r ashok
ಬೆಂಗಳೂರು : ತಮಿಳುನಾಡಿದ ಕರೂರುನಲ್ಲಿ ಶನಿವಾರ ಸಂಜೆ ಸಂಭವಿಸಿದ ಭೀಕರ ಕಾಲ್ತುಳಿತ ದುರಂತಕ್ಕೆ ಸ್ಟಾಲಿನ್ ನೇತೃತ್ವದ ಡಿಎಂಕೆ ಸರ್ಕಾರವೇ ನೇರ ಕಾರಣ ಎಂದ ಕರ್ನಾಟಕದ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಆರೋಪಿಸಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ, ತಮಿಳುನಾಡಿನ ಕರೂರಿನಲ್ಲಾದ ಕಾಲ್ತುಳಿತದ ಘಟನೆಯಿಂದ ಇಡೀ ದೇಶ ಬೆಚ್ಚಿಬಿದ್ದಿದೆ. ವಿಧಾನಸೌಧದ ಮುಂಭಾಗ ಕಾಂಗ್ರೆಸ್ ಸರ್ಕಾರದಿಂದ ನಡೆದಿದ್ದ ಆರ್‌ಸಿಬಿ ಸಂಭ್ರಮಾಚರಣೆಯಲ್ಲಾದ ಕಾಲ್ತುಳಿತ ಘಟನೆಯಿಂದಲೇ ನಾವೆಲ್ಲರೂ ದುಃಖಕ್ಕೊಳಗಾಗಿದ್ದೆವು. ತಮಿಳುನಾಡಿನಲ್ಲಿ ನಡೆದಿರುವ ದುರ್ಘಟನೆ ಇದಕ್ಕಿಂತಲೂ ದೊಡ್ಡದಾಗಿದೆ ಎಂದರು.
ಇದನ್ನೂ ಓದಿ:-ಪೊಲೀಸ್ ನೇಮಕ ವಯೋಮಿತಿ ಹೆಚ್ಚಳದ ಸುಳಿವು ನೀಡಿದ ಪರಮೇಶ್ವರ್
ತಮಿಳುನಾಡಿನ ಡಿಎಂಕೆ ಸರ್ಕಾರ ನಟ ವಿಜಯ್ ವಿರುದ್ಧ ಪ್ರಕರಣ ದಾಖಲಿಸಲು ಮುಂದಾಗಿದೆ. ಡಿಎಂಕೆ ಸರ್ಕಾರ 10 ಸಾವಿರ ಜನರಿಗೆ ಅನುಮತಿ ನೀಡಿದೆ. ಆದರೆ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಿಲ್ಲ. ಈ ಹಿಂದೆಯೇ ಸರ್ಕಾರಕ್ಕೆ ಕೋರ್ಟ್ ಸೂಚನೆ ನೀಡಿದ್ದರೂ, ಅದನ್ನು ಸರ್ಕಾರ ಧಿಕ್ಕರಿಸಿದೆ. ಈ ಅನಾಹುತಕ್ಕೆ ಸ್ಟಾಲಿನ್ ನೇತೃತ್ವದ ಡಿಎಂಕೆ ಸರ್ಕಾರವೇ ನೇರ ಕಾರಣ ಎಂದರು.
ನಟ ವಿಜಯ್ ಕೂಡಲೇ ಕ್ಷಮಾಪಣೆ ಕೇಳಿ, ಆಸ್ಪತ್ರೆಗೆ ಭೇಟಿ ನೀಡಬೇಕಿತ್ತು. ಅದನ್ನು ವಿಜಯ್ ಮಾಡಿಲ್ಲ. ಈ ಪ್ರಕರಣವನ್ನು ನಿವೃತ್ತ ನ್ಯಾಯಮೂರ್ತಿಯ ಸಮಿತಿಗೆ ತನಿಖೆಗೆ ನೀಡಬೇಕೆಂದು ಕರ್ನಾಟಕದ ಬಿಜೆಪಿ ಘಟಕ ಆಗ್ರಹಿಸುತ್ತಿದೆ ಎಂದರು.
1 ಕೆ.ಜಿ.ಬೆಳ್ಳಿಗೆ 3.30 ಲಕ್ಷ ರೂಪಾಯಿ ಹೈದರಾಬಾದ್ : ಚಿನ್ನ ಮತ್ತು ಬೆಳ್ಳಿ ಬೆಲೆಗಳ ಏರಿಕೆ ನಿಲ್ಲುತ್ತಿಲ್ಲ. ಬುಧವಾರ ಹಳದಿ…
ಮೈಸೂರು : ಸೋಮವಾರ ತಡರಾತ್ರಿ ಯುವಕನೋರ್ವನನ್ನು ಐವರ ಗುಂಪು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಉದಯಗಿರಿ…
ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ಚಿರತೆ ದಾಳಿ ಮಾಡಿದ ಪರಿಣಾಮ ವ್ಯಕ್ತಿ ಮೃತಪಟ್ಟಿರುವುದರಿಂದ ಚಿರತೆ…
ಇಡಿ ಬಂಧನದಿಂದ ಬಿಡುಗಡೆ ಕೋರಿ ಮಾಜಿ ಆಯುಕ್ತ ಸಲ್ಲಿಸಿದ್ದ ಅರ್ಜಿ ತಿರಸ್ಕಾರ ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ…
ಬೆಂಗಳೂರು : ಜನವರಿ ಅಂತ್ಯ ಅಥವಾ ಫೆಬ್ರವರಿ 10ರೊಳಗೆ ಮಧುಸೂದನ್ ನಾಯಕ್ ಅವರ ನೇತೃತ್ವದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ…
ಹೆಚ್.ಡಿ.ಕೋಟೆ : ತಾಲ್ಲೂಕಿನ ಕಬಿನಿ ಹಿನ್ನೀರು ಪ್ರದೇಶ, ನಾಗರಹೊಳೆ-ಬಂಡೀಪುರ ಅರಣ್ಯ ವ್ಯಾಪ್ತಿ ಹಾಗೂ ಪರಿಸರ ಸಂವೇದಿ ವಲಯಗಳಲ್ಲಿ ನಿಯಮಗಳನ್ನು ಉಲ್ಲಂಘಿಸಿ…