ಬೆಂಗಳೂರು: ತಮಿಳುನಾಡಿನ ಕರೂರಿನಲ್ಲಿ ಸಂಭವಿಸಿದ ಕಾಲ್ತುಳಿತ ದುರಂತಕ್ಕೆ ಇಡೀ ದೇಶ ಬೆಚ್ಚಿಬಿದ್ದಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಆತಂಕ ಹೊರಹಾಕಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇಂತಹ ಘಟನೆ ದೇಶದ ಬೇರೆ ಕಡೆ ಎಲ್ಲೂ ಆಗಿಲ್ಲ. ದುರ್ಘಟನೆಯಲ್ಲಿ ಚಿಕ್ಕ ಮಕ್ಕಳೂ ಸಾವನ್ನಪ್ಪಿದ್ದಾರೆ. ಈ ದುರಂತಕ್ಕೆ ಇಡೀ ದೇಶ ಬೆಚ್ಚಿಬಿದ್ದಿದೆ ಎಂದು ಹೇಳಿದರು.
ಇದನ್ನೂ ಓದಿ:-ಕಾಲ್ತುಳಿತ ದುರಂತಕ್ಕೆ ತಮಿಳುನಾಡು ಸರ್ಕಾರವೇ ಕಾರಣ: ನಟ ವಿಜಯ್ ಗಂಭೀರ ಆರೋಪ
ಕರೂರು ದುರಂತ ಸಾರ್ವಜನಿಕರಿಗೆ ದೊಡ್ಡ ದಿಗ್ಬ್ರಾಂತಿ ತಂದಿದೆ. ಡಿಎಂಕೆ ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಂಡು ವಿಜಯ್ ತಲೆಗೆ ಪ್ರಕರಣ ಕಟ್ಟುತ್ತಿದೆ. ಅವರು ಸ್ಥಳ ಕೇಳಿದ್ದೆಲ್ಲ? ಅಲ್ಲಿನ ಸರ್ಕಾರ ಅನುಮತಿ ಕೊಟ್ಟಿದ್ದೆಲ್ಲ? ವಿಜಯ್ ಬಂದು ರ್ಯಾಲಿ ಮಾಡಿದ್ರು, ಹೋದ್ರು. ಅವರದ್ದೂ ತಪ್ಪಿದೆ. ವಿಜಯ್ ಕ್ಷಮೆ ಕೇಳಿಲ್ಲ. ಆಸ್ಪತ್ರೆಗೆ ಹೋಗಲಿಲ್ಲ ಎಂದು ಅಸಮಾಧಾನ ಹೊರಹಾಕಿದರು.
ಈ ಪ್ರಕರಣದಲ್ಲಿ ರಾಜ್ಯ ಸರ್ಕಾರದ ಪಾತ್ರವೇ ದೊಡ್ಡದು. ದುರಂತಕ್ಕೆ ರಾಜ್ಯ ಸರ್ಕಾರವೇ ನೇರ ಕಾರಣ. ಕಾರ್ಯಕ್ರಮಕ್ಕೆ ಸರ್ಕಾರ ಅನುಮತಿ ಕೊಟ್ಟಿದೆ. ಕಾನೂನು ಸುವ್ಯವಸ್ಥೆ ಕಾಪಾಡಿಲ್ಲ. ಜನರ ಸಾವಿಗೆ ನೇರ ಕಾರಣ ಡಿಎಂಕೆ ಸರ್ಕಾರ. ಈ ದುರಂತ ಪ್ರಕರಣವನ್ನು ಹಾಲಿ ನ್ಯಾಯಮೂರ್ತಿಗಳಿಂದ ತನಿಖೆ ಮಾಡಿಸಬೇಕು ಎಂದು ಒತ್ತಾಯಿಸಿದರು.
ಕೇರಳದ ಕೋಯಿಕ್ಕೋಡಿನಲ್ಲಿ ಸುದ್ದಿಸಂಸ್ಥೆಯೊಂದಕ್ಕೆ ಸಂದರ್ಶನ ನೀಡಿರುವ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ (ಎಎಸ್‌ಐ) ಮಾಜಿ ಪ್ರಾದೇಶಿಕ ನಿರ್ದೇಶಕರಾದ ಕೆ.ಕೆ. ಮಹಮ್ಮದ್…
ಕಂದಾಯ ಇಲಾಖೆ ಡಿಜಿಟಲ್ ಇ-ಸ್ಟ್ಯಾಂಪ್ ವ್ಯವಸ್ಥೆ ಜಾರಿಗೆ ದಿಟ್ಟ ಹೆಜ್ಜೆ ಇಟ್ಟಿದೆ. ಇದು ನಾಗರಿಕ ಸ್ನೇಹಿಯೂ ಆಗಿದೆ. ಇಂದಿಗೂ ತಾಲ್ಲೂಕು…
ರಾಜ್ಯದಲ್ಲಿ ಇನ್ನು ಮುಂದೆ, ಜಾತಿ, ಧರ್ಮ ಭಾಷೆ, ಧಾರ್ಮಿಕ ಮತ್ತು ಜನಾಂಗೀಯ ನಿಂದನೆ, ಲೈಂಗಿಕ ದೃಷ್ಟಿಕೋನ ಮತ್ತು ಜನ್ಮ ಸ್ಥಳದ…
ಮಲ್ಕುಂಡಿ ಮಹದೇವಸ್ವಾಮಿ ವಿಕಲ್ಪಗಳ ಅಲೆಯ ಮೇಲೆ ಸದಾ ತೇಲಿ ಬರುವ ಸಂಕಲ್ಪ ಬಾಬಾ ಸಾಹೇಬರ ಪಾರ್ಥಿವ ಶರೀರ ಪ್ರಕೃತಿಯಲ್ಲಿ ಲೀನವಾಗುವ…
ಚಾಮರಾಜನಗರ: ಚಾ.ನಗರ-ನಂಜನಗೂಡು ಹೆದ್ದಾರಿಯಲ್ಲಿರುವ ಪಣ್ಯದಹುಂಡಿ ಬಳಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸ್ವಾಧಿನಪಡಿಸಿಕೊಂಡಿರುವ ಭೂಮಿಯ ದರ ನಿಗದಿ ಕಗ್ಗಂಟಿನ ವಿಚಾರ ಅಂತಿಮ…
ಮೈಸೂರು: ಪ್ರಸಿದ್ಧ ಯಾತ್ರಾ ಸ್ಥಳ ಚಾಮುಂಡಿ ಬೆಟ್ಟದ ಸಮಗ್ರ ಅಭಿವೃದ್ಧಿ ಕಾಮಗಾರಿಯು ಕೇಂದ್ರ ಸರ್ಕಾರದ ಪ್ರಸಾದ ಯೋಜನೆಯಡಿ ಜನವರಿ ಮೊದಲ…