ರಾಜ್ಯ

ಕರೂರು ಕಾಲ್ತುಳಿತ ದುರಂತಕ್ಕೆ ಡಿಎಂಕೆ ಸರ್ಕಾರವೇ ನೇರ ಹೊಣೆ :‌ ಆರ್.ಅಶೋಕ್‌

ಬೆಂಗಳೂರು : ತಮಿಳುನಾಡಿದ ಕರೂರುನಲ್ಲಿ ಶನಿವಾರ ಸಂಜೆ ಸಂಭವಿಸಿದ ಭೀಕರ ಕಾಲ್ತುಳಿತ ದುರಂತಕ್ಕೆ ಸ್ಟಾಲಿನ್‌ ನೇತೃತ್ವದ ಡಿಎಂಕೆ ಸರ್ಕಾರವೇ ನೇರ ಕಾರಣ ಎಂದ ಕರ್ನಾಟಕದ ವಿರೋಧ ಪಕ್ಷದ ನಾಯಕ ಆರ್.ಅಶೋಕ್‌ ಆರೋಪಿಸಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ, ತಮಿಳುನಾಡಿನ ಕರೂರಿನಲ್ಲಾದ ಕಾಲ್ತುಳಿತದ ಘಟನೆಯಿಂದ ಇಡೀ ದೇಶ ಬೆಚ್ಚಿಬಿದ್ದಿದೆ. ವಿಧಾನಸೌಧದ ಮುಂಭಾಗ ಕಾಂಗ್ರೆಸ್‌ ಸರ್ಕಾರದಿಂದ ನಡೆದಿದ್ದ ಆರ್‌ಸಿಬಿ ಸಂಭ್ರಮಾಚರಣೆಯಲ್ಲಾದ ಕಾಲ್ತುಳಿತ ಘಟನೆಯಿಂದಲೇ ನಾವೆಲ್ಲರೂ ದುಃಖಕ್ಕೊಳಗಾಗಿದ್ದೆವು. ತಮಿಳುನಾಡಿನಲ್ಲಿ ನಡೆದಿರುವ ದುರ್ಘಟನೆ ಇದಕ್ಕಿಂತಲೂ ದೊಡ್ಡದಾಗಿದೆ ಎಂದರು.

ಇದನ್ನೂ ಓದಿ:-ಪೊಲೀಸ್ ನೇಮಕ ವಯೋಮಿತಿ ಹೆಚ್ಚಳದ ಸುಳಿವು ನೀಡಿದ ಪರಮೇಶ್ವರ್

ತಮಿಳುನಾಡಿನ ಡಿಎಂಕೆ ಸರ್ಕಾರ ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲಿಸಲು ಮುಂದಾಗಿದೆ. ಡಿಎಂಕೆ ಸರ್ಕಾರ 10 ಸಾವಿರ ಜನರಿಗೆ ಅನುಮತಿ ನೀಡಿದೆ. ಆದರೆ ಪೊಲೀಸ್‌ ಬಂದೋಬಸ್ತ್‌ ವ್ಯವಸ್ಥೆ ಮಾಡಿಲ್ಲ. ಈ ಹಿಂದೆಯೇ ಸರ್ಕಾರಕ್ಕೆ ಕೋರ್ಟ್‌ ಸೂಚನೆ ನೀಡಿದ್ದರೂ, ಅದನ್ನು ಸರ್ಕಾರ ಧಿಕ್ಕರಿಸಿದೆ. ಈ ಅನಾಹುತಕ್ಕೆ ಸ್ಟಾಲಿನ್‌ ನೇತೃತ್ವದ ಡಿಎಂಕೆ ಸರ್ಕಾರವೇ ನೇರ ಕಾರಣ ಎಂದರು.

ನಟ ವಿಜಯ್‌ ಕೂಡಲೇ ಕ್ಷಮಾಪಣೆ ಕೇಳಿ, ಆಸ್ಪತ್ರೆಗೆ ಭೇಟಿ ನೀಡಬೇಕಿತ್ತು. ಅದನ್ನು ವಿಜಯ್‌ ಮಾಡಿಲ್ಲ. ಈ ಪ್ರಕರಣವನ್ನು ನಿವೃತ್ತ ನ್ಯಾಯಮೂರ್ತಿಯ ಸಮಿತಿಗೆ ತನಿಖೆಗೆ ನೀಡಬೇಕೆಂದು ಕರ್ನಾಟಕದ ಬಿಜೆಪಿ ಘಟಕ ಆಗ್ರಹಿಸುತ್ತಿದೆ ಎಂದರು.

ಆಂದೋಲನ ಡೆಸ್ಕ್

Recent Posts

ಕೊಪ್ಪಳದ ಗವಿಸಿದ್ದೇಶ್ವರ ಸ್ವಾಮಿಗಳಿಂದ ಈ ಬಾರಿ ದಸರಾ ಉದ್ಘಾಟನೆ

ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಈ ಬಾರಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ…

3 hours ago

ಕಾಡಾನೆ ದಾಳಿಗೆ 75 ತೆಂಗಿನ ಮರ ನಾಶ: ಬೆಳೆ ಪರಿಹಾರಕ್ಕೆ ರೈತ ಕುಟುಂಬದ ಮನವಿ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಕಾಡಾನೆಗಳ ನಿರಂತರ ದಾಳಿಯಿಂದ ಕಷ್ಟಪಟ್ಟು ಬೆಳೆದಿದ್ದ ತೆಂಗಿನ ಮರ ಸಂಪೂರ್ಣ ನಾಶವಾಗಿರುವುದರಿಂದ…

9 hours ago

ಅ.29ರಿಂದ ನ.11ರವರೆಗೆ ಹಾಸನಾಂಬಾ ಜಾತ್ರಾ ಮಹೋತ್ಸವ

ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಈ ಕುರಿತು ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಮಾಹಿತಿ…

9 hours ago

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್ ನೀಡಿದ ಸುಪ್ರೀಂಕೋರ್ಟ್‌

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, CWMA ನೀಡಿರುವ ಆದೇಶವನ್ನು ಪಾಲಿಸುವಂತೆ ಸುಪ್ರೀಂಕೋರ್ಟ್‌ ಸೂಚನೆ ನೀಡಿದೆ.…

10 hours ago

ಕೋಟೆ ಟಿಎಪಿಸಿಎಂಎಸ್: ನಾಳೆ ಮೈತ್ರಿ ಪಕ್ಷದ 8 ಸದಸ್ಯರ ರಾಜೀನಾಮೆ ಭವಿಷ್ಯ ನಿರ್ಧಾರ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ಟಿಎಪಿಸಿಎಂಎಸ್‌ನ ಎಂಟು ಜನ ನಿರ್ದೇಶಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಅಂಗೀಕಾರ ಮಾಡಲು ಮತ್ತು…

11 hours ago

ಓದುಗರ ಪತ್ರ: ಸಿಗಲಿ ನ್ಯಾಯ!

ಸಿಗಲಿ ನ್ಯಾಯ! ಮರುಜೀವ ಬಂದಿದೆ ಹೊಸಬೆಳಕು ಮೂಡಿದೆ ಸುಪ್ರೀಂಕೋರ್ಟಿನ ಸೌಜನ್ಯಾ ಪ್ರಕರಣದ ಮರುತನಿಖೆಯ ಆದೇಶ! ಸಲಾಂ ಸುಪ್ರೀಂಗೆ! ನಡೆಯಲಿ ತನಿಖೆ…

17 hours ago