾನುವಾರ, 18 ಅಕ್ಟೋಬರ್ 2026
Light
Dark

ಡಿಕೆಶಿಯ ಬಿಜೆಪಿ ಮೇಲಿನ ಆರೋಪ ಸರಿಯಲ್ಲ: ನಾರಾಯಣಸ್ವಾಮಿ

ಬೆಂಗಳೂರು: ಸಂವಿಧಾನ ಬದಲಾವಣೆ ಬಗ್ಗೆ ಮಾತನಾಡಿ, ಈಗ ಬಿಜೆಪಿ ಮೇಲೆ ಆರೋಪ ಮಾಡುವುದು ಸರಿಯಲ್ಲ ಎಂದು ವಿಧಾನ ಪರಿಷತ್‌ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಡಿಕೆಶಿ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.

ಇಂದು ವಿಧಾನಸೌಧದಲ್ಲಿ ಮಾತನಾಡಿದ ಅವರು, ಡಿಕೆಶಿ ಸಂವಿಧಾನ ಬದಲಾವಣೆ ಬಗ್ಗೆ ಮಾತನಾಡಿ, ಈಗ ನಾನು ಈ ರೀತಿ ಹೇಳೆ ಇಲ್ಲ ಎಂದು ಹೇಳುತ್ತಿದ್ದಾರೆ. ಮಾಧ್ಯಮದಲ್ಲಿ ಎಲ್ಲರೂ ನೋಡಿದ್ದಾರೆ. ಈ ರೀತಿ ಹೇಳಿಕೆ ನೀಡಿರುವ ಡಿಕೆಶಿ ವಿರುದ್ಧ ಕಾಂಗ್ರೆಸ್‌ ಹೈಕಮಾಂಡ್‌ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.

ಮುಸ್ಲಿಂರಿಗೆ ಮೀಸಲಾತಿ ಕೊಡಲು ಸಾಧ್ಯವಿಲ್ಲ ಎಂದು ತಿಳಿದಿದ್ದರೂ ವೋಟ್‌ ಬ್ಯಾಂಕ್‌ಗಾಗಿ ಬಿಲ್‌ ಜಾರಿ ಮಾಡುವ ಮೂಲಕ ಮುಸ್ಲಿಂರಿಗೆ ಕಾಂಗ್ರೆಸ್‌ ಅನ್ಯಾಯ ಮಾಡುತ್ತಿದೆ ಎಂದು ಕಿಡಿಕಾರಿದರು.

 

Tags:
error: Content is protected !!